- ವಿದ್ಯಾರ್ಥಿಗಳ ಏಳ್ಗೆ ಹಿಂದೆ ಗುರು ಪಾತ್ರ ಹೆಚ್ಚು: ಕುಲಪತಿ
ಶಿಕ್ಷಣದಿಂದ ವಿದ್ಯಾರ್ಥಿಗಳ ಭವಿಷ್ಯ ಉಜ್ವಲ ಸಾಧ್ಯ ಎಂದು ಮಂಡ್ಯ ವಿಶ್ವವಿದ್ಯಾಲಯ ಕುಲಪತಿ ಡಾ.ಕೆ. ಶಿವಚಿತ್ತಪ್ಪ ಕರೆ ನೀಡಿದರು.
ಚಾಮರಾಜನಗರ ಜೆಎಸ್ಎಸ್ ಶಿಕ್ಷಣ ವಿದ್ಯಾಲಯ ವತಿಯಿಂದ 2025-26ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪ್ರಥಮ ವರ್ಷದ ಬಿ.ಎಡ್ ಪ್ರಶಿಕ್ಷಣಾರ್ಥಿಗಳಿಗೆ ಸ್ವಾಗತ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿ, ‘ನಿರಂತರ ಅಧ್ಯಯನದಿಂದ ಯಶಸ್ವಿ ಸಾಧ್ಯ. ನಾನು 20 ದೇಶಗಳ ವಿಶ್ವವಿದ್ಯಾಲಯಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿದ್ದೇನೆ. ಭಾರತದಲ್ಲಿರುವ ವಿಶ್ವವಿದ್ಯಾಲಯಗಳು ವಿಶ್ವಕ್ಕೆ ಶ್ರೇಷ್ಠವಾಗಿದೆ ಇಲ್ಲಿನ ಭಾರತೀಯ ಸಂಸ್ಕೃತಿ ಇತರೆಗೆ ಪ್ರೇರಣೆಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದವರು.ಮಾತೃ ಭಾಷೆ ಕನ್ನಡದ ಜೊತೆ ಇಂಗ್ಲಿಷ್ ಭಾಷೆಯನ್ನು ಮಾತನಾಡುವ ಅಭಿರುಚಿ ಬೆಳೆಸಿಕೊಳ್ಳಿ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಉದ್ಯೋಗವಲ್ಲದೆ, ಹೊರ ರಾಜ್ಯ ಮತ್ತು ಹೊರದೇಶದಲ್ಲೂ ಉದ್ಯೋಗ ಪಡೆಯಲು ಸಾಧ್ಯ ಎಂದು ಸಲಹೆ ನೀಡಿದರು.
ಜೆಎಸ್ಎಸ್‌ನ ಪ್ರಾಂಶುಪಾಲ ಡಾ.ಕೆ.ಸಿ. ಬಸವಣ್ಣ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಬಿಎಡ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ ಸಾವಿರಾರು ವಿದ್ಯಾರ್ಥಿಗಳು ಜಿಲ್ಲೆ, ರಾಜ್ಯ, ಹೊರ ರಾಜ್ಯಗಳಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಜೊತೆ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಸಕ್ರಿಯವಾಗಿ ಭಾಗವಹಿಸಿ ಹಲವಾರು ಪ್ರಶಸ್ತಿಗಳನ್ನು ಗಳಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದವರು.
ಜೆಎಸ್ಎಸ್ ಶಿಕ್ಷಣ ಮಹಾವಿದ್ಯಾಲಯ ಗ್ರಂಥಪಾಲಕ ಕೆ.ಕೆ. ಶಿವಶಂಕರ ರಾಜ ಅರಸ್ 2026ನೇ ಸಾಲಿನ ಪ್ರಶಿಕ್ಷಣಾರ್ಥಿಗಳಿಗೆ ಪ್ರತಿಜ್ಞೆ ಬೋಧಿಸಿದರು.