ಶಿಕ್ಷಣವೇ ಎಲ್ಲ ಸಮಸ್ಯೆಗಳ ಪರಮೋಚ್ಛ ಪರಿಹಾರ

KannadaprabhaNewsNetwork |  
Published : Aug 24, 2026, 02:00 AM IST
ಚಿತ್ರ 22ಬಿಡಿಆರ್61 | Kannada Prabha

ಸಾರಾಂಶ

ಶಿಕ್ಷಣವಿಲ್ಲದೆ ಯಾವುದೇ ಸಾಧನೆ ಸಾಧ್ಯವಿಲ್ಲ. ಶಿಕ್ಷಣವೇ ಎಲ್ಲ ಸಮಸ್ಯೆಗಳ ಪರಮೋಚ್ಛ ಪರಿಹಾರವಾಗಿದೆ ಎಂದು ಬೀದರ್ ಡಯಟ್‌ನ ಪ್ರಾಂಶುಪಾಲರಾದ ಡಾ.ಮಹಮ್ಮದ ಗುಲ್ಶನ್ ಹೇಳಿದರು. ನಗರದ ಸರಸ್ವತಿ ಶಾಲೆಯಲ್ಲಿ ವಿದ್ಯಾಭಾರತಿ ಕರ್ನಾಟಕ ಜಿಲ್ಲಾ ಘಟಕದಿಂದ ನಡೆದ ಜಿಲ್ಲಾ ಗಣಿತ-ವಿಜ್ಞಾನ ಮೇಳ ಹಾಗೂ ಸಂಸ್ಕೃತಿ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಬೀದರ್

ಶಿಕ್ಷಣವಿಲ್ಲದೆ ಯಾವುದೇ ಸಾಧನೆ ಸಾಧ್ಯವಿಲ್ಲ. ಶಿಕ್ಷಣವೇ ಎಲ್ಲ ಸಮಸ್ಯೆಗಳ ಪರಮೋಚ್ಛ ಪರಿಹಾರವಾಗಿದೆ ಎಂದು ಬೀದರ್ ಡಯಟ್‌ನ ಪ್ರಾಂಶುಪಾಲರಾದ ಡಾ.ಮಹಮ್ಮದ ಗುಲ್ಶನ್ ಹೇಳಿದರು. ನಗರದ ಸರಸ್ವತಿ ಶಾಲೆಯಲ್ಲಿ ವಿದ್ಯಾಭಾರತಿ ಕರ್ನಾಟಕ ಜಿಲ್ಲಾ ಘಟಕದಿಂದ ನಡೆದ ಜಿಲ್ಲಾ ಗಣಿತ-ವಿಜ್ಞಾನ ಮೇಳ ಹಾಗೂ ಸಂಸ್ಕೃತಿ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

, ಶಿಕ್ಷಣವಿಲ್ಲದೆ ಯಾವುದೇ ಸಾಧನೆ ಸಾಧ್ಯವಿಲ್ಲ. ಶಿಕ್ಷಣವೇ ಎಲ್ಲ ಸಮಸ್ಯೆಗಳ ಪರಮೋಚ್ಛ ಪರಿಹಾರವಾಗಿದ್ದು, ವಿದ್ಯಾರ್ಥಿಗಳು ಜ್ಞಾನ ಸಂಪಾದನೆಯೊಂದಿಗೆ ಮಾನವೀಯ ಮೌಲ್ಯ ಹಾಗೂ ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ನಿವೃತ್ತ ಶಿಕ್ಷಕ ಮಹಮ್ಮದ ರಫಿ ತಾಳಿಕೋಟೆ ಪಾಲ್ಗೊಂಡು ವಿದ್ಯಾರ್ಥಿಗಳು ಪ್ರತಿನಿತ್ಯ ಹೊಸದನ್ನು ಕಲಿಯುವ ಆಸಕ್ತಿ ಹಾಗೂ ಸೃಜನಶೀಲತೆ ಬೆಳೆಸಿಕೊಳ್ಳಬೇಕು ಎಂದರು.

ವಿದ್ಯಾಭಾರತಿ ಜಿಲ್ಲಾಧ್ಯಕ್ಷ ಪ್ರೊ.ಎಸ್.ಬಿ.ಸಜ್ಜನಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಜ್ಞಾನದ ಜೊತೆಗೆ ವೈಜ್ಞಾನಿಕ ದೃಷ್ಟಿಕೋನ ಬೆಳೆಸುವುದು ಅಗತ್ಯ ಎಂದರು.

ವಿದ್ಯಾಭಾರತಿಯ ಜಿಲ್ಲಾ ಕಾರ್ಯದರ್ಶಿ ಭಗುಸಿಂಗ್‌ ಜಾಧವ, ಪ್ರತಿಭಾ ಚಾಮಾ, ಬಸವರಾಜ ಕೌಟಗೆ, ರಂಜನಾ ಕುಲಕರ್ಣಿ ಮತ್ತಿತರರು ಪಾಲ್ಗೊಂಡಿದ್ದರು.

ಮೇಳದಲ್ಲಿ 9 ಶಾಲೆಗಳ 390 ವಿದ್ಯಾರ್ಥಿಗಳು, 62 ಶಿಕ್ಷಕರು ಹಾಗೂ 20 ನಿರ್ಣಾಯಕರು ಭಾಗವಹಿಸಿದ್ದರು. ವಿವಿಧ ವಿಭಾಗಗಳಲ್ಲಿ ಸರಸ್ವತಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ವಿದ್ಯಾರಣ್ಯ ಪ್ರೌಢಶಾಲೆಗಳು ಶಾಲಾ ಸರ್ವಶ್ರೇಷ್ಠ ಪ್ರಶಸ್ತಿಗೆ ಆಯ್ಕೆಯಾದವು. ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳು ಸೆಪ್ಟೆಂಬರ್ 4 ರಿಂದ 6ರ ವರೆಗೆ ಬಳ್ಳಾರಿಯಲ್ಲಿ ನಡೆಯುವ ಪ್ರಾಂತ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಲಾಯಿತು.

--

ಚಿತ್ರ 22ಬಿಡಿಆರ್61:

ಬೀದರ್ ನಗರದ ಸರಸ್ವತಿ ಶಾಲೆಯಲ್ಲಿ ವಿದ್ಯಾಭಾರತಿ ಜಿಲ್ಲಾ ಘಟಕದಿಂದ ಜಿಲ್ಲಾ ಗಣಿತ - ವಿಜ್ಞಾನ ಮೇಳ ಹಾಗೂ ಸಂಸ್ಕೃತಿ ಮಹೋತ್ಸವ ನಡೆಯಿತು.

--

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೇಮಾವತಿ ಜಲಾಶಯದಿಂದ ಕೆರೆಕಟ್ಟೆಗಳಿಗೆ ನೀರು: ಶಾಸಕ ಎಚ್.ಟಿ.ಮಂಜು ಪರಿಶೀಲನೆ
ಎಚ್ಡಿಕೆಯಿಂದ ಶ್ರೀಅಭಯ ಆಂಜನೇಯಸ್ವಾಮಿ ದೇಗುಲ ಲೋಕಾರ್ಪಣೆ