- ಶ್ರೀಗಳ ಜನ್ಮದಿನ ಕಾರ್ಯಕ್ರಮದಲ್ಲಿ ಮುಖ್ಯಶಿಕ್ಷಕ ಶಿವಕುಮಾರ್ ಅಭಿಮತ - - - ಕನ್ನಡಪ್ರಭ ವಾರ್ತೆ, ಹೊನ್ನಾಳಿ
ಲಿಂಗೈಕ್ಯ ಒಡೆಯರ್ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ಜನ್ಮದಿನ ಅಂಗವಾಗಿ ಸೋಮವಾರ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸ್ವಾಮೀಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು.
70ರ ದಶಕದಲ್ಲಿ ಹೊನ್ನಾಳಿ ಅತ್ಯಂತ ಹಿಂದುಳಿದ ತಾಲೂಕಾಗಿತ್ತು. ಹಿರೇಕಲ್ಮಠದ ಶ್ರೀ ಚನ್ನಪ್ಪಸ್ವಾಮಿ ಮಠದ ಪೀಠಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಸಮಾಜದ ಅಭಿವೃದ್ಧಿಗೆ ಶೈಕ್ಷಣಿಕ ಅಭಿವೃದ್ಧಿಯೇ ರಹದಾರಿ ಎಂದು ಪರಿಗಣಿಸಿದ್ದ ಸ್ವಾಮೀಜಿ ಅವರು ಧಾರ್ಮಿಕ ಕೈಂಕರ್ಯಗಳ ಜೊತೆಯಲ್ಲಿ ತಮ್ಮ ವಿದ್ಯಾಪೀಠ ವತಿಯಿಂದ ಪ್ರಾಥಮಿಕ, ಪ್ರೌಢಶಾಲೆಗಳು, ಪದವಿಪೂರ್ವ ಮತ್ತು ಪದವಿ ಕಾಲೇಜುಗಳು, ಸಂಸ್ಕೃತ ಪಾಠ ಶಾಲೆಗಳು, ಬಿ.ಇಡಿ, ಕಾಲೇಜು, ಐಟಿಐ ಕಾಲೇಜುಗಳು ಹೀಗೆ ಶಿಕ್ಷಣ ಕ್ಷೇತ್ರದ ಅನೇಕ ಹಂತಗಳ ಶಾಲಾ- ಕಾಲೇಜುಗಳನ್ನು ತೆರೆದು ಹೊನ್ನಾಳಿಯಲ್ಲಿ ಶಿಕ್ಷಣ ಕ್ರಾಂತಿಗೆ ಮುನ್ನುಡಿ ಹಾಡಿದರು ಎಂದರು.ಸಹಶಿಕ್ಷಕ ಎಂ.ಚನ್ನವೀರಯ್ಯ ಮಾತನಾಡಿ, ಹೊನ್ನಾಳಿ ಹಿರೇಕಲ್ಮಠದ ಶ್ರೀ ಚನ್ನಪ್ಪಸ್ವಾಮಿ ಮಠ ಅನ್ನದಾಸೋಹ, ಅಕ್ಷರ ದಾಸೋಹ ಹಾಗೂ ನ್ಯಾಯದಾನ ದಾಸೋಹ ಹೀಗೆ ಮೂರು ವಿಧವಾದ ದಾಸೋಹಗಳ ಮೂಲಕ ಜಾತಿ-ಮತ ಭೇದವಿಲ್ಲದೇ ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಕೆಲಸ ಮಾಡಿಕೊಂಡು ಬರುತ್ತಿದೆ. ಜೊತೆಗೆ ಪ್ರಸ್ತುತ ಪೀಠಾಧ್ಯಕ್ಷರಾದ ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿಗಳೂ ಹಿರಿಯ ಗುರುಗಳ ಮಾರ್ಗದಲ್ಲಿಯೇ ಸಾಗುತ್ತ ಮಠದ ಕೀರ್ತಿ ಹೆಚ್ಚುವಂತೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಶಾಲೆ ಶಿಕ್ಷಕರಾದ ಬಿ.ರಮೇಶ್, ಎಂ.ಕುಮಾರ್, ಬಿ.ಎನ್. ಗುರುಪ್ರಸಾದ್ ಹಾಗೂ ಶಾಲಾ ಮಕ್ಕಳು ಭಾಗವಹಿಸಿದ್ದರು. ಶಾಲಾ ಮಕ್ಕಳಿಗೆ ಸಿಹಿ ವಿತರಿಸಲಾಯಿತು.
ಟಾಪ್ ಕೋಟ್
- ಸಿ.ಸಿ.ಶಿವಕುಮಾರ್, ಮುಖ್ಯಶಿಕ್ಷಕ
ಒಡೆಯರ ಹತ್ತೂರು ಗ್ರಾಮದ ಎಂವಿಸಿಎಚ್ಎಸ್ ಪ್ರೌಢಶಾಲೆಯಲ್ಲಿ ಸೋಮವಾರ ಹಿರೇಕಲ್ಮಠದ ಲಿಂ. ಒಡೆಯರ ಚಂದ್ರಶೇಖರ ಶಿವಾಚಾರ್ಯರ 89ನೇ ಜಯಂತಿ ಕಾರ್ಯಕ್ರಮ ನಡೆಯಿತು.