ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ಪೌಷ್ಟಿಕಾಂಶ ಆಹಾರ: ಶಾಸಕ ಎಚ್.ಟಿ.ಮಂಜು

KannadaprabhaNewsNetwork | Published : Sep 26, 2024 10:07 AM

ಸಾರಾಂಶ

ಎಳೆಯ ವಯಸ್ಸಿನಲ್ಲಿ ಬೆಳೆಯುವ ಮಕ್ಕಳಿಗೆ ಅಗತ್ಯ ಪೌಷ್ಟಿಕಾಂಶಗಳಿಂದ ಕೂಡಿದ ಸಮತೋಲನ ಆಹಾರ ಬೇಕಾಗಿದೆ. ಮಕ್ಕಳು ಎಲ್ಲಾ ರೀತಿಯ ತರಕಾರಿಗಳು, ಹಣ್ಣುಗಳು, ಮೊಟ್ಟೆ, ಮಾಂಸ, ಕಾಳುಗಳು, ಹಾಲು ಮೊಸರು ಸೇರಿದಂತೆ ವಿವಿಧ ಪೋಷಕಾಂಶಗಳುಳ್ಳ ಆಹಾರ ಪದಾರ್ಥಗಳನ್ನು ಸೇವಿಸಿದರೆ ಅವರು ದೈಹಿಕವಾಗಿ ಸದೃಢ ಬೆಳವಣಿಗೆ ಹೊಂದುತ್ತಾರೆ.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಮೊಟ್ಟೆ, ಬಾಳೆಹಣ್ಣು ಹಾಗೂ ಶೇಂಗಾ ಚಿಕ್ಕಿ ಮಕ್ಕಳಿಗೆ ಅಗತ್ಯ ಪೌಷ್ಟಿಕಾಂಶಗಳನ್ನೊಳಗೊಂಡ ಆಹಾರ ಪದಾರ್ಥಗಳಾಗಿವೆ ಎಂದು ಶಾಸಕ ಎಚ್.ಟಿ ಮಂಜು ತಿಳಿಸಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ವಾರದ ಆರು ದಿನಗಳು ಮೊಟ್ಟೆ ವಿತರಣೆಗೆ ಚಾಲನೆ ನೀಡಿ ಮಾತನಾಡಿ, ಅಜೀಂ ಪ್ರೇಮ್ ಜಿ ಫೌಂಡೇಶನ್ ವಿದ್ಯಾರ್ಥಿಗಳಿಗಾಗಿ ಕೈಗೊಂಡಿರುವ ಮೊಟ್ಟೆ ವಿತರಣೆ ಬಹಳ ಉಪಯುಕ್ತವಾಗಿದೆ ಎಂದರು.

ಎಳೆಯ ವಯಸ್ಸಿನಲ್ಲಿ ಬೆಳೆಯುವ ಮಕ್ಕಳಿಗೆ ಅಗತ್ಯ ಪೌಷ್ಟಿಕಾಂಶಗಳಿಂದ ಕೂಡಿದ ಸಮತೋಲನ ಆಹಾರ ಬೇಕಾಗಿದೆ. ಮಕ್ಕಳು ಎಲ್ಲಾ ರೀತಿಯ ತರಕಾರಿಗಳು, ಹಣ್ಣುಗಳು, ಮೊಟ್ಟೆ, ಮಾಂಸ, ಕಾಳುಗಳು, ಹಾಲು ಮೊಸರು ಸೇರಿದಂತೆ ವಿವಿಧ ಪೋಷಕಾಂಶಗಳುಳ್ಳ ಆಹಾರ ಪದಾರ್ಥಗಳನ್ನು ಸೇವಿಸಿದರೆ ಅವರು ದೈಹಿಕವಾಗಿ ಸದೃಢ ಬೆಳವಣಿಗೆ ಹೊಂದುತ್ತಾರೆ ಎಂದರು.

ಅಜೀಂ ಪ್ರೇಮ್ ಜಿ ಫೌಂಡೇಶನ್ ಕೇವಲ ಮೊಟ್ಟೆ ನೀಡುವುದಕ್ಕೆ ಮಾತ್ರ ಸೀಮಿತವಾಗದೆ, ಮಾನವ ಸಂಪನ್ಮೂಲವನ್ನು ಅಭಿವೃದ್ಧಿ ಪಡಿಸುವ ಹಾಗೂ ಶಿಕ್ಷಕರಿಗೆ ಆಳವಾದ ಜ್ಞಾನವನ್ನು ಒದಗಿಸುವ ನಿಟ್ಟಿನಲ್ಲಿ ಅಗತ್ಯ ತರಬೇತಿಗಳನ್ನು ನೀಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್.ಸೀತಾರಾಮು, ಪಿಎಂ ಪೋಷಣೆ ಸಹಾಯಕ ನಿರ್ದೇಶಕ ಸಿ.ಎನ್.ಯತೀಶ್, ಸಮನ್ವಯಾಧಿಕಾರಿ ಎಚ್.ಕೆ.ಮಂಜುನಾಥ್, ತಾಲೂಕು ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಸಿ.ಕೆ.ಶಿವರಾಮೇಗೌಡ, ಕಾರ್ಯದರ್ಶಿ ಪಿ.ಜೆ.ಕುಮಾರ್, ಹಿರಿಯ ಉಪಾಧ್ಯಕ್ಷ ಎಸ್.ಆರ್.ಆನಂದ್‌ಕುಮಾರ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಎಂ.ಬಸವರಾಜು. ಕಾರ್ಯದರ್ಶಿ ವಿಜಯ ನಾರಾಯಣ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಸಿ.ಟಿ.ಲಕ್ಷ್ಮಣಗೌಡ, ತಾಲೂಕು ಎಸ್‌ಸಿ, ಎಸ್‌ಟಿ ನೌಕರರ ಸಂಘದ ಅಧ್ಯಕ್ಷ ಕಟ್ರಯೋಗೇಶ್, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲ ರವಿಕುಮಾರ್ ಸೇರಿದಂತೆ ಶಾಲಾ ಮಕ್ಕಳು ಹಾಜರಿದ್ದರು.

Share this article