ದೇಶದ ಭದ್ರ ಬುನಾದಿಗೆ ಶಿಕ್ಷಣದ ಅಗತ್ಯವಿದೆ: ಸಚಿವ ಪಾಟೀಲ

KannadaprabhaNewsNetwork |  
Published : Nov 04, 2025, 03:00 AM IST
ಮ | Kannada Prabha

ಸಾರಾಂಶ

ದೇಶದ ಭದ್ರ ಬುನಾದಿಗೆ ಶಿಕ್ಷಣದ ಅಗತ್ಯವಿದೆ. ಇತ್ತೀಚಿನ ದಿನಗಳಲ್ಲಿ ಸರ್ಕಾರಗಳು ಶೈಕ್ಷಣಿಕ ಅಭ್ಯುದಯಕ್ಕಾಗಿ ಸಾವಿರಾರು ಕೋಟಿ ವ್ಯಯಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸುಸಜ್ಜಿತ ವಸತಿ ನಿಲಯ ಮಂಜೂರಾತಿ ಮಾಡಿಸಿಕೊಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು.

ಬ್ಯಾಡಗಿ: ದೇಶದ ಭದ್ರ ಬುನಾದಿಗೆ ಶಿಕ್ಷಣದ ಅಗತ್ಯವಿದೆ. ಇತ್ತೀಚಿನ ದಿನಗಳಲ್ಲಿ ಸರ್ಕಾರಗಳು ಶೈಕ್ಷಣಿಕ ಅಭ್ಯುದಯಕ್ಕಾಗಿ ಸಾವಿರಾರು ಕೋಟಿ ವ್ಯಯಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸುಸಜ್ಜಿತ ವಸತಿ ನಿಲಯ ಮಂಜೂರಾತಿ ಮಾಡಿಸಿಕೊಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು. ತಾಲೂಕಿನ ಚಿಕ್ಕಬಾಸೂರು ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಆವರಣದಲ್ಲಿ ಅಡಿಟೋರಿಯಂ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು. ಗುಣಮಟ್ಟದ ಶಿಕ್ಷಣ ಸರ್ಕಾರದ ಮೊದಲ ಆದ್ಯತೆಯಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಗ್ಯಾರಂಟಿ ಯೋಜನೆಗಳ ಹೊರೆಯ ನಡುವೆಯೂ ಶಿಕ್ಷಣ ಕ್ಷೇತ್ರಕ್ಕೆ ಸಾಕಷ್ಟು ಅನುದಾನ ನೀಡುತ್ತಿದೆ ಎಂದರು. ಗ್ರಾಮೀಣ ಪ್ರದೇಶದ ಮಕ್ಕಳು ಕೂಡ ಉನ್ನತ ಶಿಕ್ಷಣದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಹಾಗೂ ಗುಣಮಟ್ಟದ ಶಿಕ್ಷಣವನ್ನು ಪೂರೈಸುವ ನಿಟ್ಟಿನಲ್ಲಿ ಸರಕಾರ ಸಾಕಷ್ಟು ಯೋಜನೆ ಜಾರಿಗೊಳಿಸುತ್ತಿದೆ. ಸ್ಥಳೀಯ ಶಾಸಕ ಬಸವರಾಜ ಶಿವಣ್ಣನವರ ಸಹ ಶಿಕ್ಷಣ ಪ್ರೇಮಿಗಳಾಗಿದ್ದು, ಶೈಕ್ಷಣಿಕ ಅಭಿವೃದ್ಧಿಗೆ ಇಬ್ಬರು ಸೇರಿ ಹೆಚ್ಚಿನ ಅನುದಾನವನ್ನು ತರುವ ಭರವಸೆ ನೀಡಿದರು. ಶಾಸಕ ಬಸವರಾಜ ಶಿವಣ್ಣನವರ ಮಾತನಾಡಿ, ವಿದ್ಯಾರ್ಥಿಗಳು ರಾಷ್ಟ್ರದ ಆಸ್ತಿಯಾಗಿದ್ದು, ಬಲಿಷ್ಠ ರಾಷ್ಟ್ರ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುವಂತೆ ಸಲಹೆ ನೀಡಿದರಲ್ಲದೇ, ವಿದ್ಯಾರ್ಥಿಗಳನ್ನು ಕಾಲೇಜಿಗೆ ದಾಖಲಾತಿ ಮಾಡಿಸಿದ ದಿನದಿಂದ ಪಾಲಕರ ಹಾಗೂ ಶಿಕ್ಷಕರ ಜವಾಬ್ದಾರಿ ಮತ್ತಷ್ಟು ಹೆಚ್ಚಾಗಲಿದ್ದು ಯುವಕರನ್ನು ದೇಶದ ಆಸ್ತಿಯನ್ನಾಗಿ ಮಾಡಲು ನಿರಂತರ ಶ್ರಮದ ಅಗತ್ಯವಿದೆ ಎಂದರು. ಈ ವೇಳೆ ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ, ಉಪವಿಭಾಗಾಧಿಕಾರಿ ಕಲ್ಯಾಣಿ ಕಾಂಬ್ಳೆ, ಮುಖಂಡರಾದ ಸಂಜೀವಕುಮಾರ ನೀರಲಗಿ, ಮುಖಂಡರಾದ ಸುರೇಶಗೌಡ ಪಾಟೀಲ (ದಿಡಗೂರ), ಖಾದರಸಾಬ ದೊಡ್ಮನಿ, ದಾನಪ್ಪ ಚೂರಿ, ರುದ್ರಪ್ಪ ಹೊಂಕಣ, ಬಂಗಾರೇಶ ಪೂಜಾರ, ಶಿವನಗೌಡ ವೀರನಗೌಡ್ರ, ರಮೇಶ ಸುತ್ತಕೋಟಿ, ಮಾರುತಿ ಅಚ್ಚಿಗೇರಿ, ವೀರಭದ್ರಪ್ಪ ಗೊಡಚಿ ಸೇರಿದಂತೆ ಕಾಲೇಜಿನ ಬೋಧನಾ ಸಿಬ್ಬಂದಿ ಹಾಗೂ ಗ್ರಾಮಸ್ಥರು ಇದ್ದರು.

PREV

Recommended Stories

ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ