
ಕನ್ನಡಪ್ರಭ ವಾರ್ತೆ ರಾಯಚೂರು
ಇಲ್ಲಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಇರುವ ಪ್ರೇಕ್ಷಾಗೃಹದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಗಳ 18ನೇ ಸಂಸ್ಥಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಅತಿವೃಷ್ಟಿ ಹಾಗೂ ಅನಾವೃಷ್ಟಿ ಇವೆರಡನ್ನೂ ರೈತರೇ ಅನುಭವಿಸುತ್ತಿದ್ದಾರೆ. ರೈತರೇ ರೈತರ ಮಕ್ಕಳಿಗೆ ಹೆಣ್ಣುಮಕ್ಕಳನ್ನು ಮದುವೆಗೆ ಕೊಡುತ್ತಿಲ್ಲ, ಈ ರೀತಿಯಾಗಿ ಅವರು ಸಾಮಾಜಿಕವಾಗಿಯೂ ಕೂಡ ಸಂಕಷ್ಟದಲ್ಲಿರುವರು. ಆದ್ದರಿಂದ ರಾಜ್ಯ ದಲ್ಲಿರುವ ಎಲ್ಲ ಕೃಷಿ ವಿಶ್ವವಿದ್ಯಾಲಯಗಳು ಇದನ್ನು ಮನಗಂಡು ಕಾರ್ಯಪ್ರವೃತ್ತರಾಗಬೇಕಾಗಿದೆ. ಕೃಷಿ ಕ್ಷೇತ್ರದಲ್ಲಿ ಎದುರಾಗುತ್ತಿರುವ ಹವಾಮಾನ ವೈಪರೀತ್ಯ, ನೀರಿನ ಕೊರತೆ, ಮಣ್ಣಿನ ಫಲವತ್ತತೆ ಕುಸಿತ, ಕೀಟ ಮತ್ತು ರೋಗಗಳ ಬಾಧೆ ಹಾಗೂ ಕೃಷಿ ಉತ್ಪನ್ನಗಳ ಮಾರುಕಟ್ಟೆ ಅನಿಶ್ಚಿತತೆಯಂತಹ ಸಮಸ್ಯೆಗಳಿಗೆ ವೈಜ್ಞಾನಿಕ ಸಂಶೋಧನೆ ಮತ್ತು ಆಧುನಿಕ ತಂತ್ರಜ್ಞಾನದ ಮೂಲಕ ಪರಿಣಾಮಕಾರಿ ಪರಿಹಾರ ಕಂಡುಕೊಳ್ಳಬೇಕಾಗಿದೆ. ನಮ್ಮ ರಾಜ್ಯದಲ್ಲಿ ಕೃಷಿ ಕ್ಷೇತ್ರದ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿರುವ ಕೃಷಿ ವಿಶ್ವವಿದ್ಯಾಲಯಗಳು, ಕೃಷಿ ಮತ್ತು ಕೃಷಿಗೆ ಸಂಬಂಧಿಸಿದ ಅಭಿವೃದ್ಧಿ ಇಲಾಖೆಗಳು ರಾಷ್ಟ್ರೀಯ ಸಂಸ್ಥೆಗಳು, ಸರ್ಕಾರೇತರ ಸಂಸ್ಥೆಗಳು, ರೈತ ಉತ್ಪಾದಕ ಸಂಸ್ಥೆಗಳು ಇತ್ಯಾದಿಗಳು ಒಂದೇ ಸೂರಿನಡಿ ಒಮ್ಮುಖವಾಗುವಿಕೆಯ ತತ್ವದ ಮೇಲೆ ಕೆಲಸ ಮಾಡಿದಾಗ ಮಾತ್ರ ತಂತ್ರಜ್ಞಾನಗಳು ರೈತರಿಗೆ ತಲುಪಲಿವೆ. ಈ ನಿಟ್ಟಿನಲ್ಲಿ ಎಲ್ಲ ವಿಶ್ವವಿದ್ಯಾಲಯಗಳು ಚಿಂತನೆ ನಡೆಸಬೇಕಾಗಿದೆ. ಕೃಷಿ ವಿಶ್ವವಿದ್ಯಾಲಯಗಳು ಕೇವಲ ಶಿಕ್ಷಣ ನೀಡುವ ಸಂಸ್ಥೆಗಳಾಗಿ ಉಳಿಯದೆ, ರೈತರ ಬದುಕಿನಲ್ಲಿ ಆರ್ಥಿಕ ಬದಲಾವಣೆ ತರುವ ಸಂಶೋಧನಾ ಕೇಂದ್ರಗಳಾಗಿ ಕಾರ್ಯನಿರ್ವಹಿಸಬೇಕು. ಸಂಶೋಧನೆಯ ಫಲಿತಾಂಶಗಳು ಪ್ರಯೋಗಾಲಯಗಳಿಗೆ ಸೀಮಿತವಾಗದೆ ರೈತರ ಹೊಲಗಳಿಗೆ ತಲುಪಬೇಕು. ತಂತ್ರಜ್ಞಾನ, ತರಬೇತಿ ಹಾಗೂ ಸರ್ಕಾರದ ಯೋಜನೆಗಳನ್ನು ಸಮನ್ವಯಗೊಳಿಸಿದಾಗ ಮಾತ್ರ ಕೃಷಿ ಕ್ಷೇತ್ರದಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸಲು ಸಾಧ್ಯ ಎಂದು ತಿಳಿಸಿದರು.
ಇಂದಿನ ವಿದ್ಯಾರ್ಥಿ ಸಮುದಾಯವು ಸ್ಟಾರ್ಟ್ಅಪ್ ಮತ್ತು ಇನ್ಕ್ಯುಬೇಷನ್ಗಳ ಬಗ್ಗೆ ಆಸಕ್ತಿ ಮೂಡಿಸಲು ವಿಶ್ವವಿದ್ಯಾಲಯದ ವೃಂದವು ಒತ್ತು ನೀಡಬೇಕೆಂದು ಸಲಹೆ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿವಿ ಕುಲಪತಿ ಡಾ. ಗುರುರಾಜ ಸುಂಕದ ಅವರು ಮಾತನಾಡಿ,ಪ್ರಸಕ್ತ ವರ್ಷ ಮುಂಗಾರು ಹಾಗೂ ಹಿಂಗಾರು ಮಳೆಯ ಕೊರತೆಯಿಂದ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯದ ಆರು ಮಹಾವಿದ್ಯಾಲಯಗಳು, 13 ಕೃಷಿ ಸಂಶೋಧನಾ ಕೇಂದ್ರಗಳು, ಏಳು ಕೃಷಿ ವಿಜ್ಞಾನ ಕೇಂದ್ರಗಳು ಹಾಗೂ ಆರು ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರಗಳು “ಹಿಂಗಾರು ಬರ ಸಲಹಾ ಘಟಕ” ಗಳನ್ನು ಸ್ಥಾಪಿಸಿ ಅವುಗಳ ಮೂಲಕ ಬರ ನಿರ್ವಹಣೆ, ನೀರಿನ ಸಂರಕ್ಷಣೆ, ಮೇವಿನ ಉತ್ಪಾದನೆ ಮತ್ತು ಪರ್ಯಾಯ ಕೃಷಿ ಪದ್ಧತಿಗಳ ಕುರಿತು ರೈತರಿಗೆ ಮಾರ್ಗದರ್ಶನ ನೀಡಬೇಕಾಗಿದೆ ಎಂದರು. ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಜೋಳ, ಮೆಕ್ಕೆಜೋಳ ಹಾಗೂ ಇತರ ಮೇವಿನ ಬೆಳೆಗಳನ್ನು ಉತ್ತೇಜಿಸಬೇಕು. ಹೈಡ್ರೋಪೋನಿಕ್ ತಂತ್ರಜ್ಞಾನ, ಅಜೋಲ್ಲಾ ಉತ್ಪಾದನೆ ಮತ್ತು ಮೇವಿನ ಸಂರಕ್ಷಣಾ
ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಸದಸ್ಯರಾದ ಮಲ್ಲೇಶ ಕೊಲಿಮಿ, ರೇಣುಕಾ ತಿಮ್ಮಪ್ಪ ಪಿರಂಗಿ, ಟಿ.ಶ್ರೀನಿವಾಸ್ ಅವರು ಉಪಸ್ಥಿತರಿದ್ದು 18ನೇ ಸಂಸ್ಥಾಪನಾ ದಿನಾಚರಣೆಗೆ ಶುಭ ಹಾರೈಸಿದರು.