ಕಣಕಟ್ಟೆ ಹೋಬಳಿಯ ಮಾಡಾಳು ಗ್ರಾಮದಲ್ಲಿ ನಡೆದ ನಿರಂಜನ ಪೀಠ ಸೌಹಾರ್ದ ಸಹಕಾರ ಸಂಘದ ಎರಡನೇ ವರ್ಷದ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಇಂದಿನ ದಿನಗಳಲ್ಲಿ ಯುವಜನತೆ ಆಧುನಿಕ ಜೀವನಶೈಲಿಯ ಪ್ರಭಾವಕ್ಕೆ ಒಳಗಾಗುತ್ತಿದ್ದು, ಜೀವನದ ಮೌಲ್ಯಗಳು ಹಾಗೂ ಸಾಮಾಜಿಕ ಜವಾಬ್ದಾರಿಗಳಿಂದ ದೂರವಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಯುವಕರು ತಮ್ಮ ಜೀವನದಲ್ಲಿ ಶಿಸ್ತು, ಸಂಸ್ಕಾರ ಹಾಗೂ ಉತ್ತಮ ಚಿಂತನೆಗಳನ್ನು ಅಳವಡಿಸಿಕೊಂಡು ಸಮಾಜದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಸಲಹೆ ನೀಡಿದರು.
ಕನ್ನಡಪ್ರಭ ವಾರ್ತೆ ಅರಸೀಕೆರೆ
ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸುವಲ್ಲಿ ಪೋಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಹಣ-ಆಸ್ತಿ ಸಂಗ್ರಹಿಸುವುದಕ್ಕಿಂತ ಉತ್ತಮ ಶಿಕ್ಷಣ, ಸಂಸ್ಕಾರ ಹಾಗೂ ಮೌಲ್ಯಗಳನ್ನು ನೀಡುವ ಮೂಲಕ ಅವರನ್ನು ಸಮಾಜದ ಸತ್ಪ್ರಜೆಗಳನ್ನಾಗಿ ರೂಪಿಸುವುದು ಪ್ರತಿಯೊಬ್ಬ ಪೋಷಕರ ಕರ್ತವ್ಯವಾಗಿದೆ ಎಂದು ಮಾಡಾಳು ನಿರಂಜನ ಪೀಠ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ರುದ್ರಮುನಿ ಸ್ವಾಮೀಜಿ ಹೇಳಿದರು.ತಾಲೂಕಿನ ಕಣಕಟ್ಟೆ ಹೋಬಳಿಯ ಮಾಡಾಳು ಗ್ರಾಮದಲ್ಲಿ ನಡೆದ ನಿರಂಜನ ಪೀಠ ಸೌಹಾರ್ದ ಸಹಕಾರ ಸಂಘದ ಎರಡನೇ ವರ್ಷದ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಇಂದಿನ ದಿನಗಳಲ್ಲಿ ಯುವಜನತೆ ಆಧುನಿಕ ಜೀವನಶೈಲಿಯ ಪ್ರಭಾವಕ್ಕೆ ಒಳಗಾಗುತ್ತಿದ್ದು, ಜೀವನದ ಮೌಲ್ಯಗಳು ಹಾಗೂ ಸಾಮಾಜಿಕ ಜವಾಬ್ದಾರಿಗಳಿಂದ ದೂರವಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಯುವಕರು ತಮ್ಮ ಜೀವನದಲ್ಲಿ ಶಿಸ್ತು, ಸಂಸ್ಕಾರ ಹಾಗೂ ಉತ್ತಮ ಚಿಂತನೆಗಳನ್ನು ಅಳವಡಿಸಿಕೊಂಡು ಸಮಾಜದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಸಲಹೆ ನೀಡಿದರು.ಪ್ರಕೃತಿಯಲ್ಲಿನ ವೈಪರೀತ್ಯದಿಂದಾಗಿ ರಾಜ್ಯದ ಹಲವು ಭಾಗಗಳಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿಯಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆಯ ಕೊರತೆಯಿಂದ ರೈತರು ಬೆಳೆ ನಷ್ಟ ಹಾಗೂ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಸರ್ಕಾರ ಮತ್ತು ಚುನಾಯಿತ ಜನಪ್ರತಿನಿಧಿಗಳು ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಅಗತ್ಯ ಪರಿಹಾರ ಹಾಗೂ ನೆರವು ಒದಗಿಸಬೇಕು ಎಂದು ಒತ್ತಾಯಿಸಿದರು.ಸಹಕಾರ ಸಂಘದ ಉಪಾಧ್ಯಕ್ಷ ನಾಗಸಮುದ್ರದ ಮರುಳುಸಿದ್ದ ಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಹಾಗೂ ನಿರ್ದೇಶಕ ಶಶಿ ವಾಳದ, ಎಸ್. ಸಿ. ಗಂಗಾಧರಪ್ಪ, ನಿರ್ದೇಶಕರಾದ ವಿಜಯಕುಮಾರ್, ಕಲ್ಲೇಶಪ್ಪ, ಡಿ.ಬಿ. ಕುಮಾರ್, ಸಿ.ಕೆ. ಸುಧಾ, ದ್ರಾಕ್ಷಾಯಿಣಿ, ಎಂ. ಸಿ. ಚಂದ್ರಶೇಖರಪ್ಪ, ಮುಖಂಡ ಕೊಡ್ಲಿ ಬಸವರಾಜ್ ಹಾಗೂ ಸಹಕಾರ ಸಂಘದ ಕಾರ್ಯನಿರ್ವಹಣಾಧಿಕಾರಿ ಡಿ. ಆರ್. ಸುಷ್ಮಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.