ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ, ಮೇಲ್ವಿಚಾರಣಾ ಸಮಿತಿ ಸಭೆ

KannadaprabhaNewsNetwork |  
Published : Nov 02, 2025, 03:45 AM IST
ಚಿತ್ರ : 29ಎಂಡಿಕೆ3 : ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಮತ್ತು ಮೇಲ್ವಿಚಾರಣಾ ಸಮಿತಿ ಸಭೆ ನಡೆಯಿತು.  | Kannada Prabha

ಸಾರಾಂಶ

ಪಡಿತರ ಕಾರ್ಡ್‌ಗಳ ಪರಿಷ್ಕರಣಾ ಕಾರ್ಯ ನಡೆಯುತ್ತಿದ್ದು, ಈ ಅವಕಾಶವನ್ನು ಅರ್ಹರು ಬಳಸಿಕೊಳ್ಳವಂತಾಗಬೇಕು ಎಂದು ಧರ್ಮಜ ಉತ್ತಪ್ಪ ಹೇಳಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಪಡಿತರ ಕಾರ್ಡುಗಳ ಪರಿಷ್ಕರಣಾ ಕಾರ್ಯ ನಡೆಯುತ್ತಿದ್ದು, ಈ ಅವಕಾಶವನ್ನು ಅರ್ಹರು ಬಳಸಿಕೊಳ್ಳುವಂತಾಗಬೇಕು ಎಂದು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷರಾದ ತಿತಿರ ಧರ್ಮಜ ಉತ್ತಪ್ಪ ಅವರು ತಿಳಿಸಿದ್ದಾರೆ.

ನಗರದ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ಮಂಗಳವಾರ ನಡೆದ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಮತ್ತು ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಅರ್ಹರಿಗೆ ಬಿಪಿಎಲ್‌ನಿಂದ ಎಪಿಎಲ್‌ಗೆ ಪಡಿತರ ಚೀಟಿ ವರ್ಗಾವಣೆ ಆಗಿದ್ದಲ್ಲಿ, ಆಹಾರ ಇಲಾಖೆ ಅಥವಾ ತಾಲೂಕಿನ ತಹಸೀಲ್ದಾರ್ ಕಚೇರಿಯ ಆಹಾರ ಶಿರಸ್ತೆದಾರರಿಗೆ ಮನವಿ ಸಲ್ಲಿಸುವಂತಾಗಬೇಕು. ಇದರಿಂದ ಪರಿಶೀಲಿಸಿ ಪುನಃ ಬಿಪಿಎಲ್ ಕಾರ್ಡ್ ವಿತರಿಸಲಿದ್ದಾರೆ. ಆ ನಿಟ್ಟಿನಲ್ಲಿ ಆಹಾರ ಇಲಾಖೆಯವರು ಅಗತ್ಯ ಜಾಗೃತಿ ಮೂಡಿಸುವಂತೆ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷರು ನಿರ್ದೇಶನ ನೀಡಿದರು. ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನ ಮತ್ತು ಪ್ರಗತಿ ಸಂಬಂಧ ಜಿಲ್ಲಾ ಮಟ್ಟದಲ್ಲಿ ಸಮ್ಮೇಳನ ಆಯೋಜಿಸಲಾಗುವುದು. ಸಮ್ಮೇಳನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಗ್ಯಾರಂಟಿ ಯೋಜನೆ ರಾಜ್ಯ ಅನುಷ್ಠಾನ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಹೀಗೆ ಹಲವರು ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಸಮ್ಮೇಳನ ನಡೆದಿದೆ ಎಂದು ತಿಳಿಸಿದರು. ಗ್ಯಾರಂಟಿ ಯೋಜನಾ ಜಿಲ್ಲಾ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಪಂಕಜ ಅವರು ಮಾತನಾಡಿ ತಿತಿಮತಿ ವ್ಯಾಪ್ತಿಯಲ್ಲಿ ಬೀದಿ ದೀಪ ಸರಿಪಡಿಸುವಂತಾಗಬೇಕು. ಜೊತೆಗೆ ವಿದ್ಯುತ್ ಪೂರೈಕೆ ಸಮರ್ಪಕವಾಗಿ ಪೂರೈಸಬೇಕು. ಹಾಗೆಯೇ ಹಳೇ ಕಂಬಗಳನ್ನು ಬದಲಿಸಿ ಹೊಸ ವಿದ್ಯುತ್ ಕಂಬ ಹಾಗೂ ವಿದ್ಯುತ್ ಪರಿವರ್ತಕ ಅಳವಡಿಸುವಂತೆ ಸಲಹೆ ಮಾಡಿದರು. ಮತ್ತೊಬ್ಬ ಸದಸ್ಯರಾದ ಜಾನ್ಸನ್ ಮಾತನಾಡಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಶೇಕಡವಾರು ಪ್ರಗತಿ ಹಾಗೂ ಜಿಲ್ಲೆಯ ಇಬ್ಬರು ಶಾಸಕರು ಅಭಿವೃದ್ಧಿಗೆ ಸರ್ಕಾರದ ಮಟ್ಟದಲ್ಲಿ ಹೆಚ್ಚಿನ ಅನುದಾನ ಬಿಡುಗಡೆ ಮಾಡಿಸಿದ್ದಾರೆ. ಆದ್ದರಿಂದ ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳುವಂತಾಗಬೇಕು ಎಂದು ಸಲಹೆ ನೀಡಿದರು. ಸದಸ್ಯರಾದ ಕಾಂತರಾಜು ಅವರು ಮಾತನಾಡಿ ಗ್ಯಾರಂಟಿ ಯೋಜನೆಗಳು ಪರಿಣಾಮಕಾರಿಯಾಗಿ ಅನುಷ್ಠಾನವಾಗಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಎಚ್ಚರ ವಹಿಸಬೇಕು. ಯಾರನ್ನು ಸಹ ಸತಾಯಿಸದೆ ಸರ್ಕಾರದ ಯೋಜನೆಗಳನ್ನು ತಲುಪಿಸುವಂತಾಗಬೇಕು ಎಂದು ಕೋರಿದರು. ಈ ಸಂದರ್ಭದಲ್ಲಿ ಮಾತನಾಡಿದ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರು ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಯೋಜನೆಗಳನ್ನು ಮತ್ತಷ್ಟು ಪ್ರಗತಿ ಆಗಬೇಕು. ಜಿಲ್ಲೆಯಲ್ಲಿ ಶೇ.99 ರಷ್ಟು ಪ್ರಗತಿ ಸಾಧಿಸಲಾಗಿದ್ದು, ಇನ್ನೂ ಹೆಚ್ಚಿನ ಸಾಧನೆ ಮಾಡುವಂತಾಗಬೇಕು ಎಂದು ಸೂಚಿಸಿದರು. ಉಪಾಧ್ಯಕ್ಷರಾದ ಶಾರಿ ಗಿರೀಶ, ಕೆ.ಸಿ.ಭೀಮಯ್ಯ, ನಾಸಿರ್ ಅವರು ಗ್ಯಾರಂಟಿ ಯೋಜನೆ ಅನುಷ್ಠಾನ ಸಂಬಂಧಿಸಿದಂತೆ ಹಲವು ವಿಷಯಗಳ ಕುರಿತು ಗಮನ ಸೆಳೆದರು. ಸದಸ್ಯರಾದ ಕುಟ್ಟಂಡ ಕೃಷ್ಣ, ಸುಂದರ, ಕೆ.ಎಂ.ಬಸೀರ್, ಮುಸ್ತಪ, ಕೆ.ಜಿ.ಪೀಟರ್, ಮಂದ್ರಿರ ಮೋಹನ್ ದಾಸ್, ಕಾಳೇಮಾಡ ಪ್ರಶಾಂತ್ ಅವರು ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನ ಸಂಬಂಧ ಹಲವು ವಿಚಾರಗಳ ಕುರಿತು ಗಮನ ಸೆಳೆದರು. ಆಹಾರ ಇಲಾಖೆಯ ಜಂಟಿ ನಿರ್ದೇಶಕರಾದ ಮಂಟೇಸ್ವಾಮಿ, ಸೆಸ್ಕ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವಿನಯ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ್, ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಮಂಜುನಾಥ್, ಕೆಎಸ್‌ಆರ್‌ಟಿಸಿ ಮಡಿಕೇರಿ ಘಟಕದ ವ್ಯವಸ್ಥಾಪಕರಾದ ಈರಸಪ್ಪ ಅವರು ತಮ್ಮ ಇಲಾಖೆಗೆ ಸಂಬಂಧಿಸದಂತೆ ಗ್ಯಾರಂಟಿ ಯೋಜನೆ ಪ್ರಗತಿ ಸಂಬಂಧ ಮಾಹಿತಿ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಡೂರು ಉತ್ಸವ ಆಚರಣೆ ಮುಂದೂಡಿಕೆ: ಜಿಮ್ ಚೇತನ್
ನಗರದ ವಿದ್ಯಾರ್ಥಿಗಳಿಗೆ ಹಳ್ಳಿಯಜೀವನದ ಪಠ್ಯ ಅಗತ್ಯ: ಡಿಸಿಎಂ