ವ್ಯಕ್ತಿತ್ಯ ವಿಕಸನಕ್ಕೆ ಶಿಕ್ಷಣ ಅಗತ್ಯ

KannadaprabhaNewsNetwork |  
Published : Mar 25, 2024, 12:45 AM IST
ಸುದ್ದಿಚಿತ್ರ  ೧ ನಗರ ಠಾಣೆ ಆರಕ್ಷಕ ಉಪನಿರೀಕ್ಷಕರಾದ ವೇಣುಗೋಪಾಲ್  ರವರಿಗೆ  ಶಾಲಾಆಡಳಿತ ಮಂಡಳಿಯಿಂದ ಸನ್ಮಾನಿಸಿದರು | Kannada Prabha

ಸಾರಾಂಶ

ವ್ಯಕ್ತಿಯನ್ನು ಸುಶಿಕ್ಷಿತರನ್ನಾಗಿ ಮಾಡುವ ಬೌದ್ಧಿಕ ಶಕ್ತಿಯನ್ನು ವಿಕಸನಗೊಳಿಸುವ ಶಿಕ್ಷಣವನ್ನು ಪ್ರತಿಯೊಬ್ಬರು ಪಡೆಯಬೇಕು. ಶಿಕ್ಷಣದಿಂದ ಮಾತ್ರ ಮನುಷ್ಯನ ವಿಕಾಸ ಸಾಧ್ಯ, ಶಿಕ್ಷಣ ಇಲ್ಲದೇ ಯಾವುದೇ ವ್ಯಕ್ತಿಯ ವ್ಯಕ್ತಿತ್ವ ರೂಪುಗೊಳ್ಳಲು ಅಸಾಧ್ಯ.

ಕನ್ನಡಪ್ರಭ ವಾರ್ತೆ ಶಿಡ್ಲಘಟ್ಟ

ಯಾರೇ ಆಗಲಿ ವಿದ್ಯಾರ್ಥಿ ಜೀವನದಲ್ಲಿ ಅಮೂಲ್ಯವಾದ ಸಮಯವನ್ನು ವ್ಯರ್ಥ ಮಾಡಿಕೊಳ್ಳದೇ ಶ್ರದ್ಧೆ ಏಕಾಗ್ರತೆಯಿಂದ ಶ್ರಮಪಟ್ಟು ಓದಿದರೆ ಭವಿಷ್ಯದಲ್ಲಿ ಉನ್ನತ ಸ್ಥಾನಕ್ಕೆ ಏರುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ನಗರದ ಶ್ರೀ ಸರಸ್ವತಿ ವಿದ್ಯಾಸಂಸ್ಥೆ ಅಧ್ಯಕ್ಷ ಎನ್. ಶ್ರೀಕಾಂತ್ ಹೇಳಿದರು.ನಗರದ ಶ್ರೀ ಸರಸ್ವತಿ ವಿದ್ಯಾಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ 47ನೇ ವಾರ್ಷಿಕೋತ್ಸವ ಹಾಗೂ ಸರಸ್ವತಿ ಪೂಜಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರಸ್ವತಿಯನ್ನು ಶ್ರದ್ಧೆಯಿಂದ ಆರಾಧಿಸಿದರೆ ಶಿಕ್ಷಣ ಒಲಿಯುತ್ತದೆ ಎಂದು ವಿದ್ಯಾರ್ಥಿ ಪೋಷಕರಿಗೆ ಸಲಹೆ ನೀಡಿದರು.

ಶಿಕ್ಷಣದಿಂದ ವ್ಯಕ್ತಿತ್ವ ವಿಕಾಸ

ವ್ಯಕ್ತಿಯನ್ನು ಸುಶಿಕ್ಷಿತರನ್ನಾಗಿ ಮಾಡುವ ಬೌದ್ಧಿಕ ಶಕ್ತಿಯನ್ನು ವಿಕಸನಗೊಳಿಸುವ ಶಿಕ್ಷಣವನ್ನು ಪ್ರತಿಯೊಬ್ಬರು ಪಡೆಯಬೇಕು. ಶಿಕ್ಷಣದಿಂದ ಮಾತ್ರ ಮನುಷ್ಯನ ವಿಕಾಸ ಸಾಧ್ಯ, ಶಿಕ್ಷಣ ಇಲ್ಲದೇ ಯಾವುದೇ ವ್ಯಕ್ತಿಯ ವ್ಯಕ್ತಿತ್ವ ರೂಪುಗೊಳ್ಳಲು ಅಸಾಧ್ಯ. ಓದಿನಲ್ಲಿ ಯಶಸ್ಸು ಕಾಣಬೇಕಾದರೆ ಆತ್ಮವಿಶ್ವಾಸ ಬಹಳ ಮುಖ್ಯ. ಜೊತೆಗೆ ಕಠಿಣ ಪರಿಶ್ರಮ ಅಗತ್ಯ ಎಂದು ಹೇಳಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಶುಭ ಕೋರಿದರು.

ನಗರ ಠಾಣೆ ಆರಕ್ಷಕ ಉಪನಿರೀಕ್ಷಕರಾದ ವೇಣುಗೋಪಾಲ್ ಮಾತನಾಡಿ, ಶಾಲೆಗಳಿಗೆ ಬರುವ ಮಕ್ಕಳ ಸುರಕ್ಷತೆ ಬಗ್ಗೆ ಶಿಕ್ಷಕರು, ಪೋಷಕರು ಗಮನ ಹರಿಸಬೇಕೆಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಜಿಪಂನ ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ಆಂಜನೇಯ, ಕಾರ್ಯದರ್ಶಿ ಆರ್. ನಾಗಲಕ್ಷ್ಮಿ, ಪ್ರೌಢಶಾಲಾ ಮುಖ್ಯ ಶಿಕ್ಷಕ ಎಸ್. ವಿ. ರಘು, ಕನ್ನಡ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಎಂ. ವೆಂಕಟರೆಡ್ಡಿ, ಆಂಗ್ಲ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ವಿ. ರುಕ್ಮಿಣಿ, ನರ್ಸರಿ ಶಾಲಾ ಮುಖ್ಯ ಶಿಕ್ಷಕಿ ಬಿ. ಮಂಜುಳಾ, ಮತ್ತಿತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!