ಬುಡಕಟ್ಟು ಜನಾಂಗದವರನ್ನು ಮುಖ್ಯವಾಹಿನಿಗೆ ತರಲು ಪ್ರಯತ್ನ: ಈರಣ್ಣ ಕಡಾಡಿ

KannadaprabhaNewsNetwork |  
Published : Nov 17, 2024, 01:22 AM IST
ಬೆಳಗಾವಿಯಲ್ಲಿ ಧರ್ತಿ ಅಲಾ ಭಗವಾನ ಬಿರ್ಸಾ ಮುಂಡಾರಿ ಅವರ 150ನೇ ಜಯಂತಿ ಕಾರ್ಯಕ್ರಮವನ್ನು ಈರಣ್ಣ ಕಡಾಡಿ ಉದ್ಘಾಟಿಸಿದರು | Kannada Prabha

ಸಾರಾಂಶ

ಬುಡಕಟ್ಟು ಜನಾಂಗದವರನ್ನು ಮುಖ್ಯ ವಾಹಿನಿಗೆ ತರಲು ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿವೆ. ಈ ಯೋಜನೆಗಳ ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ, ಶೈಕ್ಷಣಿಕವಾಗಿ ಮುಂದೆ ಬರುವಂತೆ ರಾಜ್ಯಸಭಾ ಸದಸ್ಯರಾದ ಈರಣ್ಣ ಕಡ್ಡಾಡಿ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಬುಡಕಟ್ಟು ಜನಾಂಗದವರನ್ನು ಮುಖ್ಯ ವಾಹಿನಿಗೆ ತರಲು ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿವೆ. ಈ ಯೋಜನೆಗಳ ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ, ಶೈಕ್ಷಣಿಕವಾಗಿ ಮುಂದೆ ಬರುವಂತೆ ರಾಜ್ಯಸಭಾ ಸದಸ್ಯರಾದ ಈರಣ್ಣ ಕಡ್ಡಾಡಿ ಹೇಳಿದರು.

ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ಕುಮಾರ ರಂಗಮಂದಿರದಲ್ಲಿ ನಡೆದ ಧರ್ತಿ ಅಲಾ ಭಗವಾನ ಬಿರ್ಸಾ ಮುಂಡಾರಿ ಅವರ ೧೫೦ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬಿರ್ಸಾ ಮುಂಡಾರಿ ಅವರನ್ನು ಬುಡಕಟ್ಟು ಜನಾಂಗದವರು ಭಗವಾನ್ ಎಂದು ಪೂಜಿಸುತ್ತಾರೆ. ಬುಡಕಟ್ಟು ಜನಾಂಗದ ಜನರನ್ನು ಸರ್ಕಾರ ಅನೇಕ ಸೌಲಭ್ಯಗಳನ್ನು ಒದಗಿಸುವ ಮೂಲಕ ಮುಖ್ಯವಾಹಿನಿಗೆ ತರುವ ಕೆಲಸ ನಡೆಯುತ್ತಿದೆ ಎಂದು ತಿಳಿಸಿದರು.

ಜಿಪಂ ಉಪ ಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ ಮಾತನಾಡಿ, ಇತಿಹಾಸದ ಪುಟಗಳನ್ನು ತೆರೆದು ನೋಡಿದಾಗ ಅನೇಕ ಬುಡಕಟ್ಟು ಜನಾಂಗದ ಕುರಿತು ಮಾಹಿತಿ ಸಿಗುತ್ತದೆ. ಬುಡಕಟ್ಟು ಜನಾಂಗದವರು ಸ್ವಾತಂತ್ರ್ಯ ಹೋರಾಟದಲ್ಲಿ ಮುಂದಿದ್ದು, ಬುಡಕಟ್ಟು ಜನಾಂಗದ ಭಗವಾನ್ ಬಿರ್ಸಾ ಅವರು ಸ್ವಾತಂತ್ರ್ಯ ಹೋರಾಟದ ಕಿಚ್ಚು ಹಚ್ಚಿದವರು ಎಂದು ಹೇಳಿದರು.

ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿದ ಬಿರ್ಸಾ ಮುಂಡಾ, ರಘುನಾಥ, ಬಾದರ್ ಬೋಮ್ ಇವರ ಹೆಸರಿನಲ್ಲಿ ವಸ್ತು ಸಂಗ್ರಹಾಯ ಅಭಿವೃದ್ಧಿ ಪಡಿಸಲಾಗಿದೆ. ಒಟ್ಟಾರೆ ಬುಡಕಟ್ಟು ಜನಾಂಗದ ಸರ್ವಾಂಗೀಣವಾಗಿ ಸಮಾಜದ ಮೇಲು ಸ್ಥರಕ್ಕೆ ಕೊಂಡೊಯ್ಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರಯತ್ನಿಸುತ್ತಿವೆ. ಬುಡಕಟ್ಟು ಜನಾಂಗದವರು ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪಡೆದು ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗಳಿಗೆ ಬರುವಂತೆ ಸಲಹೆ ನೀಡಿದರು.

ಇದೇ ವೇಳೆ ಬಿತ್ತನೆ ಬೀಜ ಹಾಗೂ ಮಣ್ಣಿನ ಗುಣಮಟ್ಟ ಪರೀಕ್ಷಾ ಚೀಟಿ ವಿತರಿಸಲಾಯಿತು. ತವಗ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಏಕಲವ್ಯ ಮಾದರಿ ವಸತಿ ಶಾಲೆ ಹಾಗೂ ಹಾಲಭಾವಿ ಮೊರಾರ್ಜಿ ವಸತಿ ಶಾಲೆ ವಿದ್ಯಾರ್ಥಿನಿಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು. ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೋಳಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಬಸವರಾಜ ಕುರಿಹುಲಿ, ಕೃಷಿ ಇಲಾಖೆ ಉಪ ನಿರ್ದೇಶಕ ಸಲೀಮ್ ಅಹ್ಮದ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಗಿರಿಧರ ಜಾಧವ, ಜಿಪಂ ಯೋಜನಾ ನಿರ್ದೇಶಕ ಬಂಗಾರಪ್ಪನವರ, ತಾಲೂಕು ಆರೋಗ್ಯ ಅಧಿಕಾರಿ ರಾಜಶ್ರೀ ಪಾಟೀಲ, ಕರ್ನಾಟಕ ಆದಿ ಜಾಂಭವ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕ ಬಸವರಾಜ ಚನ್ನನವರ, ವಾಲ್ಮೀಕಿ ಸಮುದಾಯ ಮುಖಂಡರಾದ ಭಾವಕಣ್ಣ ಬಂಗ್ಯಾಗೊಳ, ಯಲ್ಲಪ್ಪ ಕೊಳೆಕರ, ವಾಲ್ಮೀಕಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಬಸವರಾಜ, ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ವಾರ್ಡ್‌ನ ಸೋಮು ಮಾಳಗಿ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''