ಆರ್ಹರಿಗೆ ಗ್ಯಾರಂಟಿ ತಲುಪಿಸುವ ಪ್ರಯತ್ನ: ಬಿ.ಕೆ.ರವಿಕುಮಾರ್‌

KannadaprabhaNewsNetwork |  
Published : Nov 24, 2026, 02:30 AM IST
ಆರ್ಹರಿಗೆ ಗ್ಯಾರಂಟಿ ಯೋಜನೆ ತಲುಪಿಸ ಪ್ರಾಮಾಣಿಕ ಪ್ರಯತ್ನ : ಬಿ.ಕೆ.ರವಿಕುಮಾರ್ | Kannada Prabha

ಸಾರಾಂಶ

ರಾಜ್ಯದ ಮಹತ್ವಾಕಾಂಕ್ಷೆ ಯೋಜನೆಗಳಾದ ಪಂಚ ಗ್ಯಾರಂಟಿ ಯೋಜನೆಯನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅರ್ಹರಿಗೆ ತಲುಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಬಿ.ಕೆ. ರವಿಕುಮಾರ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ರಾಜ್ಯದ ಮಹತ್ವಾಕಾಂಕ್ಷೆ ಯೋಜನೆಗಳಾದ ಪಂಚ ಗ್ಯಾರಂಟಿ ಯೋಜನೆಯನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅರ್ಹರಿಗೆ ತಲುಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಬಿ.ಕೆ. ರವಿಕುಮಾರ್ ತಿಳಿಸಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಸಮಿತಿಯ ಅಧ್ಯಕ್ಷನ್ನಾಗಿ ನನ್ನನ್ನು ನೇಮಕ ಮಾಡಲು ಕಾರಣಕರ್ತರಾದ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟರು, ಜಿಲ್ಲೆಯ ಎಲ್ಲಾ ಶಾಸಕರು, ಮಾಜಿ ಶಾಸಕರು, ನಮ್ಮ ಪಕ್ಷದ ಪ್ರಮುಖ ಮುಖಂಡರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಹಮತವು ಸಹ ಇದೆ. ಗ್ಯಾರಂಟಿ ಸಮಿತಿಯ ಅಧ್ಯಕ್ಷನಾಗಿ ಜಿಲ್ಲೆಯ ಅರ್ಹರಿಗೆ ಯೋಜನೆಯನ್ನು ತಲುಪಿಸುವ ಮೂಲಕ ಸರ್ಕಾರ ಕಾರ್ಯಕ್ರಮಗಳ ಯಶಸ್ವಿಗೆ ದುಡಿಯುವುದಾಗಿ ತಿಳಿಸಿದರು.

ಈ ಹಿಂದೆ ಜಿಲ್ಲಾ ಗ್ಯಾರಂಟಿ ಸಮಿತಿಯ ಅಧ್ಯಕ್ಷರಾಗಿದ್ದ ಹೊಂಗನೂರು ಚಂದ್ರು ಅವರು ಉತ್ತಮವಾಗಿ ಕಾರ್ಯನಿರ್ವಹನೆ ಮಾಡಿದ್ದಾರೆ. ಅದರಂತೆ ಜಿಲ್ಲೆಯ ಎಲ್ಲಾ ಗ್ಯಾರಂಟಿ ಸಮಿತಿಯ ಸದಸ್ಯರು ಹಾಗೂ ತಾಲೂಕು ಅಧ್ಯಕ್ಷರನ್ನು ಒಳಗೊಂಡಂತೆ ಪಂಚ ಗ್ಯಾರಂಟಿಗಳು ಯಶಸ್ವಿಯಾಗಿ ಅನುಷ್ಠಾನ ಮಾಡಲು ಶ್ರಮಿಸುತ್ತೇವೆ. ಈಗಾಗಲೇ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ಯಾರಂಟಿ ಸಮಿತಿಯನ್ನು ರಚನೆಮಾಡಲು ಸರ್ಕಾರ ಆದೇಶ ಮಾಡಿದೆ. ಇದರನ್ವಯ ಆಯಾ ಪಂಚಾಯಿತಿ ವ್ಯಾಪ್ತಿಯಲ್ಲಿ ಆರು ಜನ ಸಮಿತಿಯನ್ನು ರಚನೆ ಮಾಡಲಾಗಿದೆ ಎಂದು ತಿಳಿಸಿದರು.

ತಾಲೂಕು ಸಮಿತಿಯ ಅಧ್ಯಕ್ಷರ ಸಹಕಾರದೊಂದಿಗೆ ತಾಲೂಕು ವ್ಯಾಪ್ತಿಯಲ್ಲಿರುವ ಗ್ರಾಮ ಪಂಚಾಯಿತಿ ಸ್ಥಳೀಯರನ್ನು ಸಮಿತಿಯ ಸದಸ್ಯರನ್ನಾಗಿ ಆಯ್ಕೆ ಮಾಡಿ ಪಟ್ಟಿಯನ್ನುರಾಜ್ಯ ಸಮಿತಿಗೆ ಕಳುಹಿಸಿಕೊಡಲಾಗಿದೆ. ಸದ್ಯದಲ್ಲಿಯೇ ಇದು ಅಧಿಕೃತವಾಗಿ ಸರ್ಕಾರ ಆದೇಶವಾಗುತ್ತದೆ. ಅಲ್ಲಿಯು ಸಹ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಮಿತಿಯ ಸದಸ್ಯರು ಕಾರ್ಯ ನಿರ್ವಹಣೆ ಮಾಡಲಿದ್ದಾರೆ ಎಂದು ತಿಳಿಸಿದರು.

ಭಾರತ್ ಜೋಡೋ ಸಮಿತಿ ರಚನೆ:

ಇನ್ನು ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಅಧಿಕಾರ ವಹಿಸಿಕೊಂಡ ಬಳಿಕ ಗ್ರಾಮ ಪಂಚಾಯಿತಿಗೊಂದು ಭಾರತ್ ಜೋಡೋ ಸಮಿತಿ ರಚನೆ ಮಾಡಿ, ೧೦ ಲಕ್ಷ ರೂ. ನೀಡುವ ಘೋಷಣೆ ಮಾಡಿದ್ದರು. ಇದನ್ನು ಸಹ ಜಿಲ್ಲೆಯಲ್ಲ ಕಾರ್ಯಗತ ಮಾಡಲು ಪಂಚಾಯಿತಿ ಮಟ್ಟದಲ್ಲಿ ಭಾರತ್ ಜೋಡೋ ಸಮಿತಿಯನ್ನು ರಚನೆ ಮಾಡಲಾಗಿದೆ. ಡಿ. ೧ ರಂದು ಈ ಸಮಿತಿ ರಚನೆಯಾಗಿ ಕಾರ್ಯರಂಭ ಮಾಡಲು ಎಲ್ಲಾ ಸಿದ್ದತೆಗಳನ್ನು ಮಾಡಲಾಗುತ್ತಿದೆ ಎಂದರು.

ಸಮಿತಿಯು ಆಯಾ ಪಂಚಾಯಿತಿಯಲ್ಲಿ ಯುವಕರಲ್ಲಿ ನಾಯಕತ್ವ ಗುಣವನ್ನು ಬೆಳೆಸುವುದು, ಕ್ರೀಡಾ ಚುಟುವಟಿಕೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿ, ಗ್ರಾಮ ಮಟ್ಟದಲ್ಲಿಯು ಸಹ ಯುವಕರನ್ನು ಜೋಡಣೆ ಮಾಡುವ ಯೋಜನೆ ಇದಾಗಿದೆ. ರಾಹುಲ್‌ಗಾಂಧಿ ಅವರು ಭಾರತ್ ಜೋಡೋ ಯಾತ್ರೆಯ ಮೂಲಕ ದೇಶದಲ್ಲಿ ಯುವಕರಲ್ಲಿ ಸಂಚಲನ ಮೂಡಿಸಿದ್ದರು. ಕೇರಳ ಮಾರ್ಗವಾಗಿ ಕರ್ನಾಟಕಕ್ಕೆ ಪ್ರವೇಶ ಮಾಡಿದ ರಾಹುಲ್ ಗಾಂಧಿ ಅವರು ಗುಂಡ್ಲುಫೇಟೆಗೆ ಆಗಮಿಸಿದ್ದರು. ಇದರ ನೆನಪಿಗಾಗಿ ಈ ಕಾರ್ಯಕ್ರಮವನ್ನು ಡಿ.ಕೆ. ಶಿವಕುಮಾರ್ ಅವರು ಘೋಷಣೆ ಮಾಡಿದ್ದಾರೆ ಎಂದು ತಿಳಿಸಿದರು.

ಗ್ಯಾರಂಟಿ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ನಾಗರಾಜಮೂರ್ತಿ, ತಾಲೂಕು ಅಧ್ಯಕ್ಷರಾದ ಸೋಮೇಶ್ವರ್, ಪ್ರಭುಪ್ರಸಾದ್, ರಾಜೇಂದ್ರ, ರಾಜಪ್ಪಾಜಿ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡಿ.18-20ರವರೆಗೆ ಮುಂಬೈನಲ್ಲಿ ವಿಶ್ವಹಿಂದು ಕಾಂಗ್ರೆಸ್‌ ಆಯೋಜನೆ: ಸ್ವಾಮಿ
ಕೋರ್ಟ್‌ನಲ್ಲಿ ವಕೀಲರ ಗದ್ದಲ ಕೇಸ್‌ ಮುಕ್ತಾಯ