ಸರ್ಕಾರದ ಯೋಜನೆಗಳು ಪರಿಣಾಮಕಾರಿ ಅನುಷ್ಠಾನ ಅಗತ್ಯ: ಜುಬೇದಾ ಸಲಹೆ

KannadaprabhaNewsNetwork |  
Published : Nov 17, 2025, 01:02 AM IST
ನರಸಿಂಹರಾಜಪುರ ತಾಲೂಕು ಪಂಚಾಯಿತಿಯ ಸಾಮಾರ್ಥ್ಯ ಸೌಧದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗಾಗಿ ನಡೆದ 3 ದಿನಗಳ ತರಬೇತಿ ಶಿಬಿರವನ್ನು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜುಬೇದ ಉದ್ಘಾಟಿಸಿದರು. | Kannada Prabha

ಸಾರಾಂಶ

ನರಸಿಹಂರಾಜಪುರಸರ್ಕಾರದ ಸಂಸ್ಥೆಗಳಿಂದ ನೀಡುವ ತರಬೇತಿ ಪಡೆದ ಅಂಗನವಾಡಿ ಕಾರ್ಯಕರ್ತೆಯರು ಸರ್ಕಾರಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಪ.ಪಂ. ಅಧ್ಯಕ್ಷೆ ಜುಬೇದಾ ಅಂಗನವಾಡಿ ಕಾರ್ಯಕರ್ತೆಯರಿಗೆ ಕರೆ ನೀಡಿದರು.

- ತಾಲೂಕು ಪಂಚಾಯಿತಿ ಸಾಮಾರ್ಥ್ಯ ಸೌಧದಲ್ಲಿ ಪೋಷಣ್ ಬಿ ಹಾಗೂ ಪಡಾಯ್ ಬಿ ತರಬೇತಿ ಉದ್ಘಾಟನೆ

ಕನ್ನಡಪ್ರಭ ವಾರ್ತೆ, ನರಸಿಹಂರಾಜಪುರ

ಸರ್ಕಾರದ ಸಂಸ್ಥೆಗಳಿಂದ ನೀಡುವ ತರಬೇತಿ ಪಡೆದ ಅಂಗನವಾಡಿ ಕಾರ್ಯಕರ್ತೆಯರು ಸರ್ಕಾರಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಪ.ಪಂ. ಅಧ್ಯಕ್ಷೆ ಜುಬೇದಾ ಅಂಗನವಾಡಿ ಕಾರ್ಯಕರ್ತೆಯರಿಗೆ ಕರೆ ನೀಡಿದರು.

ಮಂಗಳವಾರ ತಾಪಂ ಸಾಮರ್ಥ್ಯಸೌಧದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಸಹಭಾಗಿತ್ವದಲ್ಲಿ ಪೋಷಣ್ ಭಿ, ಪಡಾಯ್ ಭಿ ಯೋಜನೆಯಡಿ ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರಿಗೆ ಆಯೋಜಿಸಿದ್ದ ಮೂರು ದಿನಗಳ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಸರ್ಕಾರದ ಯಾವುದೇ ಯೋಜನೆಗಳು ಸರಿಯಾದ ರೀತಿಯಲ್ಲಿ ಅನುಷ್ಠಾನಗೊಂಡು ಅರ್ಹ ಫಲಾನುಭವಿಗಳಿಗೆ ತಲುಪಬೇಕಾದರೆ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಅವರಿಗೆ ಸೂಕ್ತ ತರಬೇತಿ ನೀಡಲಾಗುತ್ತಿದೆ. ಇದರ ಸದ್ಬಳಕೆ ಮಾಡಿಕೊಂಡು ಕಾರ್ಯಕರ್ತೆಯರು ಅಂಗನವಾಡಿ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕೆಂದರು.ಸಿಡಿಪಿಓ ವೀರಭದ್ರಯ್ಯ ಮಾಜಿಗೌಡ್ರ ಮಾತನಾಡಿ, ಕೌಶಲ್ಯಾಭಿವೃದ್ಧಿ ಸಾಮರ್ಥ್ಯ ಹೆಚ್ಚಿಸುವುದು, ಅಂಗನವಾಡಿ ಮಕ್ಕಳ ಆರೋಗ್ಯ ಮತ್ತು ಸ್ವಚ್ಛತೆ, ನೈರ್ಮಲ್ಯ, ಸಾಮಾಜಿಕ, ಶೈಕ್ಷಣಿಕಕ್ಕೆ ಹೆಚ್ಚಿನ ಆದ್ಯತೆ ನೀಡುವುದೇ ಈ ತರಬೇತಿ ಮುಖ್ಯ ಉದ್ದೇಶ. ತಾಲೂಕಿನ 137 ಅಂಗನವಾಡಿ ಕೇಂದ್ರಗಳ 137 ಅಂಗನವಾಡಿ ಕಾರ್ಯಕರ್ತೆಯರಿಗೂ ಈ ತರಬೇತಿ ನೀಡುತ್ತಿದ್ದು ಎಲ್ಲರೂ ಪಾಲ್ಗೊಂಡು ತರಬೇತಿಯಲ್ಲಿ ನೀಡುವ ಮಾರ್ಗದರ್ಶನ, ಸೂಚನೆ ಪಾಲಿಸಿಕೊಂಡು ಅಂಗನವಾಡಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಪೋಷಣ್ ಭಿ, ಪಡಾಯ್ ಭಿ ಯೋಜನೆ ಶೇ.100 ರಷ್ಟು ಪ್ರಗತಿ ಸಾಧಿಸ ಬೇಕೆಂದರು.ತಾಲೂಕು ಆರೋಗ್ಯ ನಿರೀಕ್ಷಣಾಧಿಕಾರಿ ದರ್ಶನಾಥ್ ಪೌಷ್ಠಿಕ ಆಹಾರದ ಬಗ್ಗೆ ತರಬೇತಿ ನೀಡಿ, ಮಕ್ಕಳಿಗೆ ಚಿಕ್ಕ ವಯಸ್ಸಿನಿಂದಲೇ ಪೌಷ್ಠಿಕ ಆಹಾರ ನೀಡಬೇಕು. ಮಕ್ಕಳು ಮನೆಗಿಂತ ಹೆಚ್ಚಿನ ಸಮಯ ಅಂಗನವಾಡಿ, ಶಾಲೆಗಳಲ್ಲಿ ಕಳೆಯುವುದರಿಂದ ಅವರಿಗೆ ಸೂಕ್ತ ಪೌಷ್ಠಿಕ ಆಹಾರ ನೀಡುವುದು ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಜವಾಬ್ದಾರಿಯಾಗಿರುತ್ತದೆ ಎಂದರು. ಕ್ಷಯ ರೋಗ ಚಿಕಿತ್ಸಾ ಮೇಲ್ವಿಚಾರಕ ಪವನ್ಕರ್ ಕ್ಷಯ ರೋಗದ ಬಗ್ಗೆ ಮಾಹಿತಿ ನೀಡಿ, 2 ವಾರಕ್ಕಿಂತ ಅಧಿಕ ಕೆಮ್ಮು ಇರುವುದು, ಮಧ್ಯಾಹ್ನ ಅಥವಾ ಸಂಜೆ ವೇಳೆ ಜ್ವರ ಕಾಣಿಸಿಕೊಳ್ಳುವುದು, ಕಪದಲ್ಲಿ ರಕ್ತ ಬೀಳುವುದು, ಎದೆ ನೋವು, ತೂಕ ಕಡಿಮೆ ಆಗುವುದು ಕ್ಷಯ ರೋಗದ ಲಕ್ಷಣ. ಈ ಲಕ್ಷಣಗಳು ಕಂಡು ಬಂದ ಕೂಡಲೇ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ, ವೈದ್ಯರಿಂದ ಪರೀಕ್ಷಿಸಿಕೊಳ್ಳಬೇಕು. ಎಕ್ಸರೇ, ಕಪ ಪರೀಕ್ಷೆ ಮಾಡಿಸಿ, ಕ್ಷಯ ರೋಗ ಸಾಬೀತಾದರೆ 6 ತಿಂಗಳವರೆಗೆ ಉಚಿತ ಚಿಕಿತ್ಸೆ ನೀಡಲಾಗುವುದು. ಪೋಷಣ್ ಅಭಿಯಾನದಡಿ ಅಂತಹವರಿಗೆ ಪೌಷ್ಠಿಕ ಆಹಾರದ ಕಿಟ್‌ಗಳನ್ನು ವಿತರಿಸಲಾಗುವುದೆಂದರು.ಕಾರ್ಯಕ್ರಮದಲ್ಲಿ ಸಿಡಿಪಿಒ ಇಲಾಖೆ ಸಂಪನ್ಮೂಲ ವ್ಯಕ್ತಿಗಳಾದ ನಳಿನಾಕ್ಷಿ, ಸಾವಿತ್ರಮ್ಮ, ಕಾವ್ಯಶ್ರೀ, ತಾಲ್ಲೂಕು ಎನ್.ಆರ್.ಎಲ್.ಎಂ. ಯೋಜನೆ ತಾಲ್ಲೂಕು ವ್ಯವಸ್ಥಾಪಕ ಸುಬ್ರಮಣ್ಯ, ಪೋಷಣ್ ಅಭಿಯಾನ ಸಂಯೋಜಕ ಪ್ರದೀಪ್, ಅಲ್ಪ ಸಂಖ್ಯಾತರ ಇಲಾಖೆ ನವಾಜ್ ಇದ್ದರು. ತರಬೇತಿಯಲ್ಲಿ ತಾಲೂಕಿನ 107 ಅಂಗನವಾಡಿಗಳ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ