ಅಸಂಘಟಿತ ಕಾರ್ಮಿಕರಿಗೆ ವಸತಿ, ಸಾಲ ಸೌಲಭ್ಯಕ್ಕೆ ಯತ್ನ: ಶ್ರೀನಿವಾಸ್ ಭರವಸೆ

KannadaprabhaNewsNetwork |  
Published : Dec 09, 2025, 03:00 AM IST
08 HRR.  02ಹರಿಹರದಲ್ಲಿ ಭಾನುವಾರ ಜಯ ಶಾಂತ ಕಟ್ಟಡ ಕಾರ್ಮಿಕರ ಸಂಘದ ಉದ್ಘಾಟನೆ ಹಾಗೂ  ನೊಂದಾಯಿತ ಕಾರ್ಮಿಕರಿಗೆ ಗುರುತಿನ ಚೀಟಿ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂದಿಗಾವಿ ಶ್ರೀನಿವಾಸ್ ಮಾತನಾಡಿದರು. ಶಶಿ ನಾಯ್ಕ್ ಹಾಗೂ ಇತರರು ಇದ್ದರು. | Kannada Prabha

ಸಾರಾಂಶ

ಅರ್ಹ ಅಸಂಘಟಿತ ಕಾರ್ಮಿಕರಿಗೆ ವಸತಿ ಯೋಜನೆ ಹಾಗೂ ಸಾಲ ಸೌಲಭ್ಯ ಕಲ್ಪಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುತ್ತೇನೆ ಎಂದು ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಂದಿಗಾವಿ ಶ್ರೀನಿವಾಸ್ ಹೇಳಿದ್ದಾರೆ.

- ಜಯ ಶಾಂತ ಕಟ್ಟಡ ಕಾರ್ಮಿಕರ ಸಂಘದ ಉದ್ಘಾಟನೆ

- - -

ಹರಿಹರ: ಅರ್ಹ ಅಸಂಘಟಿತ ಕಾರ್ಮಿಕರಿಗೆ ವಸತಿ ಯೋಜನೆ ಹಾಗೂ ಸಾಲ ಸೌಲಭ್ಯ ಕಲ್ಪಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುತ್ತೇನೆ ಎಂದು ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಂದಿಗಾವಿ ಶ್ರೀನಿವಾಸ್ ಹೇಳಿದರು.

ನಗರದಲ್ಲಿ ಭಾನುವಾರ ಜಯ ಶಾಂತ ಕಟ್ಟಡ ಕಾರ್ಮಿಕರ ಸಂಘದ ಉದ್ಘಾಟನೆ ಹಾಗೂ ನೋಂದಾಯಿತ ಕಾರ್ಮಿಕರಿಗೆ ಗುರುತಿನ ಚೀಟಿ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅಸಂಘಟಿತ ಕಾರ್ಮಿಕರನ್ನು ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ರಾಜ್ಯ ಸರ್ಕಾರ ಹಲವು ಕಲ್ಯಾಣ ಯೋಜನೆಗಳನ್ನು ಜಾರಿ ಮಾಡಿದ್ದು, ಅರ್ಹರು ಅವುಗಳನ್ನು ಪಡೆದುಕೊಳ್ಳಬೇಕು. ನಿರ್ವಸಿತ ಕಾರ್ಮಿಕರಿಗೆ ವಸತಿ ಹಾಗೂ ಸಾಲ ಸೌಲಭ್ಯ ಕೊಡಿಸಲು ಬೇಡಿಕೆ ಬಂದಿದೆ. ಈ ಕುರಿತು ಕಾರ್ಮಿಕ ಸಚಿವರನ್ನು ಭೇಟಿ ಮಾಡಿ ಪ್ರಸ್ತಾವನೆ ಸಲ್ಲಿಸುತ್ತೇನೆ ಎಂದು ಭರವಸೆ ನೀಡಿದರು.

ಜಯ ಶಾಂತ ಕಟ್ಟಡ ಕಾರ್ಮಿಕರ ಸಂಘದ ಸ್ಥಾಪಕ ಶಶಿ ನಾಯ್ಕ್ ಮಾತನಾಡಿ, ಅಸಂಘಟಿತ ಕಾರ್ಮಿಕರ ಸಂಖ್ಯೆ ಅಪಾರವಾಗಿದೆ. ಜಾಗೃತಿಯ ಕೊರತೆ ಇರುವ ಈ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯ ಗುರುತಿನ ಚೀಟಿ ದೊರಕಿಸುವುದು ಹಾಗೂ ಅವರಿಗೆ ಮತ್ತು ಅವರ ಕುಟುಂಬದವರಿಗೆ ಇಲಾಖೆಯಿಂದ ಇರುವ ಸೌಲಭ್ಯಗಳನ್ನು ತಲುಪಿಸಲು ಆದ್ಯತೆ ನೀಡಲಾಗುತ್ತಿದೆ ಎಂದರು.

ಕಾರ್ಮಿಕರ ವೃತ್ತಿ ಆಧರಿಸಿ ನೀಡುವ ಉಪಕರಣಗಳ ಕಿಟ್, ವಸತಿ, ಸಾಲ ಸೌಲಭ್ಯ, ಮಕ್ಕಳಿಗೆ ವಿದ್ಯಾರ್ಥಿ ವೇತನ, ಅಪಘಾತ ವಿಮೆ, ವಿವಾಹ ಪ್ರೋತ್ಸಾಹಧನ, ಉಚಿತ ಆರೋಗ್ಯ ತಪಾಸಣೆ ಸೇರಿದಂತೆ ವಿವಿಧ ಯೋಜನೆಗಳ ಲಾಭ ಅರ್ಹ ಕಾರ್ಮಿಕರಿಗೆ ದೊರಕಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದೆಂದರು.

ಈ ಸಂದರ್ಭ ಸಂಘದ ಪದಾಧಿಕಾರಿಗಳಾದ ಮುಸ್ತಫಾ, ಮಹಬೂಬ್ ಖಾನ್, ಕುಬೇರ, ಮಹಬೂಬ್ ಅಲಿ ಕೆ.ಪಿ., ಸೈಯದ್ ಇಬ್ರಾಹಿಂ, ಕುಮಾರ್, ಮುಬಾರಕ್, ಚಮನ್, ಜಬಿವುಲ್ಲಾ, ಚಮನ್ ಶರೀಫ್, ಮೊಹಮ್ಮದ್ ರಫೀಕ್, ಫಯಾಜ್ ಅಹ್ಮದ್, ಹನುಮಂತ ನಾಯಕ್, ಪ್ರಭು ಹಾಗೂ ಇತರರು ಉಪಸ್ಥಿತರಿದ್ದರು.

- - -

-08HRR.02.ಜೆಪಿಜಿ:

ಕಾರ್ಯಕ್ರಮದಲ್ಲಿ ನಂದಿಗಾವಿ ಶ್ರೀನಿವಾಸ್ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಲಮರದ ತಿಮ್ಮಕ್ಕ ಹೆಸರಲ್ಲಿ ಪ್ರತಿ ವರ್ಷ ಪ್ರಶಸ್ತಿ ಪ್ರದಾನ : ಸಿಎಂ ಸಿದ್ದರಾಮಯ್ಯ
ಸಿಎಂ ರೇಸಲ್ಲಿ ಡಿಕೆ ಒಬ್ಬರೇ ಇಲ್ಲ : ರಾಜಣ್ಣ