ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕೆ ಫಲಕಾರಿ ಕ್ರಮ: ಶಿಕ್ಷಣಾಧಿಕಾರಿ ಎನ್.ಆರ್.ತಿಪ್ಪೇಸ್ವಾಮಿ

KannadaprabhaNewsNetwork |  
Published : May 23, 2024, 01:08 AM IST
ಚಿತ್ರ 2 | Kannada Prabha

ಸಾರಾಂಶ

ತಾಲೂಕಿನ ಪ್ರೌಢಶಾಲಾ ಮುಖ್ಯ ಶಿಕ್ಷಕರು ಮತ್ತು ಸಹ ಶಿಕ್ಷಕರ ಸಭೆಯನ್ನು ಉದ್ದೇಶಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಂ.ತಿಪ್ಪೇಸ್ವಾಮಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಹಿರಿಯೂರು

ಹತ್ತನೇ ತರಗತಿಯ ಫಲಿತಾಂಶವನ್ನು ಉತ್ತಮಗೊಳಿಸಲು ಶಿಕ್ಷಣ ಇಲಾಖೆಯು ಮತ್ತಷ್ಟು ಪರಿಣಾಮಕಾರಿಯಾದ ಕಾರ್ಯ ಕ್ರಮಗಳನ್ನು ಅಳವಡಿಸಿಕೊಳ್ಳಲಿದೆ ಎಂದು ಉಪ ನಿರ್ದೇಶಕರ ಕಚೇರಿಯ ಶಿಕ್ಷಣಾಧಿಕಾರಿ ಎನ್.ಆರ್.ತಿಪ್ಪೇಸ್ವಾಮಿ ತಿಳಿಸಿದರು. ತಾಲೂಕಿನ ಪ್ರೌಢಶಾಲಾ ಮುಖ್ಯಶಿಕ್ಷಕರು ಮತ್ತು ಸಹ ಶಿಕ್ಷಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯ ಫಲಿತಾಂಶ ಕಳೆದ ಬಾರಿ ಕುಸಿತವಾಗಿರುವುದರಿಂದ ಎಲ್ಲಾ ಶಾಲೆಗಳ ಶಿಕ್ಷಕರು ಫಲಿತಾಂಶ ವಿಶ್ಲೇಷಣೆಯನ್ನು ಮಾಡಿ ಸೂಕ್ತ ಕಾರ್ಯತಂತ್ರಗಳನ್ನು ಅಳವಡಿಸಿಕೊಳ್ಳಬೇಕು ಎಂದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಸಿಎಂ ತಿಪ್ಪೇಸ್ವಾಮಿ ಮಾತನಾಡಿ, ತಾಲೂಕಿನ ಫಲಿತಾಂಶ ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಕುಸಿತ ಕಂಡಿದೆ. ಆದರೆ ಜಿಲ್ಲೆಯೊಳಗೆ ಒಂದು ಸ್ಥಾನ ಮೇಲೇರಿದೆ, ಇಷ್ಟೇ ಅಲ್ಲದೆ ಜಿಲ್ಲೆಯ ಅತಿ ಹೆಚ್ಚು ಅಂಕ ಗಳಿಸಿದ ನಾಲ್ವರಲ್ಲಿ ಇಬ್ಬರು ಹಿರಿಯೂರು ತಾಲೂಕಿನವರೇ ಆಗಿದ್ದಾರೆ. ಹದಿನಾಲ್ಕು ಶಾಲೆಗಳು ಶೇ 100 ಫಲಿತಾಂಶ ವನ್ನು ಪಡೆದು ಜಿಲ್ಲೆಯಲ್ಲಿ ಪ್ರಥಮ ಸ್ಥಾನದಲ್ಲಿವೆ. ಒಟ್ಟಾರೆ ಫಲಿತಾಂಶವು ಜಿಲ್ಲಾ ಸರಾಸರಿ ಫಲಿತಾಂಶಕ್ಕಿಂತಲೂ ಹೆಚ್ಚಿದ್ದು, ರಾಜ್ಯಮಟ್ಟದ ಫಲಿತಾಂಶಕ್ಕೆ ಸಮನಾಗಿದೆ ಎಂದ ಅವರು, ಈ ಬಾರಿಯ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ ಪರೀಕ್ಷಾ ಅವ್ಯವಹಾರಗಳನ್ನು ನಿಯಂತ್ರಿಸಿ ಪಾವಿತ್ರ್ಯತೆಯನ್ನು ಕಾಪಾಡಲು ಸಹಕಾರಿಯಾಯಿತು. ಹಾಗೂ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಬೋಧನೆ ಕಲಿಕೆ ಪ್ರಕ್ರಿಯೆಯಲ್ಲಿ ಹೆಚ್ಚು ಶ್ರಮ ವಹಿಸುವ ಸತ್ಸಂಪ್ರದಾಯಕ್ಕೆ ನಾಂದಿ ಹಾಡಿದಂತಾಗಿದೆ ಎಂದು ಅಭಿಪ್ರಾಯಪಟ್ಟರು.

ಇದೇ ವೇಳೆ ಸಭೆಯಲ್ಲಿ ಭಾಗವಹಿಸಿದ್ದ ಶಿಕ್ಷಕರು ತಮ್ಮ ಶಾಲೆಗಳ ಫಲಿತಾಂಶವನ್ನು ವಿಶ್ಲೇಷಿಸಿ ಫಲಿತಾಂಶವನ್ನು ಉತ್ತಮ ಪಡಿಸಿಕೊಳ್ಳಲು ಯಾವ ಕಾರ್ಯತಂತ್ರಗಳನ್ನು ಅನುಸರಿಸಲಾಗುವುದು ಎಂಬ ಬಗ್ಗೆ ಮಾಹಿತಿ ಹಂಚಿಕೊಂಡರು. ಈ ಸಂದರ್ಭ ದಲ್ಲಿ ನೋಡಲ್ ಅಧಿಕಾರಿಗಳಾದ ಇಸಿಓ ಹರೀಶ್, ಗಿರೀಶ್ ಮತ್ತು ಶಿಕ್ಷಕರುಗಳು ಹಾಜರಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ