ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ವಿಶ್ವಕರ್ಮ ಜಯಂತಿ ಉದ್ಘಾಟಿಸಿ
ಹಿಂದುಳಿದ ಸಮಾಜಗಳು ಅಭಿವೃದ್ಧಿ ಹೊಂದಲು ಶಿಕ್ಷಣವೇ ಪ್ರಮುಖ ಅಸ್ತ್ರ ಎಂದು ಶಾಸಕ ಕೆ. ಎಸ್. ಆನಂದ್ ಅಭಿಪ್ರಾಯ ಪಟ್ಟರು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ವಿಶ್ವಕರ್ಮ ಜಯಂತಿ ಉದ್ಘಾಟಿಸಿ ಮಾತನಾಡಿ, ಸಿಎಂ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರ 2014ರಲ್ಲಿ ವಿಶ್ವಕರ್ಮ ಜಯಂತಿಯನ್ನು ಅಧಿಕೃತವಾಗಿ ಘೋಷಣೆ ಮಾಡುವ ಮೂಲಕ ಸಣ್ಣ ಸಮಾಜಗಳಿಗೂ ದನಿ ನೀಡಿದರು. ಅಲ್ಲದೆ ಸಮಾಜದ ಅಭಿವೃದ್ಧಿಗಾಗಿ ವಿಶ್ವಕರ್ಮ ನಿಗಮ ಆರಂಭಿಸಿ ಸಮಾಜ ಆರ್ಥಿಕವಾಗಿ ಸ್ವಾವಲಂಬಿಯಾಗಲು ಎಲ್ಲ ರೀತಿಯ ಸಹಕಾರ ನೀಡಿದೆ ಎಂದರು.ಸಮಾಜದ ಸಮುದಾಯ ಭವನ ನಿರ್ಮಾಣ ಪೂರ್ಣಗೊಳಿಸಲು ಈಗಾಗಲೇ ಹಣ ನಿಗದಿ ಮಾಡಲಾಗಿದೆ. ಅಲ್ಲದೆ ಸಮಾಜ ಸಾಮಾಜಿಕ, ರಾಜಕೀಯ, ಆರ್ಥಿಕವಾಗಿ ಬೆಳೆಯಲು ಸಂಘಟನೆ ಮತ್ತು ಶಿಕ್ಷಣ ಕಾರಣವಾಗಿದೆ. ಸಮಾಜದ ಎಲ್ಲ ರೀತಿಯ ಅಭಿವೃದ್ಧಿ ಕಾರ್ಯಗಳಿಗೆ ನನ್ನ ಸಹಕಾರ ಇರುತ್ತದೆ. ಬೀರೂರಿನಲ್ಲಿರುವ ವಿಶ್ವ ಕರ್ಮ ಸಮಾಜದ ಕೋಟ್ಯಂತರ ರು. ಬೆಲೆ ಬಾಳುವ ಜಮೀನು ಬಿಡಿಸಿಕೊಂಡು ಸಮಾಜದ ಅಭಿವೃದ್ದಿ ಕಾರ್ಯಗಳಿಗೆ ಬಳಸಿ ಎಂದು ಸಲಹೆ ನೀಡಿದರು.
ತಹಸೀಲ್ದಾರ್ ಸಿ.ಆರ್.ಪೂರ್ಣಿಮಾ ಮಾತನಾಡಿ, ಶೈಕ್ಷಣಿಕವಾಗಿ ಬೆಳೆದಲ್ಲಿ ಮಾತ್ರ ಒಂದು ಸಮಾಜ ಅಭಿವೃದ್ಧಿ ಹೊಂದಲು ಸಾಧ್ಯ ಎಂದರು. ಸಮಾಜದ ಮುಖಂಡ ಓಂಕಾರ್ ಮೂರ್ತಿ ಮಾತನಾಡಿ, ವಿಶ್ವಕರ್ಮರು ತಮ್ಮ ಕಸುಬಿನಿಂದ ಪ್ರಪಂಚಕ್ಕೆ ಮಾದರಿಯಾಗಿದ್ದಾರೆ. ನಿಯತ್ತಿಗೆ ಹೆಸರು ವಾಸಿಯಾದ ವಿಶ್ವಕರ್ಮರು ಎಂದರೆ ತಪ್ಪಾಗಲಾರದು. ವಿಶ್ವಕರ್ಮ ಜಯಂತಿಯನ್ನು ಸಿದ್ದರಾಮಯ್ಯ ಅವಧಿಯಲ್ಲಿ ಮಾಡಿದ್ದು ಸಮಾಜ ಶೈಕ್ಷಣಿಕ ವಾಗಿ ಇನ್ನಷ್ಟು ಅಭಿವೃದ್ಧಿ ಆಗಬೇಕಿದೆ ಎಂದರು.
ಸಮಾಜದ ಜಿಲ್ಲಾ ಯುವ ಘಟಕದ ಅಧ್ಯಕ್ಷ ಗೋಪಾಲಾಚಾರ್, ತಾಪಂ ಇಒ ಸಿ.ಆರ್. ಪ್ರವೀಣ್, ಪುಷ್ಪಕುಮಾರ ಆಚಾರ್, ಆರ್. ಕೆ. ಮಂಜು ನಾಥ್, ಕೃಷ್ಣಮೂರ್ತಿ, ಜಿ. ಅಶೋಕ್ , ಪರಮೇಶ್ವರಾಚಾರ್, ಅಧಿಕಾರಿಗಳು ಇದ್ದರು.ಬಾಕ್ಸ್ ಸುದ್ದಿಗೆ --
17ಕೆಕೆಡಿಯು2.ಕಡೂರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ವಿಶ್ವಕರ್ಮ ಜಯಂತಿಯ ಕಾರ್ಯಕ್ರಮದಲ್ಲಿ ಸಮಾಜದ ಹಿರಿಯ ಸಾಧಕರನ್ನು ಸನ್ಮಾನಿಸಲಾಯಿತು.