ಹುಬ್ಬಳ್ಳಿ: ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಹಾಗೂ ಉಪಮೇಯರ್ ಚುನಾವಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು ಜೂ. 30ರಂದು ಚುನಾವಣೆ ನಡೆಯಲಿದೆ.
ಆಕಾಂಕ್ಷಿಗಳಿಂದ ಕಸರತ್ತು:
ಚುನಾವಣೆ ಘೋಷಣೆಯಾಗಿದ್ದರಿಂದ ಆಕಾಂಕ್ಷಿಗಳು ತೆರೆಮರೆಯಲ್ಲಿ ಕಸರತ್ತು ಆರಂಭಿಸಿದ್ದಾರೆ. 82 ಸದಸ್ಯ ಬಲದ ಪಾಲಿಕೆಯಲ್ಲಿ 39 ಬಿಜೆಪಿ, 33 ಕಾಂಗ್ರೆಸ್, 3 ಎಐಎಂಐಎಂ, 6 ಪಕ್ಷೇತರ ಮತ್ತು ಒಬ್ಬ ಜೆಡಿಎಸ್ ಸದಸ್ಯರಿದ್ದಾರೆ. ಪಕ್ಷೇತರರಲ್ಲಿ ಮೂವರು ಬಿಜೆಪಿಗೆ ಬೆಂಬಲ ನೀಡಿದ್ದಾರೆ.ಮೇಯರ್ ಸ್ಥಾನ ಸಾಮಾನ್ಯ ವರ್ಗದ ಮಹಿಳೆಗೆ ಮೀಸಲಾಗಿದ್ದು ಬಿಜೆಪಿಯಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ. ಪಾಲಿಕೆಯಲ್ಲಿ ಬಿಜೆಪಿಯ 15 ಸದಸ್ಯೆಯರು ಇದ್ದಾರೆ. ಇವರಲ್ಲಿ ಪ್ರೀತಿ ಖೋಡೆ, ಪೂಜಾ ಶೇಜವಾಡಕರ್, ರಾಧಾಬಾಯಿ ಸಫಾರೆ, ಮೀನಾಕ್ಷಿ ವಂಟಮೂರಿ, ರೂಪಾ ಶೆಟ್ಟಿ, ಶೀಲಾ ಕಾಟ್ಕರ್ ಪ್ರಮುಖ ಆಕಾಂಕ್ಷಿಗಳು.
ಆಕಾಂಕ್ಷಿಗಳಲ್ಲಿ ರಾಧಾಬಾಯಿ ಸಫಾರೆ ಈ ಹಿಂದೆ ಒಮ್ಮೆ ಮೇಯರ್ ಆಗಿದ್ದಾರೆ. ಉಳಿದವರು ಮೊದಲ ಬಾರಿಗೆ ಪಾಲಿಕೆಗೆ ಆಯ್ಕೆ ಆಗಿದ್ದಾರೆ. ಉಪಮೇಯರ್ ಸ್ಥಾನಕ್ಕೆ ಸಂತೋಷ್ ಚವ್ಹಾಣ್, ಶಂಕರ ಶೆಳಕೆ ಪ್ರಮುಖ ಆಕಾಂಕ್ಷಿಗಳಾಗಿದ್ದಾರೆ.