ನಾಪೋಕ್ಲು ವ್ಯಾಪ್ತಿಯ ವಿವಿಧ ಭಾಗಗಳಲ್ಲಿ ಮಹಮ್ಮದ್ ಪೈಗಂಬರ್ ಅವರ ಜನ್ಮ ದಿನವನ್ನು ಮಂಗಳವಾರ ಸಂಭ್ರಮದಿಂದ ಆಚರಿಸಲಾಯಿತು.
ನಾಪೋಕ್ಲು: ನಾಪೋಕ್ಲು ವ್ಯಾಪ್ತಿಯ ವಿವಿಧ ಭಾಗಗಳಲ್ಲಿ ಮಹಮ್ಮದ್ ಪೈಗಂಬರ್ ಅವರ ಜನ್ಮ ದಿನವನ್ನು ಮಂಗಳವಾರ ಸಂಭ್ರಮದಿಂದ ಆಚರಿಸಲಾಯಿತು.
ನಾಪೋಕ್ಲು , ಹಳೆ ತಾಲೂಕು , ಎಮ್ಮೆಮಾಡು , ಕೊಟ್ಟ ಮುಡಿ, ಹೊದವಾಡ, ಕಕ್ಕಬ್ಬೆ, ಕುಂಜಿಲ ಸೇರಿದಂತೆ ವಿವಿಧ ಜಮಾಯತ್ ವತಿಯಿಂದ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಈದ್ ಮಿಲಾದ್ ಆಚರಿಸಲಾಯಿತು. ನಾಪೋಕ್ಲು ಪಟ್ಟಣದಲ್ಲಿ ಹಾಗೂ ಹಳೆ ತಾಲೂಕಿನಲ್ಲಿ ಮಸೀದಿಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ನಾಪೋಕ್ಲುವಿನ ಪಟ್ಟಣದ ಮುಯ್ಯದೀನ್ ಜುಮ್ಮಾ ಮಸೀದಿ ಜಮಾಯತ್ ವತಿಯಿಂದ ಈದ್ ಮಿಲಾದ್‌ನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭ ಅನ್ನಸಂತರ್ಪಣೆಯನ್ನು ಆಯೋಜಿಸಲಾಗಿತ್ತು.
ಜಮಾಯತ್ ಅಧ್ಯಕ್ಷ ಎಂ.ಎಚ್. ಅಬ್ದುಲ್ ರೆಹಮಾನ್ ಹಾಗೂ ಆಡಳಿತ ಮಂಡಳಿ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮತ್ತು ಅನ್ನ ದಾನ ನೆರವೇರಿತು.
ವಿವಿಧೆಡೆ ಮದರಸ ವಿದ್ಯಾರ್ಥಿಗಳಿಂದ ದಫ್ ಪ್ರದರ್ಶನ ಆಯೋಜಿಸಲಾಗಿತ್ತು. ಮುಸ್ಲಿಮರು ಮೆರವಣಿಗೆಯಲ್ಲಿ ದಫ್ ಕಾರ್ಯಕ್ರಮದೊಂದಿಗೆ ತೆರಳಿದರು. ಸಮೀಪದ ಎಮ್ಮೆ ಮಾಡು ಇಸ್ಲಾಂ ಮುಸ್ಲಿಂ ಜಮಾಯತ್ ವತಿಯಿಂದ ಈದ್ ಸಂದೇಶ ಜಾಥಾವನ್ನು ಆಯೋಜಿಸಲಾಗಿತ್ತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.