ವಿದ್ಯೆಯೊಂದೇ ಕೊನೆಯವರೆಗೂ ಉಳಿಯುವ ಸಾಧನ: ನಿವೃತ್ತ ಶಿಕ್ಷಕಿ ಸುನೀತಾ ಕಟ್ಟಿ

KannadaprabhaNewsNetwork |  
Published : Oct 13, 2025, 02:00 AM IST
೧೨.ವಿಜೆಪಿ  ವಿಜಯಪುರ ಆರ್.ಕೆ.ಫಂಕ್ಷನ್ ಹಾಲ್ ನಲ್ಲಿ ಆಯೋಜಿಸಿದ್ದ ಆಯೋಜಿಸಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ೧೯೯೫-೯೬ ನೇ ಸಾಲಿನ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳು, ತಮ್ಮ ಗುರುಗಳನ್ನು ಅಭಿನಂದಿಸಿದರು. | Kannada Prabha

ಸಾರಾಂಶ

ಸಮಾಜದಲ್ಲಿ ಏಳಿಗೆಯನ್ನು ಸಾಧಿಸಬೇಕು ಎಂದರೇ ವಿದ್ಯೆ ಒಂದೇ ಅವರನ್ನು ಕೈ ಹಿಡಿಯುವುದು. ನನ್ನ ಶಿಕ್ಷಕ ವೃತ್ತಿಯನ್ನು ವಿಜಯಪುರದಲ್ಲಿ ಆರಂಭಿಸಿದ ದಿನದಿಂದ ಇಲ್ಲಿಯವರೆಗೂ ನಾನು ಕಂಡಂತೆ ಇಲ್ಲಿನ ವಿದ್ಯಾರ್ಥಿಗಳು ಹಠವಾದಿಗಳು, ವಿದ್ಯೆ ಕಲಿತು ತಾವು ಏನಾದರೂ ಸಾಧಿಸಲೇಬೇಕು ಎಂಬ ಛಲ ಹೊಂದಿರುವ ಕಾರಣದಿಂದಲೇ ಇಲ್ಲಿ ವ್ಯಾಸಂಗ ಮಾಡಿರುವ ಅದೆಷ್ಟೋ ವಿದ್ಯಾರ್ಥಿಗಳು ಇಂದು ದೇಶದ ವಿವಿಧ ಭಾಗಗಳಲ್ಲಿ ಉನ್ನತ ಸ್ಥಾನಮಾನಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ .

ಕನ್ನಡಪ್ರಭ ವಾರ್ತೆ ವಿಜಯಪುರ

ನಾವು ಗಳಿಸಿದ ಆಸ್ತಿ, ಅಂತಸ್ತು, ಸಂಪತ್ತು ಯಾವುದೂ ಕೊನೆಯವರೆಗೂ ಉಳಿಯೋಲ್ಲ. ಆದರೆ ಕಲಿತ ವಿದ್ಯೆ ಮಾತ್ರ ಕೊನೆಯವರೆಗೂ ಜೊತೆಗಿರುತ್ತದೆ ಎಂದು ನಿವೃತ್ತ ಶಿಕ್ಷಕಿ ಸುನೀತಾಕಟ್ಟಿ ಹೇಳಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ೧೯೯೫-೯೬ನೇ ಸಾಲಿನ ಎಸ್ಸೆಸ್ಸೆಲ್ಸಿ ಡಿ.ವಿಭಾಗದ ಹಳೆಯ ವಿದ್ಯಾರ್ಥಿಗಳಿಂದ ಆಯೋಜಿಸಿದ್ದ ಗುರುವಂದನೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜೀವನದಲ್ಲಿ ಗುರಿ, ಛಲ, ಗುರುವಿನ ಆಶೀರ್ವಾದ ಇದ್ದರೆ ಮಾತ್ರವೇ ವಿದ್ಯೆ ಕಲಿತು ಸಮಾಜದಲ್ಲಿ ಉನ್ನತ ಸ್ಥಾನ ಗಳಿಸಲು ಸಾಧ್ಯ. ವಿದ್ಯಾರ್ಥಿಗಳು ಎಷ್ಟೇ ದೊಡ್ಡವರಾದರೂ ಗುರುಗಳಿಗೆ ಶಿಷ್ಯರ ಸಂಬಂಧ ಕೊನೆವರೆಗೂ ಉಳಿಯುತ್ತದೆ. ತಂದೆ, ತಾಯಿಗಳನ್ನು ಪ್ರೀತಿಸಿ, ಅವರನ್ನು ಗೌರವಿಸುವುದನ್ನು ರೂಢಿಸಿಕೊಳ್ಳಿ ಎಂದರು.

ಹಿರಿಯ ನಿವೃತ್ತ ಶಿಕ್ಷಕ ಕೃಷ್ಣಪ್ರಸಾದ್ ಮಾತನಾಡಿ, ಸಮಾಜದಲ್ಲಿ ಏಳಿಗೆಯನ್ನು ಸಾಧಿಸಬೇಕು ಎಂದರೇ ವಿದ್ಯೆ ಒಂದೇ ಅವರನ್ನು ಕೈ ಹಿಡಿಯುವುದು. ನನ್ನ ಶಿಕ್ಷಕ ವೃತ್ತಿಯನ್ನು ವಿಜಯಪುರದಲ್ಲಿ ಆರಂಭಿಸಿದ ದಿನದಿಂದ ಇಲ್ಲಿಯವರೆಗೂ ನಾನು ಕಂಡಂತೆ ಇಲ್ಲಿನ ವಿದ್ಯಾರ್ಥಿಗಳು ಹಠವಾದಿಗಳು, ವಿದ್ಯೆ ಕಲಿತು ತಾವು ಏನಾದರೂ ಸಾಧಿಸಲೇಬೇಕು ಎಂಬ ಛಲ ಹೊಂದಿರುವ ಕಾರಣದಿಂದಲೇ ಇಲ್ಲಿ ವ್ಯಾಸಂಗ ಮಾಡಿರುವ ಅದೆಷ್ಟೋ ವಿದ್ಯಾರ್ಥಿಗಳು ಇಂದು ದೇಶದ ವಿವಿಧ ಭಾಗಗಳಲ್ಲಿ ಉನ್ನತ ಸ್ಥಾನಮಾನಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.

ನಾರಾಯಣಪುರ ಪ್ರೌಢಶಾಲೆ ಮುಖ್ಯಶಿಕ್ಷಕ ಪಿ.ಎಂ.ಕೊಟ್ರೇಶ್ ಮಾತನಾಡಿ, ವಿಜ್ಞಾನ ತಂತ್ರಜ್ಞಾನ ಮುಂದುವರಿದ ಈ ಕಾಲದಲ್ಲಿ ವಿಶ್ವವೇ ಒಂದು ಗ್ರಾಮವಂತಾಗಿದೆ. ಉದ್ಯೋಗ ಇನ್ನಿತರೆ ಕಾರಣಗಳಿಗಾಗಿ ಹುಟ್ಟಿದ ಊರು ಬಿಟ್ಟು ಬೇರೆಲ್ಲೋ ನೆಲೆಸಿದವರು ತಮ್ಮ ದಿನನಿತ್ಯದ ಒತ್ತಡ ಜೀವನದಲ್ಲಿ ಹುಟ್ಟಿದ ಊರು, ಹೆತ್ತವರು, ಅಕ್ಷರ ಕಲಿಸಿದ ಗುರುಗಳನ್ನು ನೆನೆಸಿಕೊಳ್ಳಲಾಗದ ಸ್ಥಿತಿಗೆ ತಲುಪಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಹಿರಿಯ ವಿದ್ಯಾರ್ಥಿಗಳೆಲ್ಲರನ್ನೂ ಒಟ್ಟುಗೂಡಿಸಿ, ಹಳೆಯ ದಿನಗಳನ್ನು ಮೆಲಕು ಹಾಕುವಂತಹ ಸುಂದರ ಕ್ಷಣಗಳಿಗೆ ಸಾಕ್ಷಿಯಾದ ಇಂತಹ ಕಾರ್ಯಕ್ರಮ ಇದೀಗ ಅಗತ್ಯ. ಆ ಮೂಲಕ ಶಾಲೆ ಹಾಗೂ ಗ್ರಾಮದ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದರು.

ಹಿರಿಯ ವಿದ್ಯಾರ್ಥಿಗಳು ಗುರುಗಳನ್ನು ಸನ್ಮಾನಿಸಿದರು. ನಿವೃತ್ತ ಶಿಕ್ಷಕರಾದ ಚಂದ್ರಿಕಾ, ರುಕ್ಮೀಣಿಬಾಯಿ, ಗುಂಡೂರಾವ್, ಹಾಜರಿದ್ದರು.

PREV

Recommended Stories

ಬಂಡಿಗಣಿಯಲ್ಲಿಂದು ಸರ್ವಧರ್ಮ ಮಹಾಸಂಗಮ: ಸಿಎಂ ಭಾಗಿ
ಆರೆಸ್ಸೆಸ್‌ ಬೆಳವಣಿಗೆ ಕೆಲ ಶಕ್ತಿ, ಸಂಘಟನೆಗಳಿಗೆ ಸಹಿಸಲಾಗ್ತಿಲ್ಲ: ಅರುಣಕುಮಾರ