ಶಿಕ್ಷಣ ಜ್ಞಾನದ ಬೆಳಕಿನ ಶಕ್ತಿ, ಯಾರಿಂದಲೂ ಕದಿಯಲಾಗದು: ಆರೋಗ್ಯನಾದನ್

KannadaprabhaNewsNetwork |  
Published : Sep 08, 2025, 01:00 AM IST
7ಕೆಎಂಎನ್ ಡಿ13 | Kannada Prabha

ಸಾರಾಂಶ

ಶಿಕ್ಷಣದ ಜ್ಞಾನ ಬೆಳಕಿನ ಶಕ್ತಿಯು ಸಾಧಕರ ಸ್ವತ್ತೆ ಹೊರತು ಸೋಮಾರಿಗಳ ಸ್ವತ್ತಲ್ಲ. ಏನನ್ನಾದರೂ ಸಾಧನೆ ಮಾಡಬೇಕು ಎನ್ನುವ ಹಂಬಲ ಹೊಂದಿರುವ ವಿದ್ಯಾರ್ಥಿಗಳು ಜೀವನದಲ್ಲಿ ಎದುರಾಗುವ ಸೋಲುಗಳಿಗೆ ಹೆದರಿ ಪಲಾಯನವಾದವನ್ನು ಅನುಸರಿಸದೇ ಸೋಲನ್ನೇ ಗೆಲುವಿನ ಮೆಟ್ಟಿಲನ್ನಾಗಿಸಿ ಕೊಂಡು ಗುರಿ ಸಾಧನೆ ಮಾಡಬೇಕು.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಶಿಕ್ಷಣ ಜ್ಞಾನದ ಬೆಳಕಿನ ಶಕ್ತಿ. ಯಾರಿಂದಲೂ ಕದಿಯಲಾಗದ ಆಸ್ತಿ ಎಂದು ಫಾದರ್ ಆರೋಗ್ಯನಾದನ್ ಹೇಳಿದರು.

ಪಟ್ಟಣದ ಕ್ರೈಸ್ಟ್ ದ ಕಿಂಗ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಪಟ್ಟಣದ ಶ್ರೀಮತಿ ಜಯಮ್ಮ ರಾಮಸ್ವಾಮಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ವಿದ್ಯಾರ್ಥಿಗಳ ಪ್ರತಿಜ್ಞಾವಿಧಿ ಹಾಗೂ ಸ್ವಾಗತ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಶೇಕಡ ನೂರಕ್ಕೆ ನೂರರಷ್ಟು ಫಲಿತಾಂಶ ಕೊಡುತ್ತಿರುವ ಕ್ರೈಸ್ತ ಕಿಂಗ್ ಕಾಲೇಜು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ದಾರಿ ದೀಪವಾಗಿದೆ ಎಂದರು.

ಶಿಕ್ಷಣದ ಜ್ಞಾನ ಬೆಳಕಿನ ಶಕ್ತಿಯು ಸಾಧಕರ ಸ್ವತ್ತೆ ಹೊರತು ಸೋಮಾರಿಗಳ ಸ್ವತ್ತಲ್ಲ. ಏನನ್ನಾದರೂ ಸಾಧನೆ ಮಾಡಬೇಕು ಎನ್ನುವ ಹಂಬಲ ಹೊಂದಿರುವ ವಿದ್ಯಾರ್ಥಿಗಳು ಜೀವನದಲ್ಲಿ ಎದುರಾಗುವ ಸೋಲುಗಳಿಗೆ ಹೆದರಿ ಪಲಾಯನವಾದವನ್ನು ಅನುಸರಿಸದೇ ಸೋಲನ್ನೇ ಗೆಲುವಿನ ಮೆಟ್ಟಿಲನ್ನಾಗಿಸಿ ಕೊಂಡು ಗುರಿ ಸಾಧನೆ ಮಾಡಬೇಕು ಎಂದರು.

ತೆಂಡೇಕೆರೆ ಬಾಳೆಹೊನ್ನೂರು ಶಾಖಾ ಮಠದ ಗಂಗಾಧರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು. ಕಾಲೇಜಿನ ಪಿಯು ಪರೀಕ್ಷೆಯಲ್ಲಿ ಉನ್ನತ ಅಂಕ ಗಳಿಸಿ ನೀಟ್ ಬರೆದು ಸರ್ಕಾರದ ಮೆಡಿಕಲ್ ಸೀಟ್ ಪಡೆದ ಶಿಕ್ಷಕ ಹಳೆಯೂರು ಶಿಕ್ಷಕ ಯೋಗೇಶ್ ಅವರ ಪುತ್ರ ಪ್ರೀತಮ್ ಹೆಚ್.ವೈ ಅವರನ್ನು ಅಭಿನಂದಿಸಲಾಯಿತು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಮೋಹನ್, ಶಿಕ್ಷಣ ತಜ್ಞ ವಿಲಿಯಮ್ಸ್, ಪುರಸಭೆ ಮಾಜಿ ಸದಸ್ಯ ಕೆ.ಆರ್.ನೀಲಕಂಠ, ಕ್ರೈಸ್ಟ್ ದ ಕಿಂಗ್ ಪದವಿ ಪೂರ್ವ ಕಾಲೇಜಿನ ಸಂಸ್ಥಾಪಕ ಕಾರ್ಯದರ್ಶಿ ಡಾ.ಆಂಥೋನಿ ಸ್ವಾಮಿ, ಪ್ರಾಂಶುಪಾಲರಾದ ಶಿವರಾಜ್, ಶಿಕ್ಷಣ ಸಂಯೋಜಕ ಹಳೆಯೂರು ಯೋಗೇಶ್ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ