ಅತಿಥಿ ಉಪನ್ಯಾಸಕರ ಸಮಸ್ಯೆ ಪರಿಹಾರಕ್ಕೆ ಯತ್ನ: ಸಚಿವ ಎಚ್‌.ಕೆ. ಪಾಟೀಲ

KannadaprabhaNewsNetwork |  
Published : Dec 08, 2025, 02:15 AM IST
ಧರಣಿ ಸತ್ಯಾಗ್ರಹದಲ್ಲಿ ಸಚಿವ ಡಾ. ಎಚ್‌.ಕೆ.ಪಾಟೀಲ ಮಾತನಾಡಿದರು. | Kannada Prabha

ಸಾರಾಂಶ

ಹನುಮಂತಗೌಡ ಆರ್. ಕಲ್ಮನಿ ಮಾತನಾಡಿ, ಕಾನೂನು ಸಚಿವ ಡಾ. ಎಚ್.ಕೆ. ಪಾಟೀಲ ಅವರು ನೀಡಿರುವ ಭರವಸೆ ಮೇರೆಗೆ ಗದುಗಿನಲ್ಲಿ ಜರಗುತ್ತಿರುವ ಹೋರಾಟವನ್ನು ಸ್ಥಗಿತಗೊಳಿಸಿ ಡಿ. 12ರಂದು ಬೆಳಗಾವಿಯಲ್ಲಿ ಜರುಗುವ ಚಳಿಗಾಲದ ಅಧಿವೇಶನದಲ್ಲಿ ರಾಜ್ಯದ ಎಲ್ಲ ಅತಿಥಿ ಉಪನ್ಯಾಸಕರ ಮೂಲಕ ಬೃಹತ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಗದಗ: ಅತಿಥಿ ಉಪನ್ಯಾಸಕರಿಗೆ ಸೂಕ್ತ ನ್ಯಾಯ ಕೊಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉನ್ನತ ಶಿಕ್ಷಣ‌ ಸಚಿವ ಡಾ. ಎಂ.ಸಿ. ಸುಧಾಕರ ಅವರ ಜತೆ ಸುದೀರ್ಘ ಚರ್ಚೆ ನಡೆಸುತ್ತಿದ್ದು‌, ಯಾರಿಗೂ ಅನ್ಯಾಯವಾಗದ ಹಾಗೆ ಸ್ಪಷ್ಟ ತೀರ್ಮಾನಕ್ಕೆ ಬರಲಾಗುವುದು ಎಂದು ಕಾನೂನು ಸಚಿವ ಡಾ. ಎಚ್.ಕೆ. ಪಾಟೀಲ ಭರವಸೆ ನೀಡಿದರು.

ನಗರದ ಜಿಲ್ಲಾ ಕಚೇರಿ ಎದುರು ಅತಿಥಿ ಉಪನ್ಯಾಸಕರ ಸೇವೆಯಲ್ಲಿ ಇರುವವರನ್ನು ಮುಂದುವರಿಸುವಂತೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದಿಂದ ನಡೆಯುತ್ತಿರುವ ಅತಿಥಿ ಉಪನ್ಯಾಸಕರ ಧರಣಿ ಸತ್ಯಾಗ್ರಹದ ಸ್ಥಳಕ್ಕೆ ಭೇಟಿ ನೀಡಿ ಮನವಿ ಆಲಿಸಿ ಮಾತನಾಡಿ, ಯಾರಿಗೂ ಅನ್ಯಾಯವಾಗದಂತೆ ಸ್ಪಷ್ಟ ತೀರ್ಮಾನಕ್ಕೆ ಬರಲಾಗುವುದು ಎಂದು ಸಚಿವರು ಭರವಸೆ ನೀಡಿದರು.ಸಂಘದ ರಾಜ್ಯಾಧ್ಯಕ್ಷ ಹನುಮಂತಗೌಡ ಆರ್. ಕಲ್ಮನಿ ಮಾತನಾಡಿ, ಕಾನೂನು ಸಚಿವ ಡಾ. ಎಚ್.ಕೆ. ಪಾಟೀಲ ಅವರು ನೀಡಿರುವ ಭರವಸೆ ಮೇರೆಗೆ ಗದುಗಿನಲ್ಲಿ ಜರಗುತ್ತಿರುವ ಹೋರಾಟವನ್ನು ಸ್ಥಗಿತಗೊಳಿಸಿ ಡಿ. 12ರಂದು ಬೆಳಗಾವಿಯಲ್ಲಿ ಜರುಗುವ ಚಳಿಗಾಲದ ಅಧಿವೇಶನದಲ್ಲಿ ರಾಜ್ಯದ ಎಲ್ಲ ಅತಿಥಿ ಉಪನ್ಯಾಸಕರ ಮೂಲಕ ಬೃಹತ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದರು.ಸಚಿವ ಡಾ. ಎಚ್.ಕೆ. ಪಾಟೀಲರ ಭರವಸೆ ಹಿನ್ನೆಲೆ ಗದುಗಿನಲ್ಲಿ ನಡೆಯುತ್ತಿರುವ ಧರಣಿಯನ್ನು ಡಿ. 12ರಂದು ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಮಾಡು ಇಲ್ಲವೇ ಮಡಿ ಹೋರಾಟವನ್ನು ರಾಜ್ಯಾದ್ಯಂತ ಎಲ್ಲ ಅತಿಥಿ ಉಪನ್ಯಾಸಕರ ಮೂಲಕ ಹೋರಾಟ ನಡೆಸಲು ತೀರ್ಮಾನಿಸಲಾಯಿತು.

ಸತ್ಯಾಗ್ರಹದಲ್ಲಿ ಭಾಗವಹಿಸಿ ಬೆಂಬಲ ನೀಡಿದ ಡಂಬಳ- ಗದುಗಿನ ತೋಂಟದಾರ್ಯ ಮಠದ ಡಾ. ತೋಂಟದ ಸಿದ್ದರಾಮ ಶ್ರೀಗಳು, ವಿಧಾನಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಹಿರಿಯ ಶಿಕ್ಷಣತಜ್ಞ ಡಾ. ಆರ್.ಎಂ. ಕುಬೇರಪ್ಪ, ವಿವಿಧ ನಾಯಕರಿಗೆ, ವಿವಿಧ ಸಂಘಟನೆಗಳಿಗೆ ಹಾಗೂ ಪತ್ರಿಕಾ ಮಾಧ್ಯಮ ಮತ್ತು ಪೋಲಿಸ್ ಸಿಬ್ಬಂದಿಗೆ ಧನ್ಯವಾದಗಳನ್ನು ತಿಳಿಸಲಾಯಿತು.

ಈ ವೇಳೆ ಶಿರಸಿ, ಹಾವೇರಿ, ಧಾರವಾಡ, ಕೊಪ್ಪಳ, ಅಂಕೋಲಾ, ಕುಮಟಾ, ದಾಂಡೇಲಿ, ಬೆಳಗಾವಿ, ಬಾಗಲಕೋಟೆ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಬಂದ ಅತಿಥಿ ಉಪನ್ಯಾಸಕರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಮುಂದಿನ ಸಿಎಂ ಯಾರು?’ ಎನ್ನುವ ಬಗ್ಗೆಯೂ ರಾಜ್ಯದಲ್ಲಿ ಬೆಟ್ಟಿಂಗ್‌ - ನಿಯಂತ್ರಿಸಿ'
ಕ್ರೈಂ ಹೆಚ್ಚಳಕ್ಕೆ ಸಿಬ್ಬಂದಿ ಕೊರತೆ ಕಾರಣ : ಡಾ.ಜಿ.ಪರಮೇಶ್ವರ್‌