ಹಣಬಲ- ತೋಳ್ಬಲದ ನಡುವೆ ಸರ್ಕಾರಿ ನೌಕರರ ಸಂಘದ ಚುನಾವಣೆ: ಶಿವಸ್ವಾಮಿ

KannadaprabhaNewsNetwork |  
Published : Nov 27, 2024, 01:00 AM IST
26ಎಚ್ಎಸ್ಎನ್19 : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳು. | Kannada Prabha

ಸಾರಾಂಶ

ಈ ಬಾರಿಯ ಸರ್ಕಾರಿ ನೌಕರರ ಸಂಘದ ಚುನಾವಣೆ ಬಂಡವಾಳ ಶಾಹಿಗಳು ಹಾಗೂ ಸ್ವಾಭಿಮಾನಿಗಳ ನಡುವೆ ನಡೆಯುತ್ತಿರುವ ಚುನಾವಣೆಯಾಗಿದೆ.

ಕನ್ನಡಪ್ರಭ ವಾರ್ತೆ ಹಾಸನ

ಈ ಬಾರಿ ನಡೆಯುತ್ತಿರುವ ಸರ್ಕಾರಿ ನೌಕರರ ಸಂಘದ ಚುನಾವಣೆಯು ಬಂಡವಾಳ ಶಾಹಿಗಳ ಹಣಬಲ ಹಾಗೂ ತೋಳ್ಬಲದ ನಡುವೆ ಸ್ಪರ್ಧೆ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಸಮಸ್ತ ನೌಕರರ ಅಭಿಪ್ರಾಯ ಸಂಗ್ರಹಿಸಿ ಎಲ್ಲರ ಸಹಕಾರದಲ್ಲಿ ೨೦೨೪-೨೯ನೇ ಸಾಲಿನ ನೌಕರರ ಸಂಘದ ಚುನಾವಣೆಯಲ್ಲಿ ಕೆ.ಎಂ. ಶ್ರೀನಿವಾಸ್ ಮತ್ತು ನಾನು ಇಬ್ಬರೂ ಜಂಟಿಯಾಗಿ ತಂಡದೊಂದಿಗೆ ಸ್ಪರ್ಧೆ ಮಾಡುತ್ತಿದ್ದು, ನಾನು ಈ ಬಾರಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದು, ಎಲ್ಲಾ ಸರಕಾರಿ ನೌಕರರು ಬೆಂಬಲಿಸುವಂತೆ ಜಿಲ್ಲಾ ಸರಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಶಿವಸ್ವಾಮಿ ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿ, ಸರ್ಕಾರಿ ನೌಕರರ ನಾಡಿಮಿಡಿತ ಅರಿತಿರುವ ನಾನು ಈ ಬಾರಿ ಸಂಘದ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ಎಲ್ಲಾ ನೌಕರರು ತನ್ನನ್ನು ಬೆಂಬಲಿಸಿ ಸಹಕಾರ ನೀಡಬೇಕು. ಈ ಹಿಂದೆ ನಡೆದ ಹಾಸನ ಜಿಲ್ಲಾ ಸರ್ಕಾರಿ ನೌಕರರ ಸಂಘದ ಚುನಾವಣೆ ವೇಳೆ ಎರಡನೇ ಹಂತದಲ್ಲಿ ಅಧ್ಯಕ್ಷ ಸ್ಥಾನವನ್ನು ನನಗೆ ಬಿಟ್ಟುಕೊಡುವ ಬಗ್ಗೆ ಒಪ್ಪಂದ ನಡೆದಿತ್ತು. ಆದರೆ ಈ ಹಿಂದಿನ ಅಧ್ಯಕ್ಷರು ವಂಚಿಸಿ ಅನ್ಯಾಯ ಮಾಡಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ನೌಕರರು ನನ್ನ ಕೈ ಹಿಡಿಯಲಿದ್ದಾರೆ ಎಂಬ ನಿರೀಕ್ಷೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮತ್ತೊಬ್ಬ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಕೆ.ಎಂ. ಶ್ರೀನಿವಾಸ್ ಮಾತನಾಡಿ, ಈ ಬಾರಿಯ ಸರ್ಕಾರಿ ನೌಕರರ ಸಂಘದ ಚುನಾವಣೆ ಬಂಡವಾಳ ಶಾಹಿಗಳು ಹಾಗೂ ಸ್ವಾಭಿಮಾನಿಗಳ ನಡುವೆ ನಡೆಯುತ್ತಿರುವ ಚುನಾವಣೆಯಾಗಿದೆ. ಅಧ್ಯಕ್ಷರಾದವರು ಕೇಂದ್ರ ಸ್ಥಾನದಲ್ಲಿ ಇದ್ದು, ನೌಕರರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂಬುದು ಹಲವು ನೌಕರರ ಬೇಡಿಕೆಯಾಗಿದೆ. ಈ ನಿಟ್ಟಿನಲ್ಲಿ ನಮ್ಮ ತಂಡ ಉತ್ತಮವಾಗಿ ಕೆಲಸ ಮಾಡಲಿದೆ ಎಂಬ ಭರವಸೆ ನೀಡಿದರು. ಸರ್ಕಾರಿ ನೌಕರರ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಕೆಲಸ ಮಾಡುತ್ತಿವೆ, ಈ ನಿಟ್ಟಿನಲ್ಲಿ ಹಣಬಲ ಹಾಗೂ ಜನಬಲದ ನಡುವೆ ನಡೆಯುತ್ತಿರುವ ಈ ಚುನಾವಣೆಯಲ್ಲಿ ತಮ್ಮೆಲ್ಲರ ಬೆಂಬಲ ನಮಗೆ ಬಹು ಮುಖ್ಯ ಎಂದು ಸರ್ಕಾರಿ ನೌಕರರ ಬಳಿ ಅವರು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಸರಕಾರಿ ನೌಕರರ ಸಂಘದ ಮಧು, ರಘು, ಪ್ರದೀಪ್, ರಾಜು, ವಿಶ್ವನಾಥ್, ಯಶೋಧರ್, ಗಿರೀಶ್ ಇತರರು ಉಪಸ್ಥಿತರಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ