ಶಿಕ್ಷಣ ಪಡೆಯುವುದು ಪ್ರತಿಯೊಬ್ಬರ ಹಕ್ಕು: ನ್ಯಾ.ಆರ್.ಎಸ್.ಜೀತು

KannadaprabhaNewsNetwork |  
Published : May 09, 2026, 01:15 AM IST
್ಿಿ | Kannada Prabha

ಸಾರಾಂಶ

ಶೃಂಗೇರಿಶಿಕ್ಷಣ, ಸಂಸ್ಕೃತಿ ಇಲ್ಲದ ಮನುಷ್ಯನಿಗೆ ಸಮಾಜದಲ್ಲಿ ಬೆಲೆ ಇಲ್ಲ. ಇಂದು ಪ್ರತಿಯೊಂದು ಕ್ಷೇತ್ರದಲ್ಲಿಯೂ ಶಿಕ್ಷಣ ಪಡೆದ ವ್ಯಕ್ತಿಗಳಿಗೆ ಮಾತ್ರ ಗೌರವ ಮನ್ನಣೆ ಸಿಗುತ್ತಿದೆ. ಆದ್ದರಿಂದ ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು. ಶಿಕ್ಷಣ ಪಡೆಯುವುದು ಪ್ರತಿಯೊಬ್ಬರ ಹಕ್ಕು ಎಂದು ಶೃಂಗೇರಿ ಸಿವಿಲ್ ಹಾಗೂ ಜೆಎಂಎಫ್ ಸಿ ನ್ಯಾಯಾಲಯದ ನ್ಯಾಯಾಧೀಶ ಆರ್.ಎಸ್.ಜೀತು ಹೇಳಿದರು.

ಜೆಸಿಬಿಎಂ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟನೆ

ಕನ್ನಡಪ್ರಭ ವಾರ್ತೆ ಶೃಂಗೇರಿ

ಶಿಕ್ಷಣ, ಸಂಸ್ಕೃತಿ ಇಲ್ಲದ ಮನುಷ್ಯನಿಗೆ ಸಮಾಜದಲ್ಲಿ ಬೆಲೆ ಇಲ್ಲ. ಇಂದು ಪ್ರತಿಯೊಂದು ಕ್ಷೇತ್ರದಲ್ಲಿಯೂ ಶಿಕ್ಷಣ ಪಡೆದ ವ್ಯಕ್ತಿಗಳಿಗೆ ಮಾತ್ರ ಗೌರವ ಮನ್ನಣೆ ಸಿಗುತ್ತಿದೆ. ಆದ್ದರಿಂದ ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು. ಶಿಕ್ಷಣ ಪಡೆಯುವುದು ಪ್ರತಿಯೊಬ್ಬರ ಹಕ್ಕು ಎಂದು ಶೃಂಗೇರಿ ಸಿವಿಲ್ ಹಾಗೂ ಜೆಎಂಎಫ್ ಸಿ ನ್ಯಾಯಾಲಯದ ನ್ಯಾಯಾಧೀಶ ಆರ್.ಎಸ್.ಜೀತು ಹೇಳಿದರು.

ಪಟ್ಟಣದ ಜೆಸಿಬಿಎಂ ಕಾಲೇಜಿನಲ್ಲಿ ತಾಲೂಕು ಕಾನೂನು ಸೇವಾ ಸಮೀತಿ, ರೋಟರಿ, ಇನ್ನರ್ ವ್ಹೀಲ್, ವಕೀಲರ ಸಂಘದ ಸಹಯೋಗದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವಿದ್ಯಾವಂತರಿಗೆ ಎಲ್ಲೆಡೆ ಗೌರವ ಸಿಗುತ್ತದೆ. ವಿದ್ಯೆಯು ವಿನಯ, ವಿವೇಕ, ಶಿಸ್ತು, ಪ್ರಾಮಾಣಿಕತೆ ಮೂಡಿಸುತ್ತದೆ. ಶಿಕ್ಷಣ ಪಡೆಯುವುದು ಪ್ರತಿ ವ್ಯಕ್ತಿಯ ಮೂಲ ಕರ್ತವ್ಯ. ಯಾರು ಶಿಕ್ಷಣದಿಂದ ವಂಚಿತರಾಗಬಾರದು.

ವಿದ್ಯಾರ್ಥಿಗಳು ಕಲಿಕೆ ದಿನಗಳಲ್ಲಿ ಉದಾಸಿನ, ನಿರ್ಲಕ್ಷ್ಯ ತೊರಬಾರದು. ಸಮಯ ವ್ಯರ್ಥಗೊಳಿಸದೇ ಸದ್ಭಳಕೆ ಮಾಡಿಕೊಂಡು ಸತತ ಅಧ್ಯಯನದಲ್ಲಿ ತೊಡಗಿ ನಿರಂತರ ಪರಿಶ್ರಮ ಪಡಬೇಕು. ಏಕಾಗ್ರತೆ, ಮನಸ್ಸಿನ ಮೇಲೆ ನಿಯಂತ್ರಣ ಸಾದಿಸಬೇಕು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವುದು ಅಗತ್ಯ. ಅವರ ಸಾಧನೆಗೆ ಇನ್ನಷ್ಟು ಸ್ಪೂರ್ತಿ ನೀಡಿದಂತಾಗುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಎಸ್ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಶೇ 95 ಕ್ಕಿಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ನಿವೃತ್ತಿ ಹೊಂದುತ್ತಿರುವ ಶೃಂಗೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಭಾರತಿ ಯವರನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಎಂ.ಸ್ವಾಮಿ, ರೋಟರಿ ಸಂಸ್ಥೆಯ ಎ.ವಿ.ಸುಬ್ರಮಣ್ಯ, ಇನ್ನರ್ ವ್ಹೀಲ್ ನ ಮಂಜುಳಾ,ವಕೀಲರ ಸಂಘದ ಮಹೇಶ್, ಬಿಇಒ ವರಲಕ್ಷಮಿ,ಪ್ರಿಯದರ್ಶಿನಿ,ರತ್ನ ಮತ್ತಿತರರು ಇದ್ದರು.

8 ಶ್ರೀ ಚಿತ್ರ 1-

ಶೃಂಗೇರಿ ಪಟ್ಟಣದ ಜೆಸಿಬಿಎಂ ಕಾಲೇಜಿನಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ನ್ಯಾ.ಆರ್.ಎಸ್.ಜೀತು ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗುರಿ ಸಾಧನೆಗೆ ಶ್ರಮ, ಸಮಯ ಅಗತ್ಯ: ಡಾಲಿ ಧನಂಜಯ್
ಪೂರ್ಣಕುಂಭ ಹೊತ್ತು ಸಾಗಿದ ಸೌಭಾಗ್ಯ