ತಿಂಗಳೊಳಗೆ ಒಪಿಎಸ್ ಜಾರಿಗೆ ಪ್ರಯತ್ನ: ಷಡಕ್ಷರಿ ಭರವಸೆ

KannadaprabhaNewsNetwork |  
Published : Jan 29, 2025, 01:30 AM ISTUpdated : Jan 29, 2025, 01:31 AM IST
೨೮ಕೆಎಲ್‌ಆರ್-೧೪ಕೋಲಾರದ ರಂಗಮಂದಿರದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕದಿಂದ ಎರಡನೇ ಬಾರಿ ರಾಜ್ಯಾಧ್ಯಕ್ಷರಾಗಿ ಆಯ್ಕೆಗೆ ಅಭಿನಂದನೆ ಮತ್ತು ಉತ್ತಮ ಶಿಕ್ಷಕಿಯರಿಗೆ ಸಾವಿತ್ರಿ ಬಾಯಿ ಪುಲೆ ಪ್ರಶಸ್ತಿ ಪ್ರದಾನ ಸಮಾರಂಭ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಉದ್ಘಾಟಿಸಿದರು. | Kannada Prabha

ಸಾರಾಂಶ

ಈ ವರ್ಷವೂ ಒಪಿಎಸ್ ಜಾರಿಯೇ ಪ್ರಮುಖ ನಿರ್ಣಯವಾಗಿದೆ, ಹಿಂದಿನ ಸಿಎಂ ಬಸವರಾಜ ಬೊಮ್ಮಾಯಿ ಸರಕಾರ ಒಂದು ಸಮಿತಿ ರಚಿಸಿತ್ತು. ಆದರೆ, ಆ ಸರಕಾರ ಅಧಿಕಾರದಿಂದ ಕೆಳಗಿಳಿದ ಕಾರಣ ಹಾಗೆಯೇ ನನೆಗುದಿಗೆ ಬಿದ್ದಿತ್ತು. ಈಗ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಐದು ಜನ ಅಧಿಕಾರಿಗಳ ಒಳಗೊಂಡ ಸಮಿತಿ ರಚಿಸಿದೆ. ಈ ಸಮಿತಿ ಈಗಾಗಲೇ ಒಪಿಎಸ್ ಜಾರಿಗೆ ಸಂಬಂಧಿಸಿದ ರಾಜ್ಯಗಳಿಗೆ ಭೇಟಿ ನೀಡಿ, ಅಧ್ಯಯನ ನಡೆಸಿ ಸರಕಾರಕ್ಕೆ ವರದಿ ನೀಡಲಿದ್ದು, ಸರ್ಕಾರದ ಮೇಲೆ ಒತ್ತಡ ತಂದು ಜಾರಿಗೊಳಿಸಿ ನೌಕರರಿಗೆ ಅನುಕೂಲ ಮಾಡಿಕೊಡಲಾಗುತ್ತದೆ.

ಕನ್ನಡಪ್ರಭ ವಾರ್ತೆ ಕೋಲಾರ

ರಾಜ್ಯ ಸರ್ಕಾರದಿಂದ ಮುಂದಿನ ತಿಂಗಳೊಳಗೆ ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (ಎನ್‌ಪಿಎಸ್) ರದ್ದು ಮಾಡಿ, ಹಳೆ ಪಿಂಚಣಿ ವ್ಯವಸ್ಥೆ (ಒಪಿಎಸ್) ಜಾರಿಗೊಳಿಸಲು ಪ್ರಯತ್ನಿಸಲಾಗುತ್ತಿದೆ, ನೌಕರರ ತೊಂದರೆಗೆ ಸ್ಪಂದಿಸಿ ನೈತಿಕ ಶಕ್ತಿ ತುಂಬುವುದು ನಮ್ಮ ಗುರಿಯಾಗಿದೆ ಎಂದು ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಹೇಳಿದರು

ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕದಿಂದ ಎರಡನೇ ಬಾರಿ ರಾಜ್ಯಾಧ್ಯಕ್ಷರಾಗಿ ಆಯ್ಕೆಗೆ ಅಭಿನಂದನೆ ಮತ್ತು ಉತ್ತಮ ಶಿಕ್ಷಕಿಯರಿಗೆ ಸಾವಿತ್ರಿ ಬಾಯಿ ಪುಲೆ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಈ ವರ್ಷವೂ ಒಪಿಎಸ್ ಜಾರಿಯೇ ಪ್ರಮುಖ ನಿರ್ಣಯವಾಗಿದೆ, ಹಿಂದಿನ ಸಿಎಂ ಬಸವರಾಜ ಬೊಮ್ಮಾಯಿ ಸರಕಾರ ಒಂದು ಸಮಿತಿ ರಚಿಸಿತ್ತು. ಆದರೆ, ಆ ಸರಕಾರ ಅಧಿಕಾರದಿಂದ ಕೆಳಗಿಳಿದ ಕಾರಣ ಹಾಗೆಯೇ ನನೆಗುದಿಗೆ ಬಿದ್ದಿತ್ತು. ಈಗ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಐದು ಜನ ಅಧಿಕಾರಿಗಳ ಒಳಗೊಂಡ ಸಮಿತಿ ರಚಿಸಿದೆ. ಈ ಸಮಿತಿ ಈಗಾಗಲೇ ಒಪಿಎಸ್ ಜಾರಿಗೆ ಸಂಬಂಧಿಸಿದ ರಾಜ್ಯಗಳಿಗೆ ಭೇಟಿ ನೀಡಿ, ಅಧ್ಯಯನ ನಡೆಸಿ ಸರಕಾರಕ್ಕೆ ವರದಿ ನೀಡಲಿದ್ದು, ಸರ್ಕಾರದ ಮೇಲೆ ಒತ್ತಡ ತಂದು ಜಾರಿಗೊಳಿಸಿ ನೌಕರರಿಗೆ ಅನುಕೂಲ ಮಾಡಿಕೊಡಲಾಗುತ್ತದೆ ಎಂದರು.

ರಾಜ್ಯದಲ್ಲಿ ನೌಕರರ ಚಟುವಟಿಕೆಗಳಿಗೆ ನೌಕರರ ಭವನಗಳು ಅವಶ್ಯಕತೆ ಇದ್ದು, ಪ್ರತಿ ಜಿಲ್ಲಾ ಕೇಂದ್ರದಲ್ಲಿ ಹಾಗೂ ತಾಲೂಕು ಕೇಂದ್ರಗಳಲ್ಲಿ ಸರ್ಕಾರಿ ನೌಕರರ ಭವನ ನಿರ್ಮಾಣಕ್ಕೆ ಮೊದಲ ಆದ್ಯತೆ ನೀಡಲಾಗುತ್ತದೆ. ಅದರಂತೆ ಸರ್ಕಾರದಿಂದ ಪ್ರತಿ ಜಿಲ್ಲಾ ಕೇಂದ್ರದಲ್ಲಿ ತಲಾ ೫೦ ಲಕ್ಷ ರು. ಹಾಗೂ ತಾಲೂಕು ಕೇಂದ್ರಕ್ಕೆ ೨೫ ಲಕ್ಷ ರು.ಗಳನ್ನು ಬಿಡುಗಡೆ ಮಾಡಿಸಲು ಒತ್ತಾಯಿಸಲಾಗುತ್ತದೆ. ನೌಕರರ ಸಹಕಾರ ಹಾಗೂ ಸಂಘಟನೆ ಮೂಲಕ ನಮ್ಮ ಎಲ್ಲಾ ಹಕ್ಕುಗಳನ್ನು ಹಾಗೂ ಸೌಲಭ್ಯಗಳನ್ನು ಪಡೆಯಲು ರಾಜ್ಯ ಸರ್ಕಾರಿ ನೌಕರರ ಸಂಘವು ಶತಪ್ರಯತ್ನ ಮಾಡಲಾಗುವುದೆಂದು ಹೇಳಿದರು.

ಇನ್ನು ಕೆಲವು ಸಂಘಟನೆಯವರು ಎನ್‌ಪಿಎಸ್ ಸಮಸ್ಯೆಯನ್ನು ಜೀವಂತವಾಗಿಟ್ಟು, ಹೋರಾಟದ ಹೆಸರಿನಲ್ಲಿ ದೇಣಿಗೆ ಎತ್ತಬೇಕೆಂಬ ಮನಸ್ಥಿತಿ ಹೊಂದಿದ್ದಾರೆ. ನನ್ನ ಅವಧಿಯಲ್ಲಿ ೭ನೇ ವೇತನ ಆಯೋಗದ ವರದಿ ಯಥಾವತ್ತಾಗಿ ಜಾರಿಗೊಳಿಸುವುದು ಸೇರಿ ಒಟ್ಟು ೨೫ ಸರಕಾರಿ ಆದೇಶಗಳನ್ನು ಜಾರಿ ಮಾಡಲಾಗಿದೆ. ನಾವು ಎಲ್ಲೂ ಸಹ ಒಂದೇ ಒಂದು ರುಪಾಯಿ ದೇಣಿಗೆ ಎತ್ತಿಲ್ಲ. ೬ ಲಕ್ಷ ನೌಕರರಿಗೆ ಒಳ್ಳೆಯದನ್ನು ಮಾಡಲು ನಮ್ಮನ್ನು ಆಯ್ಕೆ ಮಾಡಿದ್ದಾರೆ. ಅ ಕೆಲಸವನ್ನು ಆಯ್ಕೆಯಾದ ಪ್ರತಿಯೊಬ್ಬ ಪದಾಧಿಕಾರಿಗಳು, ನಿರ್ದೇಶಕರು ಮಾಡಬೇಕು ಎಂದರು.

ಸಂಘದ ಜಿಲ್ಲಾ ಅಧ್ಯಕ್ಷ ಎ.ಅಜಯ್ ಕುಮಾರ್ ಮಾತನಾಡಿ, ರಾಜ್ಯ ಸಂಘದ ನಿರಂತರ ಪ್ರಯತ್ನದಿಂದ ಸುಮಾರು ೨೫ ನೌಕರರ ಸ್ನೇಹಿ ಆದೇಶಗಳನ್ನು ಜಾರಿ ಮಾಡಲಾಗಿದೆ. ಮುಂದೆ ಆರೋಗ್ಯ ಸಂಜೀವಿನಿ, ಒಪಿಎಸ್ ಜಾರಿಗೆ ಜಿಲ್ಲಾ ಸಂಘವು ರಾಜ್ಯ ಸಂಘಕ್ಕೆ ಸಂಪೂರ್ಣ ಬೆಂಬಲ ನೀಡಲಿದೆ. ಕೋಲಾರ ಜಿಲ್ಲೆಯಲ್ಲಿನ ನೌಕರರ ಭವನಕ್ಕೆ ಅನುದಾನ ಕೊಡಿಸುವ ಜೊತೆಗೆ ಗಡಿನಾಡು ಉತ್ಸವ ಹಾಗೂ ರಾಜ್ಯ ಕಾರ್ಯಕಾರಣಿ ಸಭೆ ನಡೆಸಲು ಅವಕಾಶ ನೀಡುವಂತೆ ಮನವಿ ಮಾಡಿದರು.

ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಎಸ್.ಬಸವರಾಜ್, ಪ್ರಧಾನ ಕಾರ್ಯದರ್ಶಿ ಎಚ್.ಗಿರಿಗೌಡ, ಖಜಾಂಚಿ ವಿ.ವಿ ಶಿವರುದ್ರಯ್ಯ, ರಾಜ್ಯ ಪರಿಷತ್ ಸದಸ್ಯರಾದ ಶ್ರೀನಿವಾಸರೆಡ್ಡಿ, ಕೆ.ಟಿ.ಸುರೇಶ್ ಬಾಬು, ಚೇತನ್, ಜ್ಞಾನಪ್ರಕಾಶ್, ಶಂಕರಪ್ಪ, ರಾಜೇಶ್, ಜಿಲ್ಲಾ ಖಜಾಂಚಿ ಮುರಳಿಮೋಹನ್, ಕಾರ್ಯದರ್ಶಿ ಸತೀಶ್ ಕುಮಾರ್, ಗೌರವಾಧ್ಯಕ್ಷ ಕೆ. ಎನ್. ಮಂಜುನಾಥ, ಹಿರಿಯ ಉಪಾಧ್ಯಕ್ಷರಾದ ನಾಗಮಣಿ, ಹರಿಕೃಷ್ಣ, ಡಾ. ತಬಸ್ಸುಮ್, ಕೆ. ವಿಜಯ್, ತಾಲೂಕು ಅಧ್ಯಕ್ಷರಾದ ವಿ.ಮುನೇಗೌಡ, ಕೆ.ಎನ್ ಅರವಿಂದ್, ಆರ್.ರವಿ, ಎಂ.ಬೈರೇಗೌಡ, ನರಸಿಂಹಮೂರ್ತಿ ಇದ್ದರು.

PREV

Recommended Stories

ರೇಣುಕಾಂಬೆ ದರ್ಶನಕ್ಕೆ ಬಂದಿದ್ದಾಗ ಮಗುವಿಗೆ ಜನ್ಮ ನೀಡಿದ ಅವಿವಾಹಿತೆ
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ