371ಜೆ ವಿಶೇಷ ಸ್ಥಾನಮಾನದಡಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಮೀಸಲಾತಿ ಸೇರಿದಂತೆ ಹಲವು ಸೌಲಭ್ಯಗಳು ದೊರೆ ಯುತ್ತಿದ್ದು, ಇದರ ಸದುಪಯೋಗ ಪಡೆದುಕೊಂಡು ಎಲ್ಲರೂ ವಿದ್ಯಾವಂತರಾಗಬೇಕು ಎಂದು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ, ಶಾಸಕ ಆರ್. ಬಸನಗೌಡ ತುರ್ವಿಹಾಳ ಹೇಳಿದರು.
ಕನ್ನಡಪ್ರಭ ವಾರ್ತೆ ಮಸ್ಕಿ

ತಾಲೂಕು ಆಡಳಿತ, ಪುರಸಭೆ ಹಾಗೂ ತಾಪಂನಿಂದ ಪಟ್ಟಣದ ಕೇಂದ್ರ ಶಾಲೆಯ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಲ್ಯಾಣ ಕರ್ನಾಟಕ ಭಾಗದ ಜನರು ಹಲವು ಹೋರಾಟಗಳ ಮೂಲಕ ತಮ್ಮ ಹಕ್ಕುಗಳನ್ನು ಪಡೆದುಕೊಂಡಿದ್ದಾರೆ. 371ಜೆ ಮೀಸಲಾತಿಯಿಂದ ಈ ಭಾಗದ ಯುವಜನರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ವಿಶೇಷ ಅವಕಾಶಗಳು ಲಭಿಸುತ್ತಿವೆ. ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದಾಗ ಮಾತ್ರ ಈ ಭಾಗವು ಎಲ್ಲ ಕ್ಷೇತ್ರಗಳಲ್ಲೂ ಅಭಿವೃದ್ಧಿ ಸಾಧಿಸಲು ಸಾಧ್ಯ ಎಂದರು.
ತಹಸೀಲ್ದಾರ್ ಮಂಜುನಾಥ್ ಭೋಗಾವತಿ ಧ್ವಜಾರೋಹಣ ನೆರವೇರಿಸಿದರು. ಪುರಸಭೆ ಅಧ್ಯಕ್ಷ ಸುರೇಶ್ ಹರಸೂರು, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪಂಪಾಪತಿ ಹೂಗಾರ್ ಮಾತನಾಡಿದರು.
ತಾಪಂ ಇಒ ಶಿವಾನಂದ ರೆಡ್ಡಿ, ಸಿಪಿಐ ರಾಮಪ್ಪ ಜಳಗೇರಿ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಮಹಿಬೂಬಸಾಬ್ ಮುದ್ದಾಪುರ, ಎಪಿಎಂಸಿ ಅಧ್ಯಕ್ಷ ಸಿದ್ದನಗೌಡ ಮಾಟೂರು, ಪುರಸಭೆ ಮುಖ್ಯಾಧಿಕಾರಿ ನರಸರೆಡ್ಡಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಶಾಲಾ ವಿದ್ಯಾರ್ಥಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.