ದೊಡ್ಡಬಳ್ಳಾಪುರ: ಇಲ್ಲಿನ ದೇವಾಂಗ ಮಂಡಲಿ ವತಿಯಿಂದ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಹಾಗೂ ಪದವಿ ಪರೀಕ್ಷೆಗಳಲ್ಲಿ ಉತ್ತಮ ಅಂಕ ಪಡೆದಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಪಿಎಚ್‌ಡಿ ಪದವಿ ಪಡೆದವರಿಗೆ ಅಭಿನಂದನಾ ಸಮಾರಂಭ ನಡೆಯಿತು.
ಕಾರ್‍ಯಕ್ರಮದಲ್ಲಿ ಪಿಎಚ್‌ಡಿ ಪದವಿ ಪಡೆದ ಡಾ.ನಿರ್ಮಲ ಮೋಹನ್, ಡಾ.ಸುಪ್ರಿಯಾ.ಎಚ್.ಎಸ್, ಡಾ.ಎಂ.ಎಸ್.ರಾಮು ಹಾಗೂ ವಿವಿಧ ಪದವಿಗಳಲ್ಲಿ ರ್‍ಯಾಂಕ್ ಪಡೆದ ಡಾ.ಶ್ರೀನಿವಾಸ.ಎನ್.ವಿ, ಡಾ.ತೇಜಸ್ವಿನಿ.ಆರ್, ಡಾ.ವೈಷ್ಣವಿ.ಕೆ.ಜೆ.ಎನ್, ಹರ್ಷಿತ್.ಎಚ್.ಸಿ ಅವರನ್ನು ಅಭಿನಂದಿಸಲಾಯಿತು. ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಲಾಯಿತು. ನಗರಸಭೆಗೆ ನಾಮನಿರ್ದೇಶಿತ ಸದಸ್ಯ ಅಖಿಲೇಶ್, ಮಜರಾಹೊಸಹಳ್ಳಿ ಗ್ರಾಪಂ ಅಧ್ಯಕ್ಷೆ ಲಕ್ಷ್ಮೀ ನಾರಾಯಣಮೂರ್ತಿ ಅವರನ್ನು ಸನ್ಮಾನಿಸಲಾಯಿತು.
ಕಾರ್‍ಯಕ್ರಮದಲ್ಲಿ ದೇವಾಂಗ ಮಂಡಲಿ ಗೌರವ ಕಾರ್ಯದರ್ಶಿ ಎಂ.ಜಿ.ಅಮರನಾಥ್, ಉಪಾಧ್ಯಕ್ಷರಾದ ಬಿ.ಜಿ.ಅಮರನಾಥ್, ಪಿ.ಗೋಪಾಲ್, ಸಹ ಕಾರ್ಯದರ್ಶಿ ಎ.ನಟರಾಜ್, ಖಜಾಂಚಿ ಎಚ್.ವಿ.ಅಖಿಲೇಶ್ ಹಾಗೂ ನಿರ್ದೇಶಕರು ಭಾಗವಹಿಸಿದ್ದರು.