ಶಿಕ್ಷಣ ಸಚಿವ ಮಧು ಬಂಗಾರಪ್ಪ ಟಿಬೇಟಿಯನ್ ಧರ್ಮ ಗುರು ದಲಾಯಿ ಲಾಮಾ ಭೇಟಿ

KannadaprabhaNewsNetwork |  
Published : Dec 28, 2025, 03:45 AM IST
ಮುಂಡಗೋಡ: ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶನಿವಾರ ತಾಲೂಕಿನ ಟಿಬೇಟಿಯನ್ ಕಾಲನಿ ಲಾಮಾ ಕ್ಯಾಂಪ್ ನಂ ೨ ರಲ್ಲಿರುವ ಡ್ರೆಪುಂಗ್ ಬೌದ್ದ ಮಠದಲ್ಲಿ ನೆಲೆಸಿರುವ ನೊಬೆಲ್ ಶಾಂತಿ ಪುರಸ್ಕೃತ, ಟಿಬೇಟಿಯನ್ ಧರ್ಮ ಗುರು ದಲಾಯಿ ಲಾಮಾ ಅವರನ್ನು ಭೇಟಿಯಾಗಿ ಸನ್ಮಾನಿಸಿ ಗೌರವಿಸಿ ಅವರಿಂದ ಆಶಿರ್ವಾದ ಪಡೆದರು. | Kannada Prabha

ಸಾರಾಂಶ

ಶಿಕ್ಷಣ ಸಚಿವ ಮಧು ಬಂಗಾರಪ್ಪ ಶನಿವಾರ ತಾಲೂಕಿನ ಟಿಬೇಟಿಯನ್ ಕಾಲನಿ ಲಾಮಾ ಕ್ಯಾಂಪ್ ನಂ. ೨ರಲ್ಲಿರುವ ಡ್ರೆಪುಂಗ್ ಬೌದ್ಧ ಮಠದಲ್ಲಿ ನೆಲೆಸಿರುವ ನೊಬೆಲ್ ಶಾಂತಿ ಪುರಸ್ಕೃತ, ಟಿಬೇಟಿಯನ್ ಧರ್ಮ ಗುರು ದಲಾಯಿ ಲಾಮಾ ಅವರನ್ನು ಭೇಟಿಯಾಗಿ ಸನ್ಮಾನಿಸಿದರು..

ಮುಂಡಗೋಡ: ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶನಿವಾರ ತಾಲೂಕಿನ ಟಿಬೇಟಿಯನ್ ಕಾಲನಿ ಲಾಮಾ ಕ್ಯಾಂಪ್ ನಂ. ೨ರಲ್ಲಿರುವ ಡ್ರೆಪುಂಗ್ ಬೌದ್ಧ ಮಠದಲ್ಲಿ ನೆಲೆಸಿರುವ ನೊಬೆಲ್ ಶಾಂತಿ ಪುರಸ್ಕೃತ, ಟಿಬೇಟಿಯನ್ ಧರ್ಮ ಗುರು ದಲಾಯಿ ಲಾಮಾ ಅವರನ್ನು ಭೇಟಿಯಾಗಿ ಸನ್ಮಾನಿಸಿ ಅವರಿಂದ ಆಶೀರ್ವಾದ ಪಡೆದರು.

ಬಳಿಕ ಮಾತನಾಡಿದ ಅವರು, ಹಿಂದೆ ನಮ್ಮ ತಂದೆ ಎಸ್.ಬಂಗಾರಪ್ಪ ಅವರು ಲೋಕೋಪಯೋಗಿ ಸಚಿವರಾಗಿದ್ದಾಗ ದಲಾಯಿ ಲಾಮಾ ಅವರನ್ನು ಭೇಟಿಯಾಗಿದ್ದರು. ಅದೇ ರೀತಿ ನಾನು ಈಗ ಶಿಕ್ಷಣ ಸಚಿವನಾಗಿ ಅವರನ್ನು ಭೇಟಿಯಾಗಿರುವುದು ತೀವ್ರ ಸಂತೋಷವಾಯಿತು. ನಮ್ಮ ದೇಶ ಪ್ರತಿಯೊಬ್ಬರನ್ನು ನಮ್ಮವರು ಎಂಬ ಭಾವನೆಯಿಂದ ಕಾಣುತ್ತದೆ. ಅದೇ ರೀತಿ ಟಿಬೇಟಿಯನ್ನರು ಕೂಡ ಅವರ ಕಾರ್ಯ ರೀತಿಯಲ್ಲಿ ನಮ್ಮವರಲ್ಲಿ ಒಬ್ಬರಾಗಿ ಸಹಭಾಳ್ವೆ ಮಾಡುತ್ತಿದ್ದಾರೆ ಎಂದರು.

ಅವರ ಶಾಂತಿ ಪ್ರೀಯತೆ ನಮಗೆ ಹಮ್ಮೆ ತರುವಂತಹದ್ದು, ನಮ್ಮ ದೇಶ ಹಾಗೂ ಅವರೊಂದಿಗಿನ ಭಾಂದವ್ಯ ಸಮಾನತೆಯೊಂದಿಗೆ ಒಂದೇ ತಾಯಿ ಮಕ್ಕಳಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಪ್ರೀತಿಯನ್ನು ಹಂಚಿಕೊಳ್ಳಬೇಕಿದೆ ಎಂದರು.

ಈ ಸಂದರ್ಭದಲ್ಲಿ ಶಿರಸಿ ಉಪ ವಿಭಾಗಾಧಿಕಾರಿ ಕಾವ್ಯರಾಣಿ, ಮುಂಡಗೋಡ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಸುಮಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ, ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಎಚ್.ಎಂ. ನಾಯ್ಕ, ಧರ್ಮರಾಜ ನಡಗೇರಿ, ವೈ.ಪಿ. ಬುಜಂಗಿ, ಕೇಂಜೋಡಿ ಗಲಬಿ, ಮಹ್ಮದಗೌಸ್ ಮಕಾಂದಾರ, ಸಲ್ಮಾ ಶೇರಖಾನೆ, ಶಾರದಾ ರಾಥೊಡ ಮುಂತಾದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲೇಖಕ ತನ್ನನ್ನು ತಾನು ವಿಮರ್ಶೆಗೊಳಪಡಿಸಿಕೊಳ್ಳಬೇಕು
ಕುಂದಾನಗರಿಯಲ್ಲಿ ಬೆಳಗಾವಿ ಉತ್ಸವ