ಚನ್ನಪಟ್ಟಣ: ಮಂಡ್ಯ, ಬೆಂಗಳೂರು ಗ್ರಾಮಾಂತರ ಹಾಗೂ ತುಮಕೂರು ಲೋಕಸಭಾ ಕ್ಷೇತ್ರಗಳಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಡಾ.ಸಿ.ಎನ್.ಮಂಜುನಾಥ್ ಹಾಗೂ ವಿ.ಸೋಮಣ್ಣ ಅವರು ಜಯಗಳಿಸಿದ ಹಿನ್ನೆಲೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ಇತಿಹಾಸ ಪ್ರಸಿದ್ಧ ಕೆಂಗಲ್ ಆಂಜನೇಯಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ೧೦೧ ಈಡುಗಾಯಿ ಅರ್ಪಿಸಿದರು.
ಜೆಡಿಎಸ್ ಮುಖಂಡ ರಾಮಕೃಷ್ಣೇಗೌಡ ಮಾತನಾಡಿ, ಜೆಡಿಎಸ್- ಬಿಜೆಪಿ ಮೈತ್ರಿಯಿಂದ ರಾಜ್ಯದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವುದಕ್ಕೆ ಸಾಧ್ಯವಾಗಿದೆ. ಹಣಕ್ಕೆ ಬೆಲೆ ಕೊಡದೆ, ಮಾನವೀಯ ಗುಣಗಳಿಗೆ ಬೆಲೆ ನೀಡಿ ಡಾ.ಸಿ.ಎನ್.ಮಂಜುನಾಥ್ ಅವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಿದ ಮತದಾರಿಗೆ ಧನ್ಯವಾದ ತಿಳಿಸಿದರು.
ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಂಪುರ ಮಲ್ಲೇಶ್ ಮಾತನಾಡಿ, ಎಚ್.ಡಿ. ಕುಮಾರಸ್ವಾಮಿ, ಡಾ.ಸಿ.ಎನ್.ಮಂಜುನಾಥ್ ಹಾಗೂ ವಿ.ಸೋಮಣ್ಣ ಮೂವರೂ ಸಂಸದರು ಕೇಂದ್ರದಲ್ಲಿ ಉನ್ನತ ಹುದ್ದೆ ಅಲಂಕರಿಸಲಿ ಎಂದು ಹಾರೈಸಿದರು. ಇದೇ ವೇಳೆ ಸಾರ್ವಜನಿಕರಿಗೆ ಸಿಹಿ ಹಂಚುವ ಮೂಲಕ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದರು.ಎಪಿಎಂಸಿ ಮಾಜಿ ಅಧ್ಯಕ್ಷ ಮೈಲನಾಯಕನ ಹೊಸಹಳ್ಳಿ ಸಿದ್ದಪ್ಪ, ಕೃಷ್ಣಪ್ಪ ಮಂಗಳಾರಪೇಟೆ, ಮರಂಕೇಗೌಡ, ದಾಸಪ್ಪ, ನಾಗೇಶ್ ಗುಬ್ಬಯ್ಯ, ದೊಡ್ಡಮಳೂರು ಕೃಷ್ಣ, ಸಿದ್ದಪ್ಪಾಜಿ, ಸಿ.ಕೆ. ಕೃಷ್ಣ ಇತರರಿದ್ದರು.
ಪೊಟೋ೭ಸಿಪಿಟಿ೧:ಜೆಡಿಎಸ್-ಬಿಜೆಪಿ ಕಾರ್ಯಕರ್ತರು ಶ್ರೀ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಈಡುಗಾಯಿ ಒಡೆದರು.