ಅ.28ಕ್ಕೆ ಸರ್ಕಾರಿ ನೌಕರರ ಸಂಘದ ನಿರ್ದೇಶಕರ ಚುನಾವಣೆ

KannadaprabhaNewsNetwork |  
Published : Oct 08, 2024, 01:13 AM IST
ಹೊಸದುರ್ಗ ಪಟ್ಟಣದ ಸರ್ಕಾರಿ ನೌಕರರ ಸಂಘದಲ್ಲಿ ಸೋಮವಾರದಂದು ತಾಲೂಕುಶಾಖೆಗಳ ಚುನಾವಣೆ ಪ್ರಕ್ರಿಯೆ ಕುರಿತು ಚುನಾವಣಾಧಿಕಾರಿ ಬಿ.ಕೆ.ನಾಗರಾಜಪ್ಪ ಮಾತನಾಡಿದರು. | Kannada Prabha

ಸಾರಾಂಶ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-29ನೇ ಅವಧಿಯ ತಾಲೂಕು ಶಾಖೆಗಳ ನಿರ್ದೇಶಕರ ಚುನಾವಣಾ ವೇಳಾಪಟ್ಟಿ ನಿಗದಿ ಪಡಿಸಲಾಗಿದೆ ಎಂದು ತಾಲೂಕು ಚುನಾವಣಾಧಿಕಾರಿ ಬಿ.ಕೆ. ನಾಗರಾಜಪ್ಪ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಹೊಸದುರ್ಗ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-29ನೇ ಅವಧಿಯ ತಾಲೂಕು ಶಾಖೆಗಳ ನಿರ್ದೇಶಕರ ಚುನಾವಣಾ ವೇಳಾಪಟ್ಟಿ ನಿಗದಿ ಪಡಿಸಲಾಗಿದೆ ಎಂದು ತಾಲೂಕು ಚುನಾವಣಾಧಿಕಾರಿ ಬಿ.ಕೆ. ನಾಗರಾಜಪ್ಪ ತಿಳಿಸಿದ್ದಾರೆ.ಪಟ್ಟಣದ ಸರ್ಕಾರಿ ನೌಕರರ ಸಂಘದ ಕಚೇರಿಯಲ್ಲಿ ಸೋಮವಾರ ಹೇಳಿಕೆ ನೀಡಿರುವ ಅವರು, ರಾಜ್ಯ ಚುನಾವಣಾಧಿಕಾರಿಗಳ ಅಧಿಸೂಚನೆಯನ್ವಯ ಚುನಾವಣಾ ವೇಳಾಪಟ್ಟಿ ನಿಗದಿ ಪಡಿಸಲಾಗಿದೆ. ತಾಲೂಕು ಶಾಖೆಗಳ ಕಾರ್ಯಕಾರಿ ಸಮಿತಿಯ ನಿರ್ದೇಶಕರ ಸ್ಥಾನದ ಚುನಾವಣೆಗಳು ಅಕ್ಟೋಬರ್ 9 ರಿಂದ 28ರ ವರೆಗೆ ನಡೆಯಲಿವೆ ಎಂದರು.

ತಾಲೂಕು ಶಾಖೆಯ ಅಧ್ಯಕ್ಷ, ಖಜಾಂಚಿ, ರಾಜ್ಯ ಪರಿಷತ್ ಸದಸ್ಯರ ಸ್ಥಾನದ ಚುನಾವಣೆಗಳನ್ನು ಅಕ್ಟೋಬರ್ 30 ರಿಂದ ನ. 16ರ ವರೆಗೆ ನಿಗದಿಪಡಿಸಲಾಗಿದೆ. ತಾಲೂಕು ಶಾಖೆಗಳ ನಿರ್ದೇಶಕರ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಅ.9 ರಿಂದ 18ರ ವರೆಗೆ ನಡೆಯಲಿವೆ. ಅ.19 ರಂದು ನಾಮಪತ್ರ ಪರಿಶೀಲನೆ ನಡೆದು ಅರ್ಹ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗುವುದು ಎಂದು ಮಾಹಿತಿ ನೀಡಿದರು.

ಉಮೇದುವಾರಿಕೆ ವಾಪಸ್ಸು ಪಡೆಯಲು ಅ.21 ಕೊನೆಯ ದಿನವಾಗಿದೆ. ಅ.28 ರಂದು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಮತದಾನ ನಡೆಯಲಿದೆ. ಅಂದು ಸಂಜೆ ಮತಗಳ ಎಣಿಕೆ ನಡೆದು ಅಂತಿಮ ಫಲಿತಾಂಶ ಪ್ರಕಟಿಸಲಾಗುವುದು ಎಂದು ತಿಳಿಸಿದರು.ತಾಲೂಕು ಶಾಖೆಯ ಅಧ್ಯಕ್ಷ, ಖಜಾಂಚಿ, ರಾಜ್ಯ ಪರಿಷತ್ ಸದಸ್ಯರ ಚುನಾವಣೆಯು ಅ.30 ರಿಂದ ನ.16 ರವರೆಗೆ ನಡೆಯಲಿದೆ. ನಿರ್ದೇಶಕರ ಚುನಾವಣೆಯಲ್ಲಿ ಆಯ್ಕೆಯಾದ 34 ಸದಸ್ಯರಿಗೆ ಮಾತ್ರ ಮತದಾನ ಮಾಡಲು ಅವಕಾಶ ಇರುತ್ತದೆ ಎಂದು ತಿಳಿಸಿದ್ದಾರೆ.

ತಾಲೂಕಿನಲ್ಲಿ 33 ಇಲಾಖೆಗಳಿದ್ದು, 27 ಮತ ಕ್ಷೇತ್ರಗಳನ್ನಾಗಿ ವಿಂಗಡಣೆ ಮಾಡಲಾಗಿದೆ. ಒಟ್ಟು 34 ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. 1741ಆರ್ಹ ಮತದಾರರಿದ್ದಾರೆ. ಅಕ್ಟೋಬರ್ 9 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಲಿದೆ. ಮತದಾನ ಮಾಡುವ ದಿನದಂದು ಮತದಾರರು ಇಲಾಖೆಯಿಂದ ನೀಡಿರುವ ಸರ್ಕಾರಿ ನೌಕರರ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಹೊಂದಿರಬೇಕು ಎಂದು ತಿಳಿಸಿದರು.

ಈ ವೇಳೆ ಸಹಾಯಕ ಚುನಾವಣಾಧಿಕಾರಿಗಳಾದ ಆರ್. ಜಯಣ್ಣ, ಎನ್.ಎಸ್. ವೆಂಕಟೇಶ್ ಇದ್ದರು.

PREV

Recommended Stories

ವಿಶ್ವದಲ್ಲೇ ಮೊದಲ ಬಾರಿ ಬನ್ನೇರುಘಟ್ಟದಲ್ಲಿ ಕರಡಿಗೆ ಕೃತಕ ಕಾಲು ಜೋಡಣೆ
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ