- ಬೀರಲಿಂಗೇಶ್ವರ ದೇವಸ್ಥಾನ ಬಳಿ ಜಾಥಾಗೆ ಮಲ್ಲನಾಯಕ್ ಚಾಲನೆ - - - ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸೋಮವಾರ ನಗರದ ಬೀರಲಿಂಗೇಶ್ವರ ದೇವಸ್ಥಾನ ಬಳಿಯಿಂದ ಮತದಾನ ಜಾಗೃತಿ ಜಾಥಾಗೆ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಮಲ್ಲನಾಯಕ್ ಚಾಲನೆ ನೀಡಿದರು.
ಒಬ್ಬ ಮತದಾರನಿಗೆ ಮಾತ್ರ ಅಧಿಕಾರವನ್ನು ತರಲು ಅಥವಾ ಬೀಳಿಸಲು ಅಧಿಕಾರವಿದೆ ಎಂಬ ಘೋಷ ವಾಕ್ಯಗಳೊಂದಿಗೆ ಹೈಸ್ಕೂಲ್ ಮೈದಾನದ ಬೀರಲಿಂಗೇಶ್ವರ ದೇವಸ್ಥಾನದಿಂದ ಆರಂಭಗೊಂಡು ಪಿ.ಬಿ.ರಸ್ತೆ, ಹಳೇ ಬಸ್ ನಿಲ್ದಾಣ, ಗಾಂಧಿ ಸರ್ಕಲ್, ಅಶೋಕ ರಸ್ತೆಯ ಮೂಲಕ ಜಯದೇವ ಸರ್ಕಲ್ ಬಳಿ ಬಂದು ಕ್ಯಾಂಡಲ್ ಹಚ್ಚಿ, ಮಾನವ ಸರಪಳಿ ನಿರ್ಮಿಸಿ ಮತದಾನ ಜಾಗೃತಿ ಮೂಡಿಸಲಾಯಿತು.
ಜಿಪಂ ಉಪನಿರ್ದೇಶಕಿ ಶಾರದಾ ದೊಡ್ಡಗೌಡ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯದರ್ಶನಿ, ಯೋಜನಾಧಿಕಾರಿ ನೇತ್ರಾವತಿ ಜಿ., ಅಂಗನವಾಡಿ ಮೇಲ್ವಿಚಾರಕಿಯರು, ಕಾರ್ಯಕರ್ತೆಯರು, ಸಹಾಯಕಿಯರು ಇನ್ನಿತರರು ಉಪಸ್ಥಿತರಿದ್ದರು.- - - -29ಕೆಡಿವಿಜಿ43, 44ಃ: