ಸಮುದಾಯಗಳ ಅಭಿವೃದ್ಧಿಗೆ ಶಿಕ್ಷಣವೇ ಮೂಲಾಧಾರ: ಮಗ್ಗದ ಸಮುದಾಯ ರಾಜ್ಯಾಧ್ಯಕ್ಷ ದಯಾನಂದ್

KannadaprabhaNewsNetwork |  
Published : Jul 13, 2026, 12:15 AM IST
ಫೋಟೋ: 12 ಹೆಚ್‌ಎಸ್‌ಕೆ 2 ಹೊಸಕೋಟೆ ತಾಲೂಕಿನ ಹೆಚ್.ಕ್ರಾಸ್  ಸಭಾ ಭವನದಲ್ಲಿ ನಡೆದ ಮಗ್ಗದವರ ಸಮುದಾಯದ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಸಂಸ್ಥಾಪಕ ಯೋಗೇಶ್, ರಾಜ್ಯಾಧ್ಯಕ್ಷ ದಯಾನಂದ್ ಸೇರಿದಂತೆ ಹಲವಾರು ಗಣ್ಯರು ಉದ್ಘಾಟಿಸಿದರು. | Kannada Prabha

ಸಾರಾಂಶ

ಶಿಕ್ಷಣವೇ ಸಮಾಜವನ್ನು ಉತ್ತಮ ದಿಕ್ಕಿನಲ್ಲಿ ಬೆಳೆಸುವ ಶಕ್ತಿ. ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನಮ್ಮ ಮಗ್ಗದ ಸಂಘಟನೆ ಕುಟುಂಬ ಸದಾ ಬೆಂಬಲ ನೀಡಲಿದೆ. ಸಂಘದ ಸದಸ್ಯರಷ್ಟೇ ಅಲ್ಲದೆ ಸಮಾಜದ ಎಲ್ಲ ವರ್ಗಗಳ ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಈ ಸೇವೆಯನ್ನು ಮುಂದುವರಿಸುತ್ತಿದ್ದೇವೆ,

ಕನ್ನಡಪ್ರಭ ವಾರ್ತೆ ಹೊಸಕೋಟೆ

ಮಗ್ಗದ ಸಮುದಾಯದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಸಂಘದ ವತಿಯಿಂದ ನೀಡುತ್ತಿರುವ ಪ್ರತಿಭಾ ಪುರಸ್ಕಾರವನ್ನು ವಿದ್ಯಾರ್ಥಿಗಳು ಸ್ವೀಕರಿಸಿ ಮುಂದಿನ ದಿನಗಳಲ್ಲಿ ಮತ್ತಷ್ಟು ಸಾಧನೆಯನ್ನು ಶಿಕ್ಷಣ ಕ್ಷೇತ್ರದಲ್ಲಿ ಮಾಡಬೇಕು ಎಂದು ಕರ್ನಾಟಕ ರಾಜ್ಯ ಮಗ್ಗದವರ ಸಂಘದ ರಾಜ್ಯಾಧ್ಯಕ್ಷ ದಯಾನಂದ್ ತಿಳಿಸಿದರು.

ತಾಲೂಕಿನ ಮಗ್ಗದವರ ಸಮುದಾಯದ ವಿದ್ಯಾರ್ಥಿಗಳಿಗೆ ಎಚ್.ಕ್ರಾಸ್ ಸಮೀಪದ ಖಾಸಗಿ ಸಭಾಭವನದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶಿಕ್ಷಣವೇ ಸಮಾಜವನ್ನು ಉತ್ತಮ ದಿಕ್ಕಿನಲ್ಲಿ ಬೆಳೆಸುವ ಶಕ್ತಿ. ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನಮ್ಮ ಮಗ್ಗದ ಸಂಘಟನೆ ಕುಟುಂಬ ಸದಾ ಬೆಂಬಲ ನೀಡಲಿದೆ. ಸಂಘದ ಸದಸ್ಯರಷ್ಟೇ ಅಲ್ಲದೆ ಸಮಾಜದ ಎಲ್ಲ ವರ್ಗಗಳ ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಈ ಸೇವೆಯನ್ನು ಮುಂದುವರಿಸುತ್ತಿದ್ದೇವೆ, ಕಳೆದ ಒಂಬತ್ತು ವರ್ಷಗಳಿಂದ ನಿರಂತರವಾಗಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ನೆರವು ನೀಡುತ್ತಿದ್ದು ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರತಿಭಾ ಪುರಸ್ಕಾರ ಪ್ರಾರಂಭ ಮಾಡಿ ಈಗ ಬೆಂಗಳೂರು ಗ್ರಾಮಾಂತರ ಜಿಲ್ಲೆಗೂ ವಿಸ್ತರಣೆ ಮಾಡಿದ್ದೇವೆ. ಇದುವರೆಗೆ ಸುಮಾರು ೩೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾಯಧನ, ಪ್ರತಿಭಾ ಪುರಸ್ಕಾರ ಹಾಗೂ ಅಗತ್ಯ ನೆರವು ನೀಡಲಾಗಿದೆ ಎಂದರು.

ಮಗ್ಗದವರ ಸಂಘದ ಜಿಲ್ಲಾಧ್ಯಕ್ಷ ದೊಡ್ಡಹರಳಗೆರೆ ನಾಗೇಶ ಮಾತನಾಡಿ, ಈ ವರ್ಷ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗಿದೆ. ಜೊತೆಗೆ ವಿದ್ಯಾರ್ಥಿಗಳ ಮುಂದಿನ ಶಿಕ್ಷಣಕ್ಕೆ ಆರ್ಥಿಕ ಸಹಾಯ ನೀಡಲಾಗಿದೆ. ಮಗ್ಗದ ಸಮುದಾಯ ಅಲ್ಪಸಂಖ್ಯಾತರ ರೀತಿ ಇದ್ದು ಸಮಾಜದ ಮುಖ್ಯವಾಹಿನಿಗೆ ಬರಬೇಕಾಗಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಸಂಘಟನೆ ಮತ್ತಷ್ಟು ಪರಿಣಾಮಕಾರಿಯಾಗಿ ಕಾರ್ಯಚಟುವಟಿಕೆ ರೂಪಿಸಲಿದೆ ಎಂದರು.

ಕರ್ನಾಟಕ ರಾಜ್ಯ ಮಗ್ಗದವರ ಸಂಘದ ಸಂಸ್ಥಾಪಕ ರಾಜ್ಯಾಧ್ಯಕ್ಷ ಯೋಗೇಶ್, ಪ್ರದಾನ ಕಾರ್ಯದರ್ಶಿ ರಾಜಣ್ಣ, ತಾಲೂಕು ಅಧ್ಯಕ್ಷ ಪುಟ್ಟಣ್ಣ ಸೇರಿ ಮಗ್ಗದ ಕುಟುಂಬದ ಸದಸ್ಯರು, ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದು, ಶಿಕ್ಷಣ ಸೇವೆಗೆ ಕೈಜೋಡಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

​ಜಗಳೂರು ತಾಲೂಕಿನ ೨೪ ಕೆರೆಗಳಿಗೆ ಹರಿದ ತುಂಗಭದ್ರೆ
ಜೋಗ ಜಲಪಾತ ವೀಕ್ಷಣೆಗೆ ಮುಗಿಬಿದ್ದ ಜನ