ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಫೆ. 28ರಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಮಟ್ಟದ ಶೈಕ್ಷಣಿಕ ಮಹಾಸಮ್ಮೇಳನ ಹಾಗೂ ಸಂಘದ ಸುವರ್ಣ ಮಹೋತ್ಸವ, ಧನ್ಯತಾ ಸಮಾರಂಭ ನಡೆಯಲಿದೆ ಎಂದು ಕುಷ್ಟಗಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಿಂಗಪ್ಪ ಗುನ್ನಾಳ ಹೇಳಿದರು.
ಕುಷ್ಟಗಿ: ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಫೆ. 28ರಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಮಟ್ಟದ ಶೈಕ್ಷಣಿಕ ಮಹಾಸಮ್ಮೇಳನ ಹಾಗೂ ಸಂಘದ ಸುವರ್ಣ ಮಹೋತ್ಸವ, ಧನ್ಯತಾ ಸಮಾರಂಭ ನಡೆಯಲಿದ್ದು, ಕುಷ್ಟಗಿ ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕ, ಶಿಕ್ಷಕಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಕುಷ್ಟಗಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಿಂಗಪ್ಪ ಗುನ್ನಾಳ ಹೇಳಿದರು.
ಪಟ್ಟಣದ ಗುರುಭವನದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಿದ್ದು ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ ಟ್ಯಾಕ್ಸ್,ಇ-ಫೈಲಿಂಗ್ ಲೋಕಾರ್ಪಣೆ ಮಾಡಲಿದ್ದಾರೆ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಬಾಲ ಸಂಜೀವಿನಿ ಯೋಜನೆಯ ಲೋಕಾರ್ಪಣೆ ಸೇರಿದಂತೆ ಅನೇಕ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಲಕ್ಷಾಂತರ ಶಿಕ್ಷಕರು ಭಾಗವಹಿಸಲಿದ್ದಾರೆ ಎಂದ ಅವರು, ಈ ಸಮ್ಮೇಳನದಲ್ಲಿ ಭಾಗವಹಿಸುವ ಶಿಕ್ಷಕರಿಗೆ ಇಲಾಖೆಯಿಂದ ಒಒಡಿ ಸೌಲಭ್ಯ, ವಸತಿ ವ್ಯವಸ್ಥೆ, ಊಟ ಮತ್ತು ಉಪಾಹಾರ ವ್ಯವಸ್ಥೆ ಮಾಡಲಾಗಿದ್ದು, ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರು ಭಾಗವಹಿಸುವ ಮೂಲಕ ಸಮ್ಮೇಳನ ಯಶಸ್ವಿಗೊಳಿಸಬೇಕೆಂದು ತಿಳಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.