ಕನ್ನಡಪ್ರಭ ವಾರ್ತೆ ಹಾಸನ
ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ಪ್ರಸಾದಿಹಳ್ಳಿ ಗ್ರಾಮದ ವೃದ್ಧ ರೈತ ಮಹಿಳೆ ಗೌರಮ್ಮ ಅವರು ಜಮೀನಿನ ಸಮಸ್ಯೆ ಪರಿಹರಿಸುವಂತೆ ಪ್ರಜಾಸೇವಾ ಸಭೆಯಲ್ಲಿ ಮನವಿ ಸಲ್ಲಿಸಲು ತೆರಳಿದ್ದಾಗ, ತಹಸೀಲ್ದಾರ್ ಶ್ರೀಧರ್ ಕಂಕನವಾಡಿ ಅವರು ಅವಮಾನಿಸಿ, ದಾಖಲೆಗಳನ್ನು ಬಿಸಾಡಿ ಕಚೇರಿಯಿಂದ ಹೊರಗೆ ಕಳುಹಿಸಿದ್ದಾರೆ ಎಂದು ಆರೋಪಿಸಿದರು. ಶಾಸಕ ಎಚ್. ಕೆ. ಸುರೇಶ್ ಅವರ ಸಮ್ಮುಖದಲ್ಲಿಯೇ ಮಹಿಳೆ ತಮ್ಮ ಅಳಲು ತೋಡಿಕೊಂಡಿರುವುದು ಅಧಿಕಾರಿಗಳ ಕಾರ್ಯವೈಖರಿಯ ಬಗ್ಗೆ ಪ್ರಶ್ನೆ ಮೂಡಿಸಿದೆ ಎಂದರು. ಜಮೀನಿನ ಸಮಸ್ಯೆ ಬಗೆಹರಿಸಲು ರೈತರೊಬ್ಬರಿಂದ ೨೦ ಲಕ್ಷ ರು. ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಕುರಿತು ಲೋಕಾಯುಕ್ತ ತನಿಖೆ ನಡೆಯುತ್ತಿದೆ. ಮುದಿಗೆರೆ ಗ್ರಾಮದ ೨೦ರಿಂದ ೨೫ ರೈತರ ಜಮೀನಿನ ಪೋಡಿ ಹಾಗೂ ದುರಸ್ತಿಗಾಗಿ ಹಣ ಪಡೆದಿರುವುದು ಮತ್ತು ವೃದ್ಧಾಪ್ಯ ವೇತನ ಮಂಜೂರಾತಿಗೆ ಲಂಚ ಕೇಳಿರುವ ಬಗ್ಗೆಯೂ ದೂರುಗಳಿವೆ ಎಂದು ತಿಳಿಸಿದರು.ಬಡ ರೈತರು ಹಾಗೂ ವೃದ್ಧರು ತಮ್ಮ ಹಕ್ಕಿನ ಕೆಲಸಗಳಿಗಾಗಿ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ತಪ್ಪಬೇಕು. ಆರೋಪಗಳ ಕುರಿತು ಜಿಲ್ಲಾಡಳಿತ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ತಹಶೀಲ್ದಾರ್ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ವರ್ಗಾವಣೆ ಮಾಡಬೇಕು. ಇಲ್ಲದಿದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.ಪತ್ರಿಕಾಗೋಷ್ಠಿಯಲ್ಲಿ ಸಮಸ್ಯೆ ಎದುರಿಸುತ್ತಿರುವ ಗೌರಮ್ಮ ತನಗೆ ಆದ ಅನ್ಯಾಯದ ಬಗ್ಗೆ ತಮ್ಮ ಅಳಲು ತೋಡಿಕೊಂಡರು.ಇದೇ ವೇಳೆ ಮೂಲನಿವಾಸಿ ಸಂಘದ ರಾಷ್ಟ್ರೀಯ ಉಪಾಧ್ಯಕ್ಷ ಡಿ. ಕೃಷ್ಣಮೂರ್ತಿ, ಜಿಲ್ಲಾಧ್ಯಕ್ಷ ಪುಟ್ಟಸ್ವಾಮಿ, ಬೇಲೂರು ತಾಲ್ಲೂಕು ಅಧ್ಯಕ್ಷ ಕೃಷ್ಣಯ್ಯ ಹಾಗೂ ಸಮಾಜ ಸೇವಕ ನಾಗೇಶ್ ಉಪಸ್ಥಿತರಿದ್ದರು.
==========ಫೋಟೋ ಪ್ಯಾನಲ್