ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ವೈದ್ಯರ ಪರಿಶ್ರಮ ದೊಡ್ಡದು: ಎಸ್.ಆರ್.ಪಾಟೀಲ

KannadaprabhaNewsNetwork |  
Published : Jul 03, 2024, 12:20 AM IST
ಬಾಡಗಂಡಿ ಎಸ್.ಆರ್.ಪಾಟೀಲ ವೈದ್ಯಕೀಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಆಯೋಜಿಸಿದ ರಾಷ್ಟ್ರೀಯ ವೈದ್ಯ ದಿನಾಚರಣೆ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. | Kannada Prabha

ಸಾರಾಂಶ

ಬೀಳಗಿ ತಾಲೂಕಿನ ಬಾಡಗಂಡಿ ಎಸ್.ಆರ್.ಪಾಟೀಲ್ ವೈದ್ಯಕೀಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಆಯೋಜಿಸಿದ ಡಾ.ಬಿಧನ್ ಚಂದ್ರರಾಯ್ ಗೌರವ ದಿನವಾದ ರಾಷ್ಟ್ರೀಯ ವೈದ್ಯ ದಿನಾಚರಣೆ ಕಾರ್ಯಕ್ರಮವನ್ನು ಎಸ್‌.ಆರ್‌. ಪಾಟೀಲ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಬೀಳಗಿ

ಸಶಕ್ತ ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವಲ್ಲಿ ವೈದ್ಯರ ಪರಿಶ್ರಮ ದೊಡ್ಡದು. ಮನುಷ್ಯ ಸಾವು ಬದುಕಿನ ಮಧ್ಯ ಹೋರಾಡುವಂತ ಸಮಯದಲ್ಲಿ ವೈದ್ಯನನ್ನು ದೇವತಾ ರೂಪದಲ್ಲಿ ಕಾಣುತ್ತೇವೆ ಎಂದು ಎಸ್.ಆರ್.ಪಾಟೀಲ್ ವೈದ್ಯಕೀಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಚೇರಮನ್, ಮಾಜಿ ಸಚಿವ ಎಸ್.ಆರ್.ಪಾಟೀಲ ಹೇಳಿದರು.

ತಾಲೂಕಿನ ಬಾಡಗಂಡಿ ಎಸ್.ಆರ್.ಪಾಟೀಲ್ ವೈದ್ಯಕೀಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಆಯೋಜಿಸಿದ ಡಾ.ಬಿಧನ್ ಚಂದ್ರರಾಯ್ ಗೌರವ ದಿನವಾದ ರಾಷ್ಟ್ರೀಯ ವೈದ್ಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವೈದ್ಯರ ಅಮೂಲ್ಯವಾದ ಸೇವೆ ಸದಾ ಕಾಲ ಇರಬೇಕು. ನಮ್ಮ ರಾಷ್ಟ್ರದ ಅಭಿವೃದ್ಧಿ ಜನತೆಯ ಆರೋಗ್ಯದಲ್ಲಿ ಅವಲಂಬಿಸಿದೆ ಎಂದು ತಿಳಿಸಿದರು.

ಎಸ್.ಆರ್.ಪಾಟೀಲ ವೈದ್ಯಕೀಯ ಕಾಲೇಜು ಕಾರ್ಯದರ್ಶಿ ಎಂ.ಎನ್.ಪಾಟೀಲ ಮಾತನಾಡಿ, ಮನುಷ್ಯನಿಗೆ ಆರೋಗ್ಯವೇ ಭಾಗ್ಯ ಎಂಬುವುದು ಸರ್ವಕಾಲಿಕ ಮಾತು. ಇದು ಅಷ್ಟೇ ಸತ್ಯವೂ ಕೂಡ. ಆರೋಗ್ಯವನ್ನು ರಕ್ಷಿಸುವುದು, ಅನಾರೋಗ್ಯಕ್ಕೆ ಮದ್ದು ನೀಡಿ ಗುಣ ಪಡಿಸುವುದು ವೈದ್ಯರ ಕರ್ತವ್ಯವಾಗಿದೆ. ವೈದ್ಯೋ ನಾರಾಯಣ ಹರಿ ಎನ್ನುವುದು ಅದಕ್ಕೆ ಸಾಕ್ಷಿಯಾಗಿದೆ. ಅದಕ್ಕಾಗಿ ವೈದ್ಯರನ್ನ ದೇವರಿಗೆ ಹೊಲಿಸಲಾಗುತ್ತದೆ. ಈ ಪದ್ಧತಿಯೂ ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ ಎಂದು ವಿವರಿಸಿದರು.

ಸಂಸ್ಥೆಯ ನಿರ್ದೇಶಕ ದಯಾನಂದ್ ಪಾಟೀಲ, ವೈದ್ಯಕೀಯ ಕಾಲೇಜು ಡೀನ್ ಧರ್ಮರಾಯ ಇಂಗಳೆ, ವೈದ್ಯಕೀಯ ಅಧೀಕ್ಷಕ ಡಾ.ವಿಜಯಾನಂದ್ ಹಳ್ಳಿ, ವೈದ್ಯಕೀಯ ನಿರ್ದೇಶಕ ಡಾ.ರಾಘವೇಂದ್ರ ಪಾಟೀಲ ಇತರರು ಇದ್ದರು.ಹಲವಾರು ಬಗೆಯ ರೋಗರುಜಿಗಳಿಂದ ಮನುಷ್ಯ ಜೀವನ ಕಷ್ಟಕರವಾದಾಗ ವೈದ್ಯರು ಬಗೆ ಬಗೆಯ ಚಿಕಿತ್ಸೆ ನೀಡಿ ರೋಗ ಹರಡದಂತೆ ರೋಗಿ ಕಾಪಾಡುವ ಶಕ್ತಿ ಹೊಂದಿದ್ದಾರೆ. ವೃತ್ತಿಗಳಲ್ಲಿ ಪವಿತ್ರವಾದ ವೃತ್ತಿ ವೈದ್ಯ ವೃತ್ತಿ.

-ಎಸ್.ಆರ್.ಪಾಟೀಲ, ಮಾಜಿ ಸಚಿವ.ಅನಾರೋಗ್ಯಕ್ಕೆ ತುತ್ತಾದ ಪ್ರತಿಯೊಬ್ಬ ರೋಗಿಯನ್ನು ಸರಿಯಾದ ಚಿಕಿತ್ಸೆ ನೀಡುವ ಮೂಲಕ ಗುಣಪಡಿಸಿ ರೋಗಿಗಳಿಗೆ ಪುನರ್ಜನ್ಮ ನೀಡುವುದು ಪ್ರತಿಯೊಬ್ಬ ವೈದ್ಯರ ಕಾಯಕವಾದರೇ ಅವರಿಗೆ ಗೌರವ ಸಲ್ಲಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಇಂತಹ ಪುನರ್ಜನ್ಮ ನೀಡುವ ವೈದ್ಯರಿಗೆ ವಿಶೇಷ ಗೌರವ ನೀಡುವ ಸಲುವಾಗಿ ರಾಷ್ಟ್ರೀಯ ವೈದ್ಯರ ದಿನ ಆಚರಿಸಲಾಗುತ್ತಿದೆ.

-ಎಂ.ಎನ್.ಪಾಟೀಲ, ಎಸ್.ಆರ್.ಪಾಟೀಲ ವೈದ್ಯಕೀಯ ಕಾಲೇಜು ಕಾರ್ಯದರ್ಶಿ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೋಗ ಬಾರದಂತೆ ತಡೆಯುವುದೇ ಆಯುರ್ವೇದದ ಶಕ್ತಿ
ಮೋದಿಯವರ 25 ವರ್ಷಗಳ ಜನಸೇವಾ ಪಯಣ ಪ್ರೇರಣಾದಾಯಕ