ಹನೂರು: ಸುಳ್ವಾಡಿ ಸಂತ್ರಸ್ತರಿಗೆ ಸಿಗಬೇಕಾದ ಸೌಲಭ್ಯಗಳು ಶೀಘ್ರವಾಗಿ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು.
ಹನೂರು: ಸುಳ್ವಾಡಿ ಸಂತ್ರಸ್ತರಿಗೆ ಸಿಗಬೇಕಾದ ಸೌಲಭ್ಯಗಳು ಶೀಘ್ರವಾಗಿ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು.
ಪಟ್ಟಣದ ತಮ್ಮ ನಿವಾಸಕ್ಕೆ ಆಗಮಿಸಿದ್ದ ಸುಳ್ವಾಡಿ ದುರಂತದ ಸಂತ್ರಸ್ತರ ಅಹವಾಲು ಮತ್ತು ಇಮ್ಮಡಿ ಮಹದೇವಸ್ವಾಮಿ ಜಾಮೀನು ರದ್ದು ಪಡಿಸುವಂತೆ ಸಲ್ಲಿಸಿದ ಮನವಿಗಳನ್ನು ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಸುಳ್ವಾಡಿ ವಿಷ ಪ್ರಸಾದದ ದುರಂತದಲ್ಲಿ ಇನ್ನೂ ಸರ್ಕಾರದ ಮಟ್ಟದಲ್ಲಿ ದೊರೆಯಬೇಕಾದ ಸವಲತ್ತುಗಳು ಸಿಗದಿರುವುದು ಖಂಡನೀಯ. ಆ ವಿಷಯವನ್ನು ನಾನು ಗಂಭೀರವಾಗಿ ಪರಿಗಣಿಸಿ ಮುಂದಿನ ದಿನಗಳಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಜೊತೆಗೆ ಈಗಾಗಲೇ ಇಮ್ಮಡಿ ಮಹದೇವಸ್ವಾಮಿ ಜಾಮೀನು ರದ್ದು ಪಡಿಸುವಂತೆ ತಮ್ಮೆಲ್ಲರ ಕೋರಿಕೆ ನ್ಯಾಯಾಲಯದ ಹಂತದಲ್ಲಿ ಇರುವುದರಿಂದ ನಾವ್ಯಾರು ಕೂಡ ಹಸ್ತ ಕ್ಷೇಪ ಮಾಡಲು ಆಗುವುದಿಲ್ಲ. ಬದಲಿಗೆ ನಾನು ಸರ್ಕಾರಿ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಜೊತೆಗೆ ಈಗಾಗಲೇ ಮೊಬೈಲ್ ವ್ಯಾನ್ ಆರೋಗ್ಯಕ್ಕೆ ಸಂಬಂಧಪಟ್ಟಂತೆ ಸೂಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಸಂತ್ರಸ್ತರಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಿದರು.
ಸಂತ್ರಸ್ತರು ಮಾತನಾಡಿ, ಈಗಾಗಲೇ ನಾವು ನಮ್ಮ ಕುಟುಂಬಸ್ಥರನ್ನು ಕಳೆದುಕೊಂಡು ತುಂಬಾ ದುಃಖದಲ್ಲಿದ್ದು, ಏಳು ವರ್ಷಗಳ ಹಿಂದೆ ನಡೆದ ವಿಷ ಪ್ರಸಾದ ದುರಂತದ ಮೊದಲನೇ ಆರೋಪಿ ಮಹದೇವಸ್ವಾಮಿಗೆ ಜಾಮೀನು ನೀಡಿರುವುದು ನಮಗೆ ಗಾಯದ ಮೇಲೆ ಬರ ಎಳೆದಂತಾಗಿದೆ. ಹಾಗಾಗಿ ಅವರ ಜಾಮೀನು ರದ್ದುಪಡಿಸಲು ತಾವು ಸೂಕ್ತ ಕ್ರಮ ವಹಿಸಬೇಕು. ಜೊತೆಗೆ ಸರ್ಕಾರದಿಂದ ಅಂದು ಘೋಷಣೆಯಾದ ಸೌಲಭ್ಯಗಳು ಕೇವಲ ಘೋಷಣೆಯಾಗಿ ಉಳಿದಿದೆ. ತಾವು ಆದಷ್ಟು ಬೇಗ ಸೌಲಭ್ಯಗಳನ್ನು ಒದಗಿಸಿ ಕೊಡಬೇಕೆಂದು ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸುಳ್ವಾಡಿ ವಿಷ ಪ್ರಸಾದ ದುರಂತದ ಸಂತ್ರಸ್ತರು ಎಂಜಿ ದೊಡ್ಡಿ ಹಾಗೂ ಬಿದರಹಳ್ಳಿ ಗ್ರಾಮಸ್ಥರು ಉಪಸ್ಥಿತರಿದ್ದರು.
(ಫೋಟೋ ಕ್ಯಾಫ್ಷನ್)
ಹನೂರು ತಾಲೂಕಿನ ಸುಳ್ವಾಡಿ ವಿಷ ದುರಂತ ಪ್ರಕರಣದ ಸಂತ್ರಸ್ತರು ಶಾಸಕ ಎಂ.ಆರ್.ಮಂಜುನಾಥ್ ಅವರನ್ನು ಭೇಟಿ ಮಾಡಿ ಇಮ್ಮಡಿ ಮಹದೇವಸ್ವಾಮಿ ಜಾಮೀನು ರದ್ದು ಪಡಿಸುವಂತೆ ಮನವಿ ಸಲ್ಲಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.