ನೀರಿನ ದಕ್ಷ ಬಳಕೆ ಎಲ್ಲರಿಗೂ ಅನಿವಾರ್ಯ: ಅನಂತ ಪದ್ಮನಾಭ

KannadaprabhaNewsNetwork |  
Published : Oct 11, 2026, 03:45 AM IST
09ಕಾಪು | Kannada Prabha

ಸಾರಾಂಶ

ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟ್ ವತಿಯಿಂದ ಬೆಂಗಳೂರಿನ ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆಯ ಪ್ರಾಯೋಜಕತ್ವದಲ್ಲಿ, ಕಾಪು ತಾಪಂ ಸಭಾಂಗಣದಲ್ಲಿ ಮಹಿಳೆಯರಿಗೆ ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿಯ ಬಳಕೆ ಕುರಿತು ಒಂದು ದಿನದ ಕಾರ್ಯಾಗಾರ ನಡೆಯಿತು.

ಕಾಪು; ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟ್ ವತಿಯಿಂದ ಬೆಂಗಳೂರಿನ ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆಯ ಪ್ರಾಯೋಜಕತ್ವದಲ್ಲಿ, ಕಾಪು ತಾಪಂ ಸಭಾಂಗಣದಲ್ಲಿ ಮಹಿಳೆಯರಿಗೆ ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿಯ ಬಳಕೆ ಕುರಿತು ಒಂದು ದಿನದ ಕಾರ್ಯಾಗಾರ ನಡೆಯಿತು. ಕಾಪು ತಾಪಂ ಸಹಾಯಕ ನಿರ್ದೇಶಕಿ ಚಂದ್ರಕಲಾ ಹಾಗೂ ವಿಬಿಜಿ ರಾಮ್‌ಜಿ ವಿಭಾಗದ ಸಹಾಯಕ ನಿರ್ದೇಶಕರಾದ ಅನಂತ ಪದ್ಮನಾಭ ಅವರು ಕಾರ್ಯಾಗಾರವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅನಂತ ಪದ್ಮನಾಭ ಅವರು, ಕರಾವಳಿ ಪ್ರದೇಶದಲ್ಲಿ ಅಂತರ್ಜಲ ಮಟ್ಟ ವೇಗವಾಗಿ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ನೀರಿನ ದಕ್ಷ ಬಳಕೆಯ ಬಗ್ಗೆ ಗಮನ ಹರಿಸಬೇಕು. ತಾಲೂಕಿನ ಪ್ರತಿಯೊಂದು ಗ್ರಾಮದಲ್ಲೂ ಜಲ ಸಾಕ್ಷರತೆ ಹೆಚ್ಚಿಸುವ ಪ್ರಯತ್ನ ನಿರಂತರವಾಗಿ ನಡೆಯಬೇಕು ಎಂದು ತಿಳಿಸಿದರು.

ಚಂದ್ರಕಲಾ ಅವರು ಮಾತನಾಡಿ, ಕಾರ್ಯಾಗಾರದ ಪ್ರಮುಖ ವಿಷಯಗಳ ಬಗ್ಗೆ ಮಹಿಳೆಯರು ಸೂಕ್ತ ಮಾಹಿತಿ ಪಡೆದುಕೊಂಡು, ತಮ್ಮ ಗ್ರಾಮಗಳಲ್ಲಿ ಇತರರಿಗೂ ಅವುಗಳ ಮಹತ್ವವನ್ನು ತಿಳಿಹೇಳಬೇಕು ಎಂದು ಕರೆ ನೀಡಿದರು.

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಜೋಸೆಫ್ ರೆಬೆಲ್ಲೊ, ಭಾರತೀಯ ವಿಕಾಸ ಟ್ರಸ್ಟ್‌ನ ಸುಮಂತ್ ಭಟ್ ಹಾಗೂ ಅರುಣ್ ಪಟವರ್ಧನ್ ಅವರು ಮಾಹಿತಿ ಮತ್ತು ಪ್ರಾಯೋಗಿಕ ಮಾರ್ಗದರ್ಶನ ನೀಡಿದರು.

ಎನ್‌ಆರ್‌ಎಲ್‌ಎಮ್‌ ಕಾಪು ವಲಯ ಮೇಲ್ವಿಚಾರಕಿ ಶ್ರೀಮತಿ ಅವರು ಕಾರ್ಯಕ್ರಮ ಸಂಯೋಜನೆ ಮಾಡಿದರು. ಕಾಪು ತಾಲೂಕಿನ ವಿವಿಧ ಭಾಗಗಳಿಂದ, ಮುಖ್ಯವಾಗಿ ಎನ್‌ಆರ್‌ಎಲ್‌ಎಮ್‌ನ ಸಿಬ್ಬಂದಿ ಸೇರಿದಂತೆ 60 ಕ್ಕೂ ಅಧಿಕ ಮಹಿಳೆಯರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರಜಾಪ್ರಭುತ್ವ ಆಶಯ ಅರಿಯಲು ಯುವಸಂಸತ್ತು ಸಹಕಾರಿ: ಪ್ರೊ.ಆಲೂರ
ತೊರೆನೂರು ಭಾಗದಲ್ಲಿ ಹುಲಿ ಶಂಕೆ: ರೈತರ ಭೀತಿ