ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಈ ವೇಳೆ ಜಿ.ಪಂ. ಸಿಇಒ ಸ್ನೇಹಲ್ ಸುಧಾಕರ ಲೋಖಂಡೆ ಮಾತನಾಡಿ, ಚುನಾವಣೆ ದೊಡ್ಡ ಪರ್ವ. ಮತದಾನ ನಮ್ಮೆಲ್ಲರ ಹಕ್ಕು. ಭದ್ರಾವತಿಯಲ್ಲಿ ಈ ಬಾರಿ ಮತದಾನದ ಪ್ರಮಾಣ ಹೆಚ್ಚಬೇಕು. ತಾವು ಮತದಾನ ಮಾಡಿ ಅಕ್ಕಪಕ್ಕದವರೂ ಮತದಾನ ಮಾಡುವಂತೆ ಪ್ರೇರೇಪಿಸಬೇಕೆಂದು ಅವರು ಶೇ.100 ರಷ್ಟು ಮತದಾನ ಮಾಡುವಂತೆ ಮನವಿ ಮಾಡಿದರು.
ಶಿವಮೊಗ್ಗ ಎಸಿ ಸತ್ಯನಾರಾಯಣ ಮಾತನಾಡಿ, ಮತದಾರರು ಯಾವುದೇ ಆಸೆ, ಆಮಿಷಗಳಿಗೆ ಗುರಿಯಾಗದೆ, ನಿರ್ಭೀತವಾಗಿ ಮತದಾನ ಮಾಡುವ ಮೂಲಕ ಸುಭದ್ರ ಪ್ರಜಾಪ್ರಭುತ್ವ ರೂಪಿಸಲು ಅನುವು ಮಾಡಿಕೊಡಬೇಕು ಎಂದರು.ಜಿ.ಪಂ. ಸಿಪಿಒ ಗಾಯತ್ರಿ ಮಾತನಾಡಿ, ಮತದಾನ ನಮ್ಮೆಲ್ಲರ ಸಮಾನ ಹಕ್ಕು. ಯಾರೂ ಕೂಡ ಮತದಾನ ಮಾಡಲು ಮರಿಯಬೇಡಿ ಎಂದರು.
ಪೆರೇಡ್ ಕಾರ್ಯಕ್ರಮದಲ್ಲಿ ಗೃಹ ರಕ್ಷಕ ದಳದವರು ನಗರದ ಮುಖ್ಯ ರಸ್ತೆಗಳು ಮತ್ತು ವೃತ್ತಗಳಲ್ಲಿ ಪಿರಮಿಡ್ ರಚನೆ ಮಾಡುವ ಮೂಲಕ ಎಲ್ಲರ ಗಮನ ಸೆಳೆದರು. ಮಾನವ ಸರಪಳಿ ಸೇರಿದಂತೆ ಚುನಾವಣೆ ಗೀತೆ ಗಾಯನ ಮಾಡಲಾಯಿತು.
ಗೃಹ ರಕ್ಷಕ ದಳದ ಕಮಾಂಡೆಂಟ್ ಡಾ.ಚೇತನ್, ಭದ್ರಾವತಿ ಇಒ ಗಂಗಣ್ಣ, ನಗರಸಭೆ ಆಯುಕ್ತರಾದ ಚನ್ನಪ್ಪ, ಸುಹಾಸಿನಿ, ಬಿಇಓ, ಇತರೆ ಇಲಾಖೆ ಅಧಿಕಾರಿಗಳು, ಸ್ವೀಪ್ ತಂಡದವರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಸಾರ್ವಜನಿಕರು ಪಾಲ್ಗೊಂಡಿದ್ದರು.