ಪ್ರತಿಭೆ ಗುರುತಿಸಲು ಶಿಕ್ಷಣ ಅಗತ್ಯ: ಅಂತೋಣಿ ವಿಜಯನ್

KannadaprabhaNewsNetwork |  
Published : Aug 30, 2025, 01:01 AM IST
ಚಿತ್ರ :  29ಎಂಡಿಕೆ4 : ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.  | Kannada Prabha

ಸಾರಾಂಶ

ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಮತ್ತು ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘ ಆಶ್ರಯದಲ್ಲಿ ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಮತ್ತು 2025-26ನೇ ಸಾಲಿನ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಟುವಟಿಕೆ ನಡೆಯಿತು.

ಪ್ರತಿಭಾ ಪುರಸ್ಕಾರ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಕನ್ನಡಪ್ರಭ ವಾರ್ತೆ ಮಡಿಕೇರಿ

ಕನ್ನಡಿಯನ್ನು ಕಿಟಕಿಯನ್ನಾಗಿಸುವಂತ ಪ್ರಕ್ರಿಯೆ ಶಿಕ್ಷಣ. ನಮ್ಮೊಳಗಿರುವ ಪ್ರತಿಭೆಯನ್ನು ಗುರುತಿಸಲು ಶಿಕ್ಷಣ ಅಗತ್ಯ ಎಂದು ಕೊಡಗು ಜಿಲ್ಲಾ ಪ್ರಾಂಶುಪಾಲ ಸಂಘದ ಖಜಾಂಚಿ ಅಂತೋಣಿ ವಿಜಯನ್ ಅಲ್ವಾರೀಸ್ ಹೇಳಿದರು.ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಮತ್ತು ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘ ಆಶ್ರಯದಲ್ಲಿ ಶುಕ್ರವಾರ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ಪ್ರತಿಭಾ ಪುರಸ್ಕಾರ ಮತ್ತು 2025-26ನೇ ಸಾಲಿನ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.ಶಿಕ್ಷಣ ಇಲಾಖೆ ಹಮ್ಮಿಕೊಳ್ಳುತ್ತಿರುವ ಎಲ್ಲ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಲು ಪ್ರಾಂಶುಪಾಲ ಸಂಘ ಬಹಳ ಸಹಕಾರಿಯಾಗಿರುವುದು ಸ್ಮರಣೀಯ. ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಅವರನ್ನು ಸನ್ಮಾನಿಸುವುದು ಅತ್ಯಂತ ಗೌರವಯುತ ಕಾರ್ಯ. ಹಾಗೆಯೇ ಪೋಷಕರು ಅದಕ್ಕಾಗಿ ಶ್ರಮಿಸುತ್ತಿರುವುದು ಕೂಡ ಗಮನಾರ್ಹವೆಂದು ತಿಳಿಸಿದರು.ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ತನ್ನ ಸಂತೋಷವನ್ನು ತ್ಯಾಗ ಮಾಡಿ ಸಮಯಕ್ಕೆ ಸರಿಯಾಗಿ ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸಿ ವಿದ್ಯಾರ್ಥಿಗಳನ್ನು ಹಂತ-ಹಂತವಾಗಿ ತಯಾರು ಮಾಡುತ್ತಿರುವ ಪೋಷಕರಿಗೆ ನಮನ ಎಂದರು.ಇಲಾಖೆ ವತಿಯಿಂದ ಯುವ ಸಂಸತ್ತು ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ. ಇದರಲ್ಲಿ ರಾಜಕೀಯ ಪ್ರವೃತ್ತಿ ಮೇಲ್ಮನೆ ಕೆಳಮನೆ ಕಾರ್ಯ ಹೇಗೆ ನಿರ್ವಹಿಸುತ್ತದೆ ಎಂದು ತಿಳಿಸಿಕೊಡಲಾಗುತ್ತದೆ. ಇದರ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕೆಂದು ತಿಳಿಸಿದರು.ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಂ.ಎಲ್.ಚಿದಾನಂದ ಕುಮಾರ್ ಮಾತನಾಡಿ, ಉತ್ತಮ ಫಲಿತಾಂಶಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ಪ್ರತಿಯೊಬ್ಬ ಪ್ರಾಧ್ಯಾಪಕರಿಗೆ ವಂದನೆ ಸಲ್ಲಿಸಿದರು.ವಿದ್ಯಾರ್ಥಿಗಳ ಜೀವನದಲ್ಲಿ ಪ್ರಾಧ್ಯಾಪಕರಲ್ಲದೆ ಪೋಷಕರ ಪ್ರಯತ್ನವು ಮುಖ್ಯ ಪಾತ್ರ ವಹಿಸಿದೆ. ಕೊಡಗಿನಲ್ಲಿ ಮಳೆಯಿಂದಾಗಿ ರಜೆ ಇದ್ದರೂ ಫಲಿತಾಂಶದಲ್ಲಿ ವ್ಯತ್ಯಾಸವಾಗಲಿಲ್ಲ. ಈ ಬಾರಿ ಕೊಡಗು ನಾಲ್ಕನೇ ಸ್ಥಾನ ಪಡೆದಿದ್ದರೂ ಮುಂದಿನ ದಿನಗಳಲ್ಲಿ ಮೊದಲನೇ ಸ್ಥಾನ ಪಡೆಯುವಂತಾಗಬೇಕು ಎಂದು ಕೋರಿದರು.

ಸಾಧಕರಿಗೆ ಸನ್ಮಾನ:

ಅರುಣ ಪದವಿ ಪೂರ್ವ ಕಾಲೇಜಿನಲ್ಲಿ 33 ವರ್ಷ ಕರ್ತವ್ಯ ಸಲ್ಲಿಸಿ ನಿವೃತ್ತಿ ಹೊಂದಿದ ದಾಯನ ಎಸ್. ರಾಮಕೃಷ್ಣ ಅವರನ್ನು ಸನ್ಮಾನಿಸಲಾಯಿತು. 2024-25ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಕಲಾ ವಿಭಾಗದ ಅಫಿಯಾ ಶರೀಫ್, ನವನಿದನ್ ಎಂ.ಆರ್., ಎಸ್. ಸಾಜಿದ, ಮೇಘಶ್ರೀ ಕೆ., ವಾಣಿಜ್ಯ ವಿಭಾಗದ ಡಿಂಪಲ್ ತಮ್ಮಯ್ಯ, ಶಿವಾನಿ ಕೆ.ಎಸ್., ನಿಕ್ಷಾ ವಿ.ಎಸ್., ಸೃಜನ ಡಿ.ಡಿ., ವಿಜ್ಞಾನ ವಿಭಾಗದ ವೈಷ್ಣವಿ ಟಿ.ವಿ., ಪನ್ಯಪನ್ನಮ್ಮ ಎ.ಆರ್., ಚಿತ್ರ ಪಿ., ಲಿಜಾ ಜೇಮ್ಸ್, ಮಮತಾ ಎಂ.ಪಿ., ಸಾನಿಕ ಜಾಸ್ಮಿನ್ ಪಿ., ದೀಕ್ಷಾ ದೇಚಮ್ಮ ಅವರಿಗೆ ನಗದು ಬಹುಮಾನ ವಿತರಿಸಲಾಯಿತು.

ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ವೈಷ್ಣವಿ ಹಾಗೂ ಚಿತ್ರಾ ಮಾತನಾಡಿದರು.

ಕಾಲೇಜುಗಳಿಗೆ ಗೌರವ:

ಶೇ.100 ಫಲಿತಾಂಶ ಪಡೆದಿರುವ ಕೊಡಗು ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳಾದ ಪದವಿ ಪೂರ್ವ ಕಾಲೇಜು ಗೋಣಿಕೊಪ್ಪ, ಸಂತ ಅಂತೋಣಿ ಪದವಿ ಪೂರ್ವ ಕಾಲೇಜು ಪೊನ್ನಂಪೇಟೆ, ಕೂರ್ಗ್ ಇನ್‌ಸ್ಟಿಟ್ಯೂಟ್‌ ಆಫ್ ಪದವಿ ಪೂರ್ವ ಕಾಲೇಜು ಹಳ್ಳಿಗಟ್ಟು, ಐಶ್ವರ್ಯ ಸಂಯುಕ್ತ ಪದವಿ ಪೂರ್ವ ಕಾಲೇಜು ಕುಶಾಲನಗರ, ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ ಕೊಡ್ಲಿಪೇಟೆ, ಲಯನ್ಸ್ ಪದವಿ ಪೂರ್ವ ಕಾಲೇಜು ಗೋಣಿಕೊಪ್ಪ, ಅಟಲ್ ಬಿಹಾರಿ ವಾಜಪೇಯಿ ವಸತಿ ಪದವಿ ಪೂರ್ವ ಕಾಲೇಜು ಭಾಗಮಂಡಲದ ಪ್ರಾಂಶುಪಾಲರಿಗೆ ಸ್ಮರಣಿಕೆ ವಿತರಿಸಲಾಯಿತು.ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಪಿ.ಆರ್.ವಿಜಯನ್, ಪ್ರಾಂಶುಪಾಲರ ಸಂಘದ ಕಾರ್ಯದರ್ಶಿ ಎನ್.ಕೆ. ಜ್ಯೋತಿ, ಪ್ರಾಂಶುಪಾಲ ಸಂಘ ಅಧ್ಯಕ್ಷರಾದ ಪಿ.ಎಂ.ದೇವಕಿ ಮತ್ತಿತರರು ಇದ್ದರು.

ದಿವ್ಯ ಮತ್ತು ತಂಡದವರು ಪ್ರಾರ್ಥಿಸಿದರು. ಪ್ರಾಧ್ಯಾಪಕ ದಿವಾಕರ್ ನಿರೂಪಿಸಿದರು. ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಪಿ.ಎಂ.ದೇವಕಿ ಅವರು ಸ್ವಾಗತಿಸಿದರು. ಪ್ರಾಂಶುಪಾಲರ ಸಂಘದ ಕಾರ್ಯದರ್ಶಿಗಳಾದ ಎನ್.ಕೆ.ಜ್ಯೋತಿ ವಂದಿಸಿದರು.

PREV

Recommended Stories

ಜಿಎಸ್ಟಿ ಸ್ಲ್ಯಾಬ್‌ ಕಡಿತದಿಂದ 2.5 ಲಕ್ಷ ಕೋಟಿ ರು. ನಷ್ಟ
ಯುದ್ಧಪೀಡಿತ ಉಕ್ರೇನಿಯರಿಗೆ ಆರ್ಟ್ ಆಫ್ ಲಿವಿಂಗ್ ಆಸರೆ