ಹೊನ್ನಾವರ: ಎಂಪಿಇ ಸೊಸೈಟಿಯ ಸೆಂಟ್ರಲ್ ಸ್ಕೂಲ್ ವಾರ್ಷಿಕೋತ್ಸವ ಎಸ್‌ಡಿಎಂ ಕಾಲೇಜಿನ ಡಾ. ಎನ್.ಆರ್. ನಾಯಕ ಬಯಲು ರಂಗಮಂದಿರದಲ್ಲಿ ನಡೆಯಿತು.
ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಮಾತನಾಡಿ, ಪ್ರತಿಯೊಬ್ಬರಿಗೂ ಶಿಕ್ಷಣ ಮುಖ್ಯ. ಶಿಕ್ಷಣಕ್ಕೆ ಬೇಕಾಗುವ ಸಹಾಯ, ಸಹಕಾರ ಮಾಡುತ್ತೇನೆ ಎಂದರು. ಸಂಸ್ಥೆಯವರು ಕಾಲೇಜಿನ ರಸ್ತೆ ಬಗ್ಗೆ ಬೇಡಿಕೆ ಇಟ್ಟಿದ್ದಾರೆ. ಅದನ್ನು ಸಹ ಮಾಡಿಕೊಡುತ್ತೇನೆ. ಶಿಕ್ಷಣ ಸಂಸ್ಥೆ ಎಂದರೆ ದೇವಸ್ಥಾನ. ಇಲ್ಲಿ ಯಾವುದಕ್ಕೂ ಕೊರತೆ ಆಗಬಾರದು ಎಂದರು.ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕಾಲೇಜಿನ ಪೂರ್ವ ವಿದ್ಯಾರ್ಥಿ, ಉದ್ಯಮಿ ಶರತ ನಾಯ್ಕ, ಈ ಸಂಸ್ಥೆ ಸಾವಿರಾರು ವಿದ್ಯಾರ್ಥಿಗಳಿಗೆ ಅಕ್ಷರಧಾಮವಾಗಿ, ಅವರ ಜೀವನ ಸುಗಮಗೊಳಿಸಿದೆ ಎಂದು ಹೇಳಿದರು.
ಎಂಪಿಇ ಸೊಸೈಟಿ ಅಧ್ಯಕ್ಷ ಕೃಷ್ಣಮೂರ್ತಿ ಭಟ್ ಮಾತನಾಡಿ, ಸಂಸ್ಥೆ ನಡೆಸಬೇಕಾದರೆ ಅದಕ್ಕೆ ಹಣವಿರಬೇಕು. ಹಾಗಾಗಿ ನಾವು ಪೂರ್ವ ವಿದ್ಯಾರ್ಥಿಗಳಿಂದ ಸಹಾಯ ಪಡೆದು ಒಂದು ಹೊಸ ವಿದ್ಯಾಸಂಜೀವಿನಿ ಎನ್ನುವ ಯೊಜನೆ ರೂಪಿಸಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ಸಹಾಯವಾಗುತ್ತದೆ ಎಂದರು.ಸಚಿವ ಮಂಕಾಳ ವೈದ್ಯ ಅವರನ್ನು ಸನ್ಮಾನಿಸಲಾಯಿತು. ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತಮ ಅಂಕ ಗಳಿಸಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಇದೇ ವೇಳೆ ಸನ್ಮಾನಿಸಲಾಯಿತು. ಎಂಪಿಇ ಸೊಸೈಟಿಯ ಸೆಂಟ್ರಲ್ ಸ್ಕೂಲ್‌ನ ಪ್ರಾಂಶುಪಾಲೆ ವಿಜಯಲಕ್ಷ್ಮಿ ನಾಯ್ಕ ಹಾಜರಿದ್ದರು. ಆನಂತರ ಶಾಲಾ ಮಕ್ಕಳಿಂದ ವಿವಿಧ ಮನರಂಜನಾ ಕಾರ್ಯಕ್ರಮ ನಡೆಯಿತು.ಮಕ್ಕಳಿಗೆ ಬಾಲ್ಯದಲ್ಲೇ ಸಂಸ್ಕಾರ ಕಲಿಸಿ
ಕನ್ನಡಪ್ರಭ ವಾರ್ತೆ ಭಟ್ಕಳಇಲ್ಲಿನ ವಿದ್ಯಾಂಜಲಿ ಪಬ್ಲಿಕ್ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ನಡೆಯಿತು.ಸರ್ಕಾರಿ ಆಸ್ಪತ್ರೆಯ ಮಕ್ಕಳ ತಜ್ಞ ಡಾ. ಸುರಕ್ಷಿತ್ ಶೆಟ್ಟಿ ಮಾತನಾಡಿ, ಪಾಲಕರು ಹಾಗೂ ಶಿಕ್ಷಕರು ಬಾಲ್ಯದಲ್ಲಿಯೇ ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ನೀಡಿದರೆ ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ ಎಂದರು.ಜಗನ್ನಾಥ ನಾಡಿಗೇರ ಮಾತನಾಡಿ, ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಾಲಕರು, ಶಿಕ್ಷಕರು, ಬಂಧುಮಿತ್ರರು, ನೆರೆಹೊರೆಯವರು ಹಾಗೂ ಸುತ್ತಮುತ್ತಲಿನ ವಾತಾವರಣ ಬಹುಮುಖ್ಯ ಪಾತ್ರವನ್ನು ನಿರ್ವಹಿಸುತ್ತದೆ ಎಂದರು.
ಭಟ್ಕಳ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷ ಡಾ. ಸುರೇಶ ನಾಯಕ ಅವರು ಶಾಲೆಯ ಶಿಕ್ಷಕರ ಮತ್ತು ಪೋಷಕರ ಪರಿಶ್ರಮವನ್ನು ಶ್ಲಾಘಿಸಿದರು.ಪ್ರಾಂಶುಪಾಲ ರಾಘವೇಂದ್ರ ಕಾಮತ ಅವರು ಶಾಲೆಯ ವಾರ್ಷಿಕ ವರದಿ ಓದಿದರು. ಸಭಾ ಕಾರ್ಯಕ್ರಮದ ಬಳಿಕ ಅದ್ಧೂರಿಯಾಗಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಎಲ್ಲರ ಮನರಂಜಿಸಿತು.ಪೊಟೋ ಪೈಲ್ : 24ಬಿಕೆಲ್1ಭಟ್ಕಳದ ವಿದ್ಯಾಂಜಲಿ ಪಬ್ಲಿಕ್ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನವನ್ನು ಗಣ್ಯರು ಉದ್ಘಾಟಿಸಿದರು.