ದೇಶದ ಅಭಿವೃದ್ಧಿಗಾಗಿ ಚುನಾವಣೆ, ಗ್ಯಾರಂಟಿಗಾಗಿ ಅಲ್ಲ: ಸಂಸದ ಬಿ.ವೈ.ರಾಘವೇಂದ್ರ

KannadaprabhaNewsNetwork |  
Published : Apr 05, 2024, 01:02 AM IST
ಪೊಟೋ:4ಎಸ್‌ಎಂಜಿಕೆಪಿ04ಶಿವಮೊಗ್ಗ ನಗರದ ಆಲ್ಕೋಳ ವೃತ್ತ ಸಮೀಪದ ಬಸವ ಮಂಟಪದಲ್ಲಿ ಗುರುವಾರ ನಡೆದ ಮಹಿಳಾ ಸಮಾವೇಶದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಮಾತನಾಡಿದರು. | Kannada Prabha

ಸಾರಾಂಶ

ಶಿವಮೊಗ್ಗ ನಗರದ ಆಲ್ಕೋಳ ವೃತ್ತ ಸಮೀಪದ ಬಸವ ಮಂಟಪದಲ್ಲಿ ನಡೆದ ಮಹಿಳಾ ಸಮಾವೇಶದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಮಾತನಾಡಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಲೋಕಸಭಾ ಚುನಾವಣೆ ದೇಶವನ್ನು ಅಭಿವೃದ್ಧಿಗೊಳಿಸುವ ಚುನಾವಣೆ. ಗ್ಯಾರಂಟಿಗಾಗಿ ನಡೆಯವ ಚುನಾವಣೆ‌ ಅಲ್ಲ ಎಂದು ಸಂಸದ, ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಹೇಳಿದರು.

ನಗರದ ಆಲ್ಕೋಳ ವೃತ್ತ ಸಮೀಪದ ಬಸವ ಮಂಟಪದಲ್ಲಿ ಗುರುವಾರ ನಡೆದ ಮಹಿಳಾ ಸಮಾವೇಶದಲ್ಲಿ ಅವರು ಮಾತನಾಡಿ, ಪ್ರದಾನಿ ನರೇಂದ್ರ ಮೋದಿವರು ಮಹಿಳಾ ಸಬಲೀಕರಣಕ್ಕಾಗಿ. ಸ್ವಾವಲಂಬಿಯಾಗಿ ಬದುಕಬೇಕೆನ್ನುವ ದೃಷ್ಟಿಯಿಂದ ಅನೇಕ ಯೋಜನೆ ಜಾರಿಗೆ ತಂದಿದ್ದಾರೆ. ಮಹಿಳಾ ಮೀಸಲಾತಿ, ಸ್ಟಾರ್ಟಪ್ ಯೋಜನೆ‌, ತ್ರಿವಳಿ ತಲಾಖ್, ಜನಧನ್ ಯೋಜನೆ, ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ, ವಿಶ್ವಕರ್ಮ ಯೋಜನೆ, ಲಕ್ ಪತ್ ದೀದಿ ಹೀಗೆ ಹತ್ತು ಹಲವು ಕಾರ್ಯಕ್ರಮ ನೀಡಿದ್ದಾರೆ ಎಂದು ತಿಳಿಸಿದರು.

ಚುನಾವಣೆಗಾಗಿ ಮಾತ್ರ ಮಾತನಾಡುವ ಪಕ್ಷ, ವ್ಯಕ್ತಿ ನಾವಲ್ಲ. ಜನರ ಮಧ್ಯೆ ಇದ್ದು ಅಭಿವೃದ್ಧಿ. ದೇಶದ ರಕ್ಷಣೆ. ಜನಪರ ಯೋಜನೆಗಳ ಚಿಂತನೆ ನಡೆಸುವ ಪಕ್ಷ ಬಿಜೆಪಿ. ಇದರ ಕಾರ್ಯಕರ್ತರಾಗಿರುವ ನಾವು ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಂಬಲಿಸಬೇಕಿದೆ ಎಂದು ಹೇಳಿದರು.

ರಾಮಮಂದಿರ ನಿರ್ಮಾಣ, ದೇಶದ ಅಭಿವೃದ್ಧಿಗಾಗಿ ದುಡಿಯುತ್ತಿರುವ ಮೋದಿಯವರು ಮತ್ತೆ ಪ್ರದಾನಿಯಾಗಲು ನಾವು ಕೆಲಸ ಮಾಡುತ್ತಿದ್ದೇವೆ‌. ಅನೇಕ ಅಭಿವೃದ್ಧಿ, ಜಿಲ್ಲೆಯ ಅಭಿವೃದ್ಧಿಗೆ ನೀಡಿರುವ ಕೊಡುಗೆ ಅಪಾರ ಎಂದು ಬಣ್ಣಿಸಿದರು.

ಹಿಂದೆ ಎಲ್‌ಪಿಜಿ ಸಿಲಿಂಡರ್ ಸಿಗದ ಪರಿಸ್ಥಿತಿ ಇತ್ತು. ಈಗ ಎಲ್ಲೆಂದರಲ್ಲಿ ಸಿಗುತ್ತಿದೆ. ಬಡ ಕುಟುಂಬಕ್ಕೆ ಉಚಿತ ಸಿಲಿಂಡರ್ ಪೂರೈಸುತ್ತಿದ್ದೇವೆ‌. ಹಿಂದಿನ 60 ವರ್ಷಗಳಲ್ಲಿ ಕಾಂಗ್ರೆಸ್ ಸಾಧನೆ ಏನು ಎಂದು ಪ್ರಶ್ನಿಸಿದ ಅವರು, ಪ್ರತಿ ಗ್ರಾಮಗಳಲ್ಲಿ ಉತ್ತಮ ರಸ್ತೆ, ನೀರು, ಶೌಚಾಲಯ, ಕೋವಿಡ್ ಸಂದರ್ಭದಲ್ಲಿ ಉಚಿತ ಲಸಿಕೆ ನೀಡಿ ದೇಶದ ಜನರ ಜೀವ ಉಳಿಸಿದ್ದಾರೆ‌ ಎಂದರು.

ಏ.18ಕ್ಕೆ ನಾಮಪತ್ರ ಸಲ್ಲಿಕೆ:

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಏ.18ರಂದು ನಾಮಪತ್ರ ಸಲ್ಲಿಸಲಾಗುವುದು. ಚುನಾವಣೆಗಾಗಿ ಮಾತ್ರ ಮಾತನಾಡುವ ಪಕ್ಷ, ವ್ಯಕ್ತಿ ನಾವಲ್ಲ. ಜನರ ಮಧ್ಯೆ ಇದ್ದು ಅಭಿವೃದ್ಧಿ. ದೇಶದ ರಕ್ಷಣೆ. ಜನಪರ ಯೋಜನೆಗಳ ಚಿಂತನೆ ನಡೆಸುವ ಪಕ್ಷ ಬಿಜೆಪಿ. ಇದರ ಕಾರ್ಯಕರ್ತರಾಗಿರುವ ನಾವು ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಂಬಲಿಸಬೇಕಿದೆ. ನಮ್ಮ ಪಕ್ಷದ ಹಿರಿಯರೊಬ್ಬರು ಹಿಂದೂ ಧರ್ಮ ಉಳಿಸಲು ಮೋದಿಯವರ ಭಾವಚಿತ್ರ ಬಳಸಿ ಚುನಾವಣೆಗೆ ನಿಂತಿದ್ದಾರೆ‌‌. ಇದಕ್ಕೆ ಯಾರು ತಲೆಕೆಡಿಸಿಕೊಳ್ಳೋದು ಬೇಡ ಎಂದು ತಿಳಿಸಿದರು.

ವಿಧಾನ ಪರಿಷತ್‌ ಸದಸ್ಯೆ ಭಾರತಿ ಶೆಟ್ಟಿ ಮಾತನಾಡಿ, ಪ್ರದಾನಿ ನರೇಂದ್ರ ಮೋದಿಯವರು ಮಹಿಳಾ ಸಬಲೀಕರಣಕ್ಕಾಗಿ ಅನೇಕ ಯೋಜನೆ ಜಾರಿಗೆ ತಂದಿದ್ದಾರೆ. ಇಂತಹ ವ್ಯಕ್ತಿ ಮೋದಿಯವರು ಮತ್ತೆ ಪ್ರದಾನಿಯಾಗಬೇಕು ಎಂದರು.

ವೇದಿಕೆಯಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ. ಪ್ರಮುಖರಾದ ಜ್ಯೋತಿ ಪ್ರಕಾಶ್, ಮೋಹನ್ ರೆಡ್ಡಿ, ಗಾಯತ್ರಿ, ರಶ್ಮಿ ಶ್ರೀನಿವಾಸ್, ಯಶೋದಾ, ಸುರೇಖಾ ಮುರಳೀಧರ್, ರೇಣುಕಾ, ಅನಿತಾ ರವಿಶಂಕರ್ ಸೇರಿದಂತೆ ಹಲವರಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ