ಚುನಾವಣೆ: ಎಚ್ಡಿಕೆ, ವಿವೇಕಾನಂದರ ಗೆಲುವು ಖಚಿತ

KannadaprabhaNewsNetwork |  
Published : Jun 04, 2024, 12:30 AM IST
3ಕೆಎಂಎನ್ ಡಿ18 | Kannada Prabha

ಸಾರಾಂಶ

ಮಂಡ್ಯ ಜಿಲ್ಲೆಯ ಮದ್ದೂರು, ಮಳವಳ್ಳಿ, ಮಂಡ್ಯ, ನಾಗಮಂಗಲ, ಕೆ.ಆರ್.ಪೇಟೆ, ಶ್ರೀರಂಗಪಟ್ಟಣ ಹಾಗೂ ಪಾಂಡವಪುರ ತಾಲೂಕುಗಳಲ್ಲಿ ಪ್ರವಾಸ ನಡೆಸಿದಾಗ ಕ್ಷೇತ್ರದ ಮತದಾರರಿಂದ ಉತ್ತಮ ಪ್ರತಿಕ್ರಿಯೆ ಮೂಡಿಬಂದಿದೆ. ಹೀಗಾಗಿ ಮೈತ್ರಿ ಅಭ್ಯರ್ಥಿ ಸುಲಭವಾಗಿ ಗೆಲುವು ಸಾಧಿಸಲಿದ್ದಾರೆ.

ಕನ್ನಡಪ್ರಭ ವಾರ್ತೆ ಪಾಂಡವಪುರ

ಲೋಕಸಭಾ ಚುನಾವಣೆ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರದ ಕೆ.ವಿವೇಕಾನಂದ ಅವರು ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಎನ್.ಎಸ್.ಇಂದ್ರೇಶ್ ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದ ಮತಗಟ್ಟೆ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಶಿಕ್ಷಕ ಸಮುದಾಯ ಹಾಗೂ ಪಕ್ಷದ ಕಾರ್ಯಕರ್ತರಿಂದ ಮತದಾನದ ಮಾಹಿತಿ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆಯಲ್ಲಿ ಮತದಾರರು ಮೈತ್ರಿ ಅಭ್ಯರ್ಥಿಗೆ ಒಲವು ವ್ಯಕ್ತಪಡಿಸಿದ್ದು, ಕೆ.ವಿವೇಕಾನಂದ ಅವರು ಮೊದಲ ಪ್ರಾಶಸ್ತ್ಯದ ಮತಗಳಿಂದ ಶೇ.100ರಷ್ಟು ಗೆಲುವು ಸಾಧಿಸಲಿದ್ದಾರೆ ಎಂದರು.

ಜಿಲ್ಲೆಯ ಮದ್ದೂರು, ಮಳವಳ್ಳಿ, ಮಂಡ್ಯ, ನಾಗಮಂಗಲ, ಕೆ.ಆರ್.ಪೇಟೆ, ಶ್ರೀರಂಗಪಟ್ಟಣ ಹಾಗೂ ಪಾಂಡವಪುರ ತಾಲೂಕುಗಳಲ್ಲಿ ಪ್ರವಾಸ ನಡೆಸಿದಾಗ ಕ್ಷೇತ್ರದ ಮತದಾರರಿಂದ ಉತ್ತಮ ಪ್ರತಿಕ್ರಿಯೆ ಮೂಡಿಬಂದಿದೆ. ಹೀಗಾಗಿ ಮೈತ್ರಿ ಅಭ್ಯರ್ಥಿ ಸುಲಭವಾಗಿ ಗೆಲುವು ಸಾಧಿಸಲಿದ್ದಾರೆ ಎಂದರು.

1.25 ಲಕ್ಷ ಮತಗಳಿಂದ ಕುಮಾರಸ್ವಾಮಿ ಗೆಲುವು:

ಲೋಕಸಭೆ ಚುನಾವಣೆ ಎನ್ ಡಿಎ ಅಭ್ಯರ್ಥಿ (ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಅಭ್ಯರ್ಥಿ) ಎಚ್.ಡಿ.ಕುಮಾರಸ್ವಾಮಿ ಗೆಲುವು ಈಗಾಗಲೇ ನಿರ್ಧಾರವಾಗಿದೆ. ಫಲಿತಾಂಶದ ನಂತರ 1.25 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ವೇಳೆ ಮೈಷುಗರ್ ಮಾಜಿ ಅಧ್ಯಕ್ಷ ಜೆ.ಶಿವಲಿಂಗೇಗೌಡ, ಜಿಪಂ ಮಾಜಿ ಸದಸ್ಯ ಸಿ.ಅಶೋಕ್, ಜೆಡಿಎಸ್ ಮುಖಂಡರಾದ ಶ್ಯಾದನಹಳ್ಳಿ ಚಲುವರಾಜು, ದೇಶಹಳ್ಳಿ ಪ್ರಭಾಕರ್, ಗುರುಸ್ವಾಮಿ, ಜೆಡಿಎಸ್ ಅಧ್ಯಕ್ಷ ಬೆಳ್ಳಾಳೆ ಮಲ್ಲೇಶ್, ಬಿಜೆಪಿ ಕ್ಷೇತ್ರಧ್ಯಕ್ಷ ನೀಲನಹಳ್ಳಿ ಧನಂಜಯ, ಮಾಜಿ ಅಧ್ಯಕ್ಷ ಎಲ್.ಅಶೋಕ್, ರೈತಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಕನ್ನಂಬಾಡಿ ಸುರೇಶ್, ಮುಖಂಡರಾದ ಎಸ್ ಎನ್ ಟಿ ಸೋಮಶೇಖರ್, ಕೆ.ಎಲ್.ಆನಂದ್, ಕಾಂತರಾಜು, ಸೋಮಚಾರಿ, ಎಚ್.ಡಿ.ಶ್ರೀಧರ್, ರಾಮಲಿಂಗಂ, ಬಳಿಘಟ್ಟ ಅಶೋಕ್, ಶ್ರೀನಿವಾಸ್ ನಾಯಕ, ಎಲೆಕೆರೆ ಈರೇಗೌಡ, ಅರಕನಕೆರೆ ಪ್ರಕಾಶ್, ಬೀರಶೆಟ್ಟಹಳ್ಳಿ ಭಾಸ್ಕರ್, ಮಧು, ಮಲ್ಲೇಶ್‌ ಇತರರಿದ್ದರು.

PREV

Recommended Stories

ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''