ಲೋಕ್ ಅದಾಲತ್ ನಲ್ಲಿ ಒಂದಾದ ಎಂಟು ಜೋಡಿ

KannadaprabhaNewsNetwork |  
Published : Mar 09, 2025, 01:50 AM IST
ಚಿತ್ರದುರ್ಗ ಪೋಟೋ ಸುದ್ದಿ | Kannada Prabha

ಸಾರಾಂಶ

Eight couples united in Lok Adalat

-ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿಯೇ ಮಧುರ ಕ್ಷಣಗಳ ಮುಂದುವರಿಕೆ

----

ಕನ್ನಡಪ್ರಭವಾರ್ತೆ, ಚಿತ್ರದುರ್ಗ

ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ನಡೆದ ಲೋಕ ಅದಾಲತ್ ನಲ್ಲಿ ಮೂರು ಸೇರಿದಂತೆ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿನ ಐದು ಪ್ರಕರಣಗಳಲ್ಲಿ ಮುನಿಸಿಕೊಂಡಿದ್ದ ಎಂಟು ಮಂದಿ ದಂಪತಿ ಒಂದಾಗಿ ಹೋಗುವ ತೀರ್ಮಾನ ಕೈಗೊಂಡಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ರೋಣ ವಾಸುದೇವ ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಸಿವಿಲ್ ವ್ಯಾಜ್ಯಗಳ ಜತೆಗೆ ವೈವಾಹಿಕ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಒಟ್ಟುಗೂಡಿಸಲು ಹೆಚ್ಚು ಒತ್ತು ನೀಡಲಾಗುತ್ತಿದೆ. ಇದರ ಪರಿಣಾಮ ಎಂಟು ಮಂದಿ ದಂಪತಿ ಮರಳಿ ಒಂದೇ ಗೂಡು ಸೇರಲು ಸಾಧ್ಯವಾಗಿದೆ ಎಂದರು.

ವೈವಾಹಿಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಿಲ್ಲಾ ನ್ಯಾಯಾಲಯದಲ್ಲಿ 3 ಪ್ರಕರಣ ಹಾಗೂ ಜಿಲ್ಲೆ ವಿವಿಧ ನ್ಯಾಯಾಲಯಗಳಿಂದ 5 ಪ್ರಕರಣ ಸೇರಿದಂತೆ ಒಟ್ಟು 8 ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಕ್ರಮವಹಿಸಲಾಗಿದ್ದು, ಇದಕ್ಕೆ ಕಕ್ಷಿದಾರರು, ವಕೀಲರ ಸಂಘದವರು ಹೆಚ್ಚಿನ ಸಹಕಾರ ನೀಡಿದ್ದಾರೆ ಎಂದು ಹೇಳಿದರು.

ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಸಿಜೆಎಂ ಡಿ.ಮಮತ, ಒಂದನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶೆ ಎ‌.ಎಂ.ಚೈತ್ರ, ವಕೀಲರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ, ಪ್ರಧಾನ ಕಾರ್ಯದರ್ಶಿ ಆರ್.ಗಂಗಾಧರ್ ಸೇರಿದಂತೆ ಲೋಕ್ ಅದಾಲತ್ ನಲ್ಲಿ ಚಿತ್ರದುರ್ಗದ ಎಲ್ಲ ನ್ಯಾಯಾಧೀಶರು, ವಕೀಲರ ಸಂಘದ ಪದಾಧಿಕಾರಿಗಳು, ಹಿರಿಯ ವಕೀಲರು ಭಾಗವಹಿಸಿದ್ದರು

---------------

ಪೋಟೋ:

ಲೋಕಅದಾಲತ್ ನಲ್ಲಿ ನ್ಯಾಯಾಧೀಶರ ಮುಂದೆ ಒಂದಾದ ದಂಪತಿಗಳು ಪರಸ್ಪರ ಸಿಹಿ ತಿನ್ನಿಸುವುದರ ಮೂಲಕ ಮಧುರ ಕ್ಷಣಗಳ ಮುಂದುವರಿಸಿದರು.

-----------

ಫೋಟೋ ಫೈಲ್ ನೇಮ್- 8 ಸಿಟಿಡಿ9

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''