ಸರ್ಕಾರಿ ಶಾಲಾ ಶತಮಾನೋತ್ಸವಕ್ಕೆ ಶಿಕ್ಷಣ ಸಚಿವ ಆಗಮನ

KannadaprabhaNewsNetwork |  
Published : Feb 02, 2024, 01:00 AM IST
ಫೊಟೋ 31 MGKD  2 | Kannada Prabha

ಸಾರಾಂಶ

ಕ್ಷಣ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಮೊಬೈಲ್ ಸಂಭಾಷಣೆ ನಡೆಸಿದ ಶಾಸಕರು, ಶಾಲಾ ಶತಮಾನೋತ್ಸವ ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಮಂತ್ರಣ ನೀಡಿದರು. ಪ್ರತಿಕ್ರಿಯೆ ನೀಡಿದ ಶಿಕ್ಷಣ ಸಚಿವರು ಕಾರ್ಯಕ್ರಮದಲ್ಲಿ ಭಾವಹಿಸುವುದಾಗಿ ಭರವಸೆ ನೀಡಿದರು.

ಮುಗಳಖೋಡ: ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಕೇಂದ್ರ ಶಾಲೆಯ ಶತಮಾನೋತ್ಸವಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಗಮಿಸುವುದಾಗಿ ಭರವಸೆ ನೀಡಿದ್ದಾರೆ.

ಬುಧವಾರ ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್. ಬಸವರಾಜಪ್ಪ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಈ ವೇಳೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಮೊಬೈಲ್ ಸಂಭಾಷಣೆ ನಡೆಸಿದ ಶಾಸಕರು, ಶಾಲಾ ಶತಮಾನೋತ್ಸವ ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಮಂತ್ರಣ ನೀಡಿದರು. ಪ್ರತಿಕ್ರಿಯೆ ನೀಡಿದ ಶಿಕ್ಷಣ ಸಚಿವರು ಕಾರ್ಯಕ್ರಮದಲ್ಲಿ ಭಾವಹಿಸುವುದಾಗಿ ಭರವಸೆ ನೀಡಿದರು.ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಕೇಂದ್ರ ಶಾಲೆಯು 1904ರಲ್ಲಿ ಪ್ರಾರಂಭವಾಗಿ 120 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಶಾಲೆಯ ಆಡಳಿತ ಮಂಡಳಿ, ಶಾಲೆಯ ಹಳೆಯ ವಿದ್ಯಾರ್ಥಿಳು ಗ್ರಾಮಸ್ಥರು ಸೇರಿ ಶಾಲೆಯ ಶತಮಾನೋತ್ಸವ ಕಾರ್ಯಕ್ರಮ ಅತೀ ವಿಜೃಂಭಣೆಯಿಂದ ಆಚರಣೆ ಮಾಡುವ ಯೋಜನೆ ಹಮ್ಮಿಕೊಂಡಿದೆ. ಸಭೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಮಹಾಂತೇಶ ಕುರಾಡೆ, ಉಪಾಧ್ಯಕ್ಷೆ ಪಾರ್ವತಿ ಸಂಗಾನಟ್ಟಿ, ಪ್ರಧಾನ ಗುರು ವಿ.ಬಿ ಗಸ್ತಿ, ಪುರಸಭೆ ಸದಸ್ಯ ಪರಗೌಡ ಖೇತಗೌಡರ, ರಾಜಶೇಖರ ನಾಯಿಕ, ರಾವಸಾಬ ಗೌಲತ್ತಿನ್ನವರ, ಪ್ರಮುಖ ಕರೆಪ್ಪ ಮಂಟೂರ, ಅಶೋಕ ಕೊಪ್ಪದ, ರಾಜು ಬಾಬನ್ನವರ, ರಾಮಚಂದ್ರ ಕುರಾಡೆ ಹಾಗೂ ಆಡಳಿತ ಮಂಡಳಿ ಸರ್ವ ಸದಸ್ಯರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಸ್ಲಿಮರು ಸೂರ್‍ಯನಮಸ್ಕಾರ ಮಾಡ್ಬೇಕು : ಹೊಸಬಾಳೆ ಕರೆ
ರೈಲ್ವೆ ಬಡ್ತಿ ಪರೀಕ್ಷೆ ಕನ್ನಡದಲ್ಲೂ ನಡೆಸಲು ಸೋಮಣ್ಣ ತಾಕೀತು