ಫೆ.2ರಂದು ಮನ್ಮುಲ್ ನಿರ್ದೇಶಕ ಸ್ಥಾನಕ್ಕೆ ಚುನಾವಣೆ

KannadaprabhaNewsNetwork |  
Published : Dec 30, 2024, 01:03 AM IST
29ಕೆಎಂಎನ್ ಡಿ12 | Kannada Prabha

ಸಾರಾಂಶ

ಜೆಡಿಎಸ್ ವರಿಷ್ಠರು ಮತ್ತು ನಾವುಗಳು ನಾಲ್ವರು ಆಕಾಂಕ್ಷಿತರೊಂದಿಗೆ ಮಾತುಕತೆ ನಡೆಸುವ ಮೂಲಕ ಅಂತಿಮವಾಗಿ ಮಹೇಶ್ ಅವರನ್ನು ಆಯ್ಕೆ ಮಾಡಲಾಗಿದೆ. ಉಳಿದ ಆಕಾಂಕ್ಷಿತರಿಗೆ ಮುಂದಿನ ದಿನಗಳಲ್ಲಿ ಬೇರೆ ಅವಕಾಶಗಳನ್ನು ಕಲ್ಪಿಸುವ ಸಂಬಂಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮಾತುಕತೆ ನಡೆಸುವುದರೊಂದಿಗೆ ಕಣದಿಂದ ಹಿಂದೆ ಸರಿಯುವಂತೆ ಮನವಿ ಮಾಡಿದ್ದಾರೆ.

ಕನ್ನಡಪ್ರಭ ವಾರ್ತೆ ಮದ್ದೂರು

ಮನ್ಮುಲ್ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಮುಂದಿನ ವರ್ಷದ ಫೆ.2ರಂದು ನಡೆಯುವ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಎಸ್.ಮಹೇಶ್ ಅವರನ್ನು ಅಧಿಕೃತ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗುವುದು ಎಂದು ಮಾಜಿ ಸಚಿವ ಡಿ. ಸಿ.ತಮ್ಮಣ್ಣ ಹಾಗೂ ಮಾಜಿ ಶಾಸಕ ಸುರೇಶ್ ಗೌಡ ಹೇಳಿದರು.ಪಟ್ಟಣದ ಲೀಲಾವತಿ ಬಡಾವಣೆಯ ತಮ್ಮ ನಿವಾಸದಲ್ಲಿ ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ಮಾಜಿ ಶಾಸಕ ಸುರೇಶ್ ಗೌಡ ಅವರು ಜೆಡಿಎಸ್ ಅಭ್ಯರ್ಥಿ ಎಸ್.ಮಹೇಶ್ ಅವರ ಹೆಸರನ್ನು ಅಂತಿಮವಾಗಿ ಪ್ರಕಟಿಸಿದರು.

ಮನ್ಮುಲ್ ಚುನಾವಣೆ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಲು ಮದ್ದೂರಿನಿಂದ ಎಸ್.ಮಹೇಶ್, ಕೋಣಸಾಲೆ ಮಧು, ರವಿ ಚನ್ನಸಂದ್ರ ಹಾಗೂ ಮಾಜಿ ನಿರ್ದೇಶಕ ಅಜ್ಜಹಳ್ಳಿ ಪಿ.ರಾಮೇಗೌಡ ಅವರು ಪ್ರಬಲ ಆಕಾಂಕ್ಷಿತರಾಗಿದ್ದರು ಎಂದರು. ಜೆಡಿಎಸ್ ವರಿಷ್ಠರು ಮತ್ತು ನಾವುಗಳು ನಾಲ್ವರು ಆಕಾಂಕ್ಷಿತರೊಂದಿಗೆ ಮಾತುಕತೆ ನಡೆಸುವ ಮೂಲಕ ಅಂತಿಮವಾಗಿ ಮಹೇಶ್ ಅವರನ್ನು ಆಯ್ಕೆ ಮಾಡಲಾಗಿದೆ. ಉಳಿದ ಆಕಾಂಕ್ಷಿತರಿಗೆ ಮುಂದಿನ ದಿನಗಳಲ್ಲಿ ಬೇರೆ ಅವಕಾಶಗಳನ್ನು ಕಲ್ಪಿಸುವ ಸಂಬಂಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮಾತುಕತೆ ನಡೆಸುವುದರೊಂದಿಗೆ ಕಣದಿಂದ ಹಿಂದೆ ಸರಿಯುವಂತೆ ಮನವಿ ಮಾಡಿದ್ದಾರೆ ಎಂದರು.

ಬಿಜೆಪಿಯಿಂದ ಮನ್ಮುಲ್ ಮಾಜಿ ನಿರ್ದೇಶಕ ಎಸ್‍.ಪಿ.ಸ್ವಾಮಿ ಸ್ಪರ್ಧಿಸುವುದು ಬಹುತೇಕ ಖಚಿತ. ಮಹೇಶ್ ಹಾಗೂ ಎಸ್. ಪಿ.ಸ್ವಾಮಿ ಎನ್‌ಡಿಎ ಬೆಂಬಲಿತ ಅಭ್ಯರ್ಥಿಗಳಾಗಿ ಮತಯಾಚನೆ ಮಾಡಲಿದ್ದಾರೆ. ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದು ಮಾಜಿ ಶಾಸಕ ಸುರೇಶ್ ಗೌಡ ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿಳಿಯಪ್ಪ, ಯುವ ಘಟಕದ ಕಾರ್ಯಾಧ್ಯಕ್ಷ ನಗರಕೆರೆ ಸಂದೀಪ, ಮುಖಂಡರಾದ ಹೊಸಕೆರೆ ದಯಾನಂದ, ಶಿವಣ್ಣ, ಗುರುದೇವರಹಳ್ಳಿ ಅರವಿಂದ, ಸಬ್ಬನಹಳ್ಳಿ ಹೊನ್ನೇಗೌಡ, ಮಾದರಹಳ್ಳಿ ಉಮೇಶ, ಯೋಗೇಶ, ಚಾಮನಹಳ್ಳಿ ರಾಕೇಶ, ಕೆ.ಟಿ.ಸುರೇಶ್ ಹಾಗೂ ಅಣ್ಣೂರು ವಿನು ಮತ್ತಿತರರು ಇದ್ದರು.ಮಹೇಶ್ ಪರ ತಮ್ಮಣ್ಣ ಮಾತಯಾಚನೆ

ಮದ್ದೂರು: ಮನ್ಮುಲ್ ನಿರ್ದೇಶಕ ಸ್ಥಾನದ ಎನ್ಡಿಎ ಪಕ್ಷದ ಜೆಡಿಎಸ್ ಅಭ್ಯರ್ಥಿ ಎಸ್.ಮಹೇಶ್ ಪರ ಭಾನುವಾರ ತಾಲೂಕಿನ ನಗರಕೆರೆ ಗ್ರಾಮದಲ್ಲಿ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಮತಯಾಚನೆ ಮಾಡಿದರು.ನಂತರ ಎಸ್‌.ಮಹೇಶ್ ಅವರನ್ನು ಚುನಾವಣೆಯಲ್ಲಿ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲು ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರು ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘದ ಜನಪ್ರತಿನಿಧಿಗಳು ಪ್ರಾಮಾಣಿಕವಾಗಿ ಶ್ರಮಿಸಬೇಕೆಂದು ಮನವಿ ಮಾಡಿದರು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ