ಪುಸ್ತಕ ಸಾಂಗತ್ಯದಿಂದ ಮಾತ್ರ ಶೈಕ್ಷಣಿಕ ಉನ್ನತಿ ಸಾಧ್ಯ

KannadaprabhaNewsNetwork |  
Published : Nov 18, 2024, 12:00 AM IST
ಚಿತ್ರದುರ್ಗ ಪೋಟೋ ಸುದ್ದಿ 444  | Kannada Prabha

ಸಾರಾಂಶ

Educational advancement is possible only through books

-ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಸಮಾರೋಪದಲ್ಲಿ ನಗರಸಭೆ ಅಧ್ಯಕ್ಷೆ ಸುಮಿತ ಅಭಿಮತ

------

ಕನ್ನಡಪ್ರಭವಾರ್ತೆ ಚಿತ್ರದುರ್ಗ

ಪುಸ್ತಕ ಸಾಂಗತ್ಯದಿಂದ ಮಾತ್ರ ಶೈಕ್ಷಣಿಕ ಉನ್ನತಿ ಸಾಧ್ಯ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಪತ್ರಿಕೆ ಹಾಗೂ ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು ಎಂದು ನಗರಸಭೆ ಅಧ್ಯಕ್ಷೆ ಬಿ.ಎನ್.ಸುಮಿತಾ ಹೇಳಿದರು.

ನಗರದ ಶ್ರೀಕೃಷ್ಣ ರಾಜೇಂದ್ರ ನಗರ ಕೇಂದ್ರ ಗ್ರಂಥಾಲಯದಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆ ಹಾಗೂ ಚಿತ್ರದುರ್ಗ ನಗರ ಕೇಂದ್ರ ಗ್ರಂಥಾಲಯ ಇಲಾಖೆಯಿಂದ ಆಯೋಜಿಸಲಾಗಿದ್ದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಸಮಾರೋಪ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು

ಪ್ರಸ್ತುತ ದಿನಗಳಲ್ಲಿ ಯುವ ಪೀಳಿಗೆ ವಿವಿಧ ರೀತಿಯ ದುಶ್ಚಟ ಹಾಗೂ ಮೊಬೈಲ್ ಗೀಳಿಗೆ ದಾಸರಾಗುತ್ತಿದ್ದಾರೆ. ಇದರಿಂದ ಹೊರಬಂದು ಗ್ರಂಥಾಲಯದಲ್ಲಿನ ಸಂಪನ್ಮೂಲಗಳನ್ನು ಬಳಸಿಕೊಂಡು ಜ್ಞಾನ ಸಂಪತ್ತು ವೃದ್ಧಿಸಿಕೊಳ್ಳಬೇಕು ಎಂದರು.

ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಕೊಳ್ಳಿ ಬಸವರಾಜ ಮಾತನಾಡಿ, ಪ್ರತಿವರ್ಷ 14 ರಿಂದ 20ರವರೆಗೆ ದೇಶಾದ್ಯಂತ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಆಚರಿಸಲಾಗುತ್ತದೆ. ದೇಶದಲ್ಲಿ ಗ್ರಂಥಾಲಯ ಎಂಬ ಪರಿಕಲ್ಪನೆ ನೀಡಿದವರು ಎಸ್.ಆರ್.ರಂಗನಾಥ್. ಈ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳಿಗೆ ವಿದ್ಯೆ, ಜ್ಞಾನಾರ್ಜನೆ, ಉದ್ಯೋಗಾವಕಾಶ ದೊರಕಿಸಿಕೊಟ್ಟ ಮಹಾನ್ ಚೇತನ. ಮಕ್ಕಳನ್ನು ಮುನ್ನೆಲೆಗೆ ತರುವಲ್ಲಿ ವಿವಿಧ ಕಾರ್ಯಕ್ರಮಗಳ ಆಯೋಜಿಸಲಾಗುತ್ತಿದೆ. ಮಕ್ಕಳಿಗೆ ಗ್ರಂಥಾಲಯ ಮಹತ್ವ ತಿಳಿಸಲು, ಮಕ್ಕಳ ಗ್ರಂಥಾಲಯ ಸ್ಥಾಪಿಸಲಾಗಿದೆ. ವಿದ್ಯಾರ್ಥಿಗಳು, ಮಕ್ಕಳು, ಓದುಗರು ಇದರ ಸದ್ಭಳಕೆ ಮಾಡಿಕೊಳ್ಳಬೇಕು ಎಂದರು.

ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್‍ನ ಜಿಲ್ಲಾಧ್ಯಕ್ಷ ಯೋಗೇಶ್ ಸಹ್ಯಾದ್ರಿ ಮಾತನಾಡಿ, ಯಾವುದೇ ಒಂದು ಗ್ರಂಥಾಲಯ ಉಳಿಯಬೇಕು, ಬೆಳೆಯಬೇಕು ಎಂದರೆ ಓದುಗರು ಮುಖ್ಯ ಕಾರಣ. ಪುಸ್ತಕ ಓದುವುದರಿಂದ ಸಿಗುವ ಖುಷಿ, ಸಂತೋಷ ಪರ್ಯಾಯ ವಸ್ತುಗಳಲ್ಲಿ ಸಿಗುವುದಿಲ್ಲ ಎಂದರು.

ಯಶೋಧ ರಾಜಶೇಖರಪ್ಪ ಅವರು ಕನ್ನಡ ನಾಡಿಗೆ ಚಿತ್ರದುರ್ಗದ ಕೊಡುಗೆ ಹಾಗೂ ಗ್ರಂಥಾಲಯದ ಉಪಯೋಗ ಕುರಿತು ಉಪನ್ಯಾಸ ನೀಡಿದರು. ಇದೇ ಸಂದರ್ಭದಲ್ಲಿ ಚಿತ್ರಕಲೆ, ಪ್ರಬಂಧ ಸ್ಪರ್ಧೆ, ಉತ್ತಮ ಓದುಗ, ಆಶುಭಾಷಣ ಹಾಗೂ ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪತ್ರ ಮತ್ತು ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಸಾಹಿತಿ ಹೆಚ್.ಆನಂದ್ ಕುಮಾರ್, ನಗರಸಭೆ ಸದಸ್ಯೆ ಪಿ.ಎನ್.ಶ್ವೇತಾ ಸೇರಿದಂತೆ ಗ್ರಂಥಾಲಯದ ಸಿಬ್ಬಂದಿ, ಓದುಗರು ಇದ್ದರು.

----------------

ಪೋಟೋ: ಚಿತ್ರದುರ್ಗದ ಕೃಷ್ಣ ರಾಜೇಂದ್ರ ಗ್ರಂಥಾಲಯದದಲ್ಲಿ ಶನಿವಾರ ನಡೆದ ಗ್ರಂಥಾಲಯ ಸಪ್ತಾಹದ ಸಮಾರೋಪದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾಗವರ ಗೌರವಿಸಲಾಯಿತು.

-----------

16 ಸಿಟಿಡಿ6

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹರಿಹರ ಪ್ರಮುಖ ರಸ್ತೆಗಳಲ್ಲಿ ಬೀದಿದೀಪ, ಸಿಸಿ ಕ್ಯಾಮೆರಾ ಅಳವಡಿಸಿ
ಪ್ರೀತಿಸುವಂತೆ ಪೊಲೀಸ್‌ ಇನ್‌ಸ್ಪೆಕ್ಟರ್‌ಬೆನ್ನತ್ತಿದ್ದ ಮಹಿಳೆ ಈಗ ಜೈಲು ಪಾಲು