ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಶನಿವಾರ ಬಿವಿವಿ ಸಂಘ ನೂತನ ಸಭಾಂಗಣದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಬಾಗಲಕೋಟೆ ಜಿಲ್ಲಾ ಘಟಕದಿಂದ 2021-22 ಹಾಗೂ 2022-23ನೇ ಶೈಕ್ಷಣಿಕ ವರ್ಷಗಳಲ್ಲಿ ಜರುಗಿದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಶೇ.90ಕ್ಕೂ ಅಧಿಕ ಅಂಕ ಪಡೆದ ಜಿಲ್ಲೆಯ ವೀರಶೈವ-ಲಿಂಗಾಯತ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪುರಸ್ಕಾರ ಪ್ರದಾನ ಮಾಡಿ ಮಾತನಾಡಿದರು.
ಈ ನಾಡಿಗೆ ಮಠಗಳು ಹಾಗೂ ಶಿಕ್ಷಣ ಸಂಸ್ಥೆಗಳ ಮೂಲಕ ಶೈಕ್ಷಣಿಕ ಬೆಳವಣಿಗೆಗೆ ತನ್ನದೆಯಾದ ಕೊಡುಗೆ ನೀಡಿರುವುದು ವೀರಶೈವ ಸಮಾಜ, ಇದು ಸಕಲರಿಗೂ ಲೇಸನ್ನು ಬಯಸುವ ಸಮುದಾಯವಾಗಿದೆ. ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರತಿಭೆ ಗುರುತಿಸಿ ಸನ್ಮಾನಿಸಿ ಗೌರವಿಸುತ್ತಿರುವುದು ಹೆಮ್ಮೆಯ ವಿಷಯ ಎಂದರು.ಅಧ್ಯಕ್ಷತೆ ವಹಿಸಿ ಮಾತನಾಡಿ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಜಿ.ಎನ್. ಪಾಟೀಲ, ನಾಡಿನಲ್ಲಿ ವೀರಶೈವ ಲಿಂಗಾಯತ ಶಿಕ್ಷಣ ಸಂಸ್ಥೆಗಳು ಹೆಮ್ಮರವಾಗಿ ಬೆಳೆದಿವೆ, ಅದರಲ್ಲೂ ಬಾಗಲಕೋಟೆಯ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದ ಕಾರ್ಯಧ್ಯಕ್ಷ ಡಾ.ವೀರಣ್ಣ ಚರಂತಿಮಠ ಅವರ ನೇತೃತ್ವದಲ್ಲಿ 28 ಇದ್ದ ಅಂಗಸಂಸ್ಥೆಗಳು ಈಗ 168 ಸಂಸ್ಥೆಗಳಾಗಿದ್ದು, ಒಂದು ವಿಶ್ವವಿದ್ಯಾಲಯದಂತೆ ಕೆಲಸ ಮಾಡುತ್ತಿರುವುದು ಹೆಮ್ಮೆಯ ವಿಷಯ. ಕರ್ನಾಟಕದ ಏಳಿಗೆಗೆ ವೀರಶೈವ ಲಿಂಗಾಯತ ಸಮಾಜದ ಏಳಿಗೆ ಮುಖ್ಯ. ಇಂದು ಎಲ್ಲ ರಂಗದಲ್ಲೂ ವೀರಶೈವ ಲಿಂಗಾಯತ ಸಮುದಾಯ ಮುಂಚೂಣಿಯಲ್ಲಿದೆ ಎಂದು ತಿಳಿಸಿದರು.
ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯ ಬಸವರಾಜ ಭಗವತಿ ಪ್ರಸ್ತಾವಿಕ ಮಾತನಾಡಿದರು.
ನಿರ್ಮಲಾ ಲೂತಿಮಠ,ಶಿವಲೀಲಾ ಪಟ್ಟಣಶೆಟ್ಟಿ, ವಿಜಯಲಕ್ಷ್ಮೀ ಭದ್ರಶಟ್ಟಿ ಪ್ರಾರ್ಥಿಸಿದರು, ಡಾ. ಗೀತಾ ದಾನಶೆಟ್ಟಿ, ಬಸವರಾಜ ತಿಪಶೆಟ್ಟಿ ನಿರೂಪಿಸಿದರು. ಕಾರ್ಯಕ್ರಮಕ್ಕೂ ಮುಂಚೆ ಹಾನಗಲ್ಲ ಕುಮಾರೇಶ್ವರರ ಭಾವಚಿತ್ರಕ್ಕೆ ಪುಷ್ಪಾಂಜಲಿ ಸಲ್ಲಿಸಿದರು.