)
ಧಾರವಾಡ:
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ. 24ರಂದು ಇಲ್ಲಿಯ ರಾಮನಗರ 1ನೇ ಕ್ರಾಸ್ನಲ್ಲಿ ನಿರಾಶ್ರಿತ ಸ್ಥಿತಿಯಲ್ಲಿದ್ದ ವೃದ್ಧರೊಬ್ಬರು ತೀವ್ರ ಅಸ್ವಸ್ಥರಾಗಿದ್ದರು. ಅವರನ್ನು ಸ್ಥಳಾಂತರಿಸಿದರೆ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಡಬಹುದು ಎಂಬ ಆತಂಕದಿಂದ ಸುರತವಾಗಿ ಆಸ್ಪತ್ರೆಗೆ ಕರೆದೊಯ್ಯುವುದಕ್ಕೆ ಮಧ್ಯಾಹ್ನ 3.14ಕ್ಕೆ 112 ತುರ್ತು ಸಹಾಯವಾಣಿಗೆ ಕರೆ ಮಾಡಲಾಗಿತ್ತು. ಆದರೆ, ವೃದ್ಧರೊಂದಿಗೆ ಸಹಾಯಕ್ಕೆ ಯಾರೂ ಇಲ್ಲ ಎಂಬ ಕಾರಣ ನೀಡಿ, 108 ಆ್ಯಂಬುಲೆನ್ಸ್ ಸಿಬ್ಬಂದಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ನಿರಾಕರಿಸಿದರು. ಸಂಜೆ 4.08ಕ್ಕೆ ಮತ್ತೊಮ್ಮೆ ಕರೆ ಮಾಡಲಾಗಿತ್ತು. ಆದರೆ, ಅಷ್ಟರಲ್ಲಾಗಲೇ ವೃದ್ಧರು ಮೃತಪಟ್ಟಿದ್ದರು ಎಂದು ಆರೋಪಿಸಿದರು.
ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಹೃದಯಾಘಾತದಿಂದ ಸಾವು ಸಂಭವಿಸಿರುವುದಾಗಿ ಉಲ್ಲೇಖಿಸಲಾಗಿದೆ. ತುರ್ತು ಸಂದರ್ಭದಲ್ಲಿ ರೋಗಿಗಳಿಗೆ ತಕ್ಷಣ ವೈದ್ಯಕೀಯ ನೆರವು ಒದಗಿಸುವುದು ಆ್ಯಂಬುಲೆನ್ಸ್ ಸೇವೆಯ ಉದ್ದೇಶ. ಆದರೆ, ರೋಗಿಯೊಂದಿಗೆ ಸಹಾಯಕರು ಯಾರೂ ಇಲ್ಲ ಎಂಬ ಕಾರಣಕ್ಕೆ ಆ್ಯಂಬುಲೆನ್ಸ್ ಸೇವೆ ನಿರಾಕರಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟ ಅದಿಕಾರಿಗಳು, ಪೊಲೀಸರಿಗೆ ದೂರು ಸಲ್ಲಿಸಿದ್ದರೂ ಈ ವರೆಗೆ ಯಾವುದೇ ಕ್ರಮಕೈಗೊಂಡಿಲ್ಲ. ಸಾರ್ವಜನಿಕರ ನೆರವಿಗಾಗಿ ಇರುವ ಆ್ಯಂಬುಲೆನ್ಸ್ ಸೇವೆಯಲ್ಲಿಯೇ ನಿರ್ಲಕ್ಷ್ಯ ಕಂಡುಬಂದರೆ ತುರ್ತು ಸೇವೆಯ ಉದ್ದೇಶವೇನು? ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಕರ್ತವ್ಯ ಲೋಪ ಎಸಗಿರುವುದು ದೃಢಪಟ್ಟಲ್ಲಿ ಸಂಬಂಧಪಟ್ಟ ಸಿಬ್ಬಂದಿ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.