ಕನ್ನಡಪ್ರಭ ವಾರ್ತೆ ಚನ್ನಪಟ್ಟಣ
ನಗರಸಭಾ ವ್ಯಾಪ್ತಿಯ ೧೦ನೇ ವಾರ್ಡಿನ ಅನ್ನಪೂರ್ಣೇಶ್ವರಿ ಬಡಾವಣೆಯಲ್ಲಿ ಶಾಸಕರ ವಿಶೇಷ ಅನುದಾನದಲ್ಲಿ ಸಿ.ಸಿ.ರಸ್ತೆ ಕಾಮಗಾರಿಯ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.
ಚನ್ನಪಟ್ಟಣ ಖಾಸಗಿ ಬಸ್ ನಿಲ್ದಾಣದ ವಿಚಾರದಲ್ಲಿ ಗುತ್ತಿಗೆದಾರರು ಸುಪ್ರೀಂಕೊರ್ಟ್‌ಗೆ ಹೋಗಿದ್ದಾರೆ. ಆದಷ್ಟು ಬೇಗ ಅವರನ್ನು ಕರೆಸಿ ಮಾತನಾಡಿ ಅವರನ್ನು ಒಪ್ಪಿಸಿ ಬಸ್ ನಿಲ್ದಾಣ ಕಾಮಗಾರಿಗೆ ಚಾಲನೆ ನೀಡಲು ತೀರ್ಮಾನ ಮಾಡಲಾಗುವುದು ಎಂದರು.ಚನ್ನಪಟ್ಟಣ ನಗರ ಸುತ್ತ ಹಲವಾರು ರೆವಿನ್ಯೂ ಬಡಾವಣೆಗಳು, ಖಾಸಗಿ ಬಡಾವಣೆಗಳು ಆಗಿವೆ. ಅವೆಲ್ಲವಕ್ಕೂ ಮೂಲಭೂತ ಸೌಲಭ್ಯ ಕಲ್ಪಿಸಿ ಕೊಡುವುದು ನಮ್ಮ ಕರ್ತವ್ಯ. ಆ ನಿಟ್ಟಿನಲ್ಲಿ ಮುಖ್ಯಮಂತ್ರಿಗಳಿಗೆ ಈಗಾಗಲೇ ಮನವಿ ಮಾಡಿದ್ದೇನೆ. ರೆವಿನ್ಯೂ ಬಡಾವಣೆ ನಿರ್ಮಾಣ ಮಾಡಲು ಹಾಗೂ ಉತ್ಪತ್ತಿಯಾಗುವ ತ್ಯಾಜ್ಯ ಮತ್ತು ನೀರು ಹೊರ ಹೋಗಲು ₹100 ಕೋಟಿ ಅನುದಾನ ಕೇಳಿದ್ದೇವೆ, ಅವರು ಒಪ್ಪಿಕೊಂಡಿದ್ದಾರೆ, ಆದ್ದರಿಂದ ರೆವಿನ್ಯೂ ಎಸ್ಟಿಮೇಟ್ ಮಾಡುತ್ತಿದ್ದೇವೆ ಎಂದರು.
ನಗರಸಭಾ ವ್ಯಾಪ್ತಿಯ ೮ನೇ ವಾರ್ಡಿನಲ್ಲಿ ಅಪ್ಪಗೆರೆ ಚಾನೆಲ್ ಮುಖಾಂತರ ಹೌಸಿಂಗ್ ಬೋರ್ಡ್ ಸೇರುವ ರಸ್ತೆಗೆ ಕಾವೇರಿ ನೀರಾವರಿ ನಿಗಮದ ಅನುದಾನದಲ್ಲಿ ಸಿಸಿ ರಸ್ತೆ ಕಾಮಗಾರಿ, ೨೦ನೇ ವಾರ್ಡಿನ ಕೆರೆಮೇಗಲದೊಡ್ಡಿಯಲ್ಲಿ ಶಾಸಕರ ವಿಶೇಷ ಅನುದಾನದಲ್ಲಿ ಸಿ.ಸಿ.ರಸ್ತೆ ಕಾಮಗಾರಿಯ ನಿರ್ಮಾಣ ಹಾಗೂ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದರು.
ಪೊಟೋ೯ಸಿಪಿಟಿ೧: ಚನ್ನಪಟ್ಟಣದಲ್ಲಿ ಸಿ.ಸಿ. ರಸ್ತೆ ಕಾಮಗಾರಿಗೆ ಶಾಸಕ ಸಿ.ಪಿ.ಯೋಗೇಶ್ವರ್ ಭೂಮಿಪೂಜೆ ನೆರವೇರಿಸಿದರು.