ಕುಶಾಲನಗರ: ಚುನಾವಣಾ ಪ್ರಚಾರ ಸಭೆ

KannadaprabhaNewsNetwork |  
Published : Mar 31, 2024, 02:01 AM IST
ಪ್ರಚಾರ | Kannada Prabha

ಸಾರಾಂಶ

ಮುಂಬರುವ ಪೀಳಿಗೆಗೆ ನೂತನ ಭಾರತದ ಸೃಷ್ಟಿ ಆಗಬೇಕಿದೆ. ಆ ನಿಟ್ಟಿನಲ್ಲಿ ನಮ್ಮೆಲ್ಲರ ಪ್ರಯತ್ನ ಸಾಗಲಿದೆ ಎಂದು ಯದುವೀರ್‌ ಹೇಳಿದರು.

ಕನ್ನಡಪ್ರಭ ವಾರ್ತೆ ಕುಶಾಲನಗರ

ಮೋದಿ ಅವರ ಮೂಲಕ ಭಾರತ ದೇಶಕ್ಕೆ ಮತ್ತೆ ಸುವರ್ಣ ಯುಗ ಬಂದಿದೆ ಎಂದು ಮೈಸೂರು ಕೊಡಗು ಲೋಕಸಭಾ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅವರು ಕುಶಾಲನಗರದ ಸಮೀಪ ಕೊಪ್ಪ ಗ್ರಾಮದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ಜಂಟಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಹಿಂದೆ ಅರಸರ ಕಾಲದಲ್ಲಿ ಸುವರ್ಣ ಯುಗ ಅನ್ನುವ ಕಾಲ ಇತ್ತು. ಇದೀಗ ಜನಸಾಮಾನ್ಯರ ಒಳಿತನ್ನು ಬಯಸುವ ಸರ್ಕಾರ ನಮ್ಮ ಮುಂದಿದೆ ಎಂದರು.

ಮುಂಬರುವ ಪೀಳಿಗೆಗೆ ನೂತನ ಭಾರತದ ಸೃಷ್ಟಿ ಆಗಬೇಕಾಗಿದೆ. ಆ ನಿಟ್ಟಿನಲ್ಲಿ ನಮ್ಮೆಲ್ಲರ ಪ್ರಯತ್ನ ಸಾಗಲಿದೆ ಎಂದು ಹೇಳಿದ ಯದುವೀರ್ ಮತಯಾಚನೆ ಮಾಡಿದರು.

ಈ ಸಂದರ್ಭ ಮಾತನಾಡಿದ ಮಾಜಿ ಶಾಸಕ ಕೆ ಮಹದೇವ್ ಮಾತನಾಡಿದರು. ಈ ಸಂದರ್ಭ ಮಾಜಿ ಶಾಸಕ ಬಸವರಾಜು, ಕೊಡಗು ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ರಾಬಿನ್ ದೇವಯ್ಯ, ಮೈಸೂರು ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಮಹಾದೇವಸ್ವಾಮಿ, ತಾಲೂಕು ಅಧ್ಯಕ್ಷರಾದ ರಾಜೇಂದ್ರ, ರಾಜೇಗೌಡ, ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೀಲಾ, ಮಾಜಿ ಅಧ್ಯಕ್ಷರಾದ ರೇಣುಕಾ ಸ್ವಾಮಿ, ಸದಸ್ಯರಾದ ನಾರಾಯಣ, ರಾಜಪ್ಪ ಮತ್ತಿತರರಿದ್ದರು.

-----------------------------

ಇಂದು ಜನರಲ್ ತಿಮ್ಮಯ್ಯ ಜನ್ಮ ದಿನಾಚರಣೆ

ಮಡಿಕೇರಿ: ಜಿಲ್ಲಾಡಳಿತ ವತಿಯಿಂದ ಪದ್ಮಭೂಷಣ ಜನರಲ್ ಕೆ.ಎಸ್.ತಿಮ್ಮಯ್ಯ ಅವರ 118 ನೇ ಜನ್ಮ ದಿನಾಚರಣೆಯು ಮಾ. 31ರಂದು ಬೆಳಗ್ಗೆ 10.30 ಗಂಟೆಗೆ ಜನರಲ್ ತಿಮ್ಮಯ್ಯ ಸ್ಮಾರಕ ಭವನ (ಸನ್ನಿಸೈಡ್)ದಲ್ಲಿ ನಡೆಯಲಿದೆ. ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ ಇತರರು ಪಾಲ್ಗೊಳ್ಳಲಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!