ಉಳ್ಳಾಲ: ಸಮಾಜದಲ್ಲಿ ಅನೇಕ ಧರ್ಮ ಜಾತಿಗಳಿವೆ. ವೈವಿಧ್ಯತೆಯಲ್ಲಿ ಏಕತೆ ಸಾಧಿಸಬೇಕು ಎಂದು ಜನರಿಗೆ ಹೇಳುತ್ತೇವೆ. ವೈವಿಧ್ಯತೆಯಲ್ಲಿ ಏಕತೆ ಇಲ್ಲದೇ ಹೋದರೆ ಪ್ರಯೋಜನವಿಲ್ಲ. ವೈಚಾರಿಕತೆ, ವೈಜ್ಞಾನಿಕತೆ ಇರುವ ಹಾಗೂ ಜಾತಿ ವ್ಯವಸ್ಥೆಗೆ ಪರಿಹಾರ ರೂಪದಲ್ಲಿರುವ ವಿದ್ಯೆ ಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಹೇಳಿದ್ದಾರೆ.
ಕೊಣಾಜೆ ನಡುಪದವಿನ ಪಿ.ಎ.ಇಂಜಿನಿಯರಿಂಗ್ ಕಾಲೇಜಿನಲ್ಲಿ ಬುಧವಾರ ಪೇಸ್ ಎಐ ಉನ್ನತ ಅಧ್ಯಯನ ಕೇಂದ್ರದ ಶಿಲಾನ್ಯಾಸ, ಫೇಸ್ ಟ್ರೈಡ್ ಪಾರ್ಕ್ ಮತ್ತು ಫೇಸ್ ಸ್ಪೋರ್ಟ್ಸ್ ಅರೇನಾ ಶಿಲಾನ್ಯಾಸ ಹಾಗೂ ಪೇಸ್ ಕೇರ್ಸ್ ಸಮುದಾಯ ಸೇವೆ ಯೋಜನೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್, ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ , ಮುಖ್ಯ ಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಾಸೀರ್ ಅಹ್ಮದ್, ಶಾಸಕ ಅಶೋಕ್ ರೈ, ಯೆನೆಪೋಯ ವಿವಿಯ ಕುಲಾಧಿಪತಿ ಯೆನೆಪೋಯ ಡಾ.ಅಬ್ದುಲ್ಲಾ ಕುಂಞಿ, ಎಂಎಲ್‌ಸಿ ಮಂಜುನಾಥ ಭಂಡಾರಿ, ಟ್ರಸ್ಟಿಗಳಾದ ಲತೀಫ್ ಇಬ್ರಾಹಿಂ, ಝುಬೈರ್ ಇಬ್ರಾಹಿಂ, ಸಿ.ಎಚ್ ಸೆಂಟರ್ ಚಟರಿಟೇಬಲ್ ಟ್ರಸ್ಟ್ ಕಾಸರಗೋಡು ಅಧ್ಯಕ್ಷ ಪಿ.ಎ.ಅಬೂಬಕ್ಕರ್ ಹಾಜಿ, ಪಿಎ ಸಮೂಹ ಸಂಸ್ಥೆಯ ಹಣಕಾಸು ನಿರ್ದೇಶಕ ಕೆ.ಅಹ್ಮದ್ ಕುಟ್ಟಿ, ಪೇಸ್ ಗ್ರುಪ್ ದುಬಾಯಿ ನಿರ್ದೇಶಕ ಆಸೀಫ್ ಅಹ್ಮದ್, ಆಡಳತ ಮಾಜಿ ನಿರ್ದೆಶಕ ಕೆ.ಎಂ.ಹನೀಫ್ , ಕರ್ನಾಟಕ ಅಲೈಡ್ ಹೆಲ್ತ್ ಕೇರ್ ಕೌನ್ಸಿಲ್ ನ ನಿರ್ದೇಶಕ ಯು.ಟಿ.ಇಫ್ತೀಕಾರ್ ಮೊದಲಾದವರು ಉಪಸ್ಥಿತರಿದ್ದರು.ಪಿಎ ಎಜ್ಯುಕೇಶನ್ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಪಿ.ಎ.ಅಬ್ದುಲ್ಲಾ ಇಬ್ರಾಹಿಂ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಿ.ಎ.ಪದವಿ ಕಾಲೇಜು ಪ್ರಾಂಶುಪಾಲ ಡಾ. ಸರ್ಫ್ರಾಝ್ ಹಾಸಿಂ ಸ್ವಾಗತಿಸಿದರು. ಉಪಪ್ರಾಂಶುಪಾಲೆ ಶರ್ಮಿಳಾ ಕುಮಾರಿ ವಂದಿಸಿದರು. ಅನು ನಿರೂಪಿಸಿದರು.