ತಾಲೂಕು ಬಂಟರ ಸಂಘದ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ

KannadaprabhaNewsNetwork |  
Published : Jun 10, 2025, 08:07 AM IST
ನರಸಿಂಹರಾಜಪುರ ಪ್ರವಾಸಿ ಮಂದಿರದಲ್ಲಿ ನಡೆದ ತಾಲೂಕು ಬಂಟರ ಸಂಘದ ಸಭೆಯನ್ನು ಸಂಘದ ಅಧ್ಯಕ್ಷ  ಧರ್ಮರಾಜ್ ಶೆಟ್ಟಿ ಉದ್ಘಾಟಿಸಿದರು.ಬಂಟರ ಸಮುದಾಯದ ಹಿರಿಯರಾದ ಲಕ್ಷ್ಮಣ ಶೆಟ್ಟಿ,ರವೀಂದ್ರ ಶೆಟ್ಟಿ, ಸುಂದರಶೆಟ್ಟಿ, ರಮೇಶ ಶೆಟ್ಟಿ ಮತ್ತಿತರರು ಇದ್ದರು. | Kannada Prabha

ಸಾರಾಂಶ

ನರಸಿಂಹರಾಜಪುರ, ತಾಲೂಕು ಬಂಟರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಭಾನುವಾರ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ನಡೆದು ನೂತನ ಅಧ್ಯಕ್ಷರಾಗಿ ಪ್ರಶಾಂತ ಎಲ್. ಶೆಟ್ಟಿ ಆಯ್ಕೆಯಾಗಿದ್ದಾರೆ.

- ನೂತನ ಅಧ್ಯಕ್ಷರಾಗಿ ಪ್ರಶಾಂತ್ ಎಲ್. ಶೆಟ್ಟಿ ಆಯ್ಕೆ

ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ

ತಾಲೂಕು ಬಂಟರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಭಾನುವಾರ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ನಡೆದು ನೂತನ ಅಧ್ಯಕ್ಷರಾಗಿ ಪ್ರಶಾಂತ ಎಲ್. ಶೆಟ್ಟಿ ಆಯ್ಕೆಯಾಗಿದ್ದಾರೆ.

ಸಭೆ ಅಧ್ಯಕ್ಷತೆ ವಹಿಸಿದ್ದ ತಾಲೂಕು ಬಂಟರ ಸಂಘದ ಅಧ್ಯಕ್ಷ ಧರ್ಮರಾಜ್ ಮಾತನಾಡಿ, 2009 ರಲ್ಲಿ ತಾಲೂಕು ಬಂಟರ ಸಂಘವನ್ನು ಪ್ರಾರಂಭಿಸಲಾಯಿತು. ಬಂಟರ ಸಮುದಾಯದಲ್ಲಿ ಬಡವರೇ ಹೆಚ್ಚಾಗಿದ್ದಾರೆ. ಬಂಟರ ಸಮುದಾಯ ದವರನ್ನು ಸಂಘಟಿಸಿ ಸಂಘ ರಚಿಸಲಾಯಿತು. ಬಂಟರ ಸಂಘಕ್ಕೆ ನಿವೇಶನ ಖರೀದಿ ಮಾಡಲಾಗಿದೆ. ಹೊಸ ಕಾರ್ಯಕಾರಿ ಸಮಿತಿಯವರು ಆ ನಿವೇಶನದಲ್ಲಿ ನೂತನ ಸಮುದಾಯ ಭವನ ಕಟ್ಟಬಹುದು.ಯುವಕರು ಸಂಘವನ್ನು ಮುನ್ನೆಡಸಬೇಕು ಎಂದು ಕರೆ ನೀಡಿದರು.

ಮುಂದಿನ 3 ವರ್ಷದ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಶಾಂತ್ ಎಲ್‌. ಶೆಟ್ಟಿ ಮಾತನಾಡಿ, ಹಿರಿಯರ ಮಾರ್ಗ ದರ್ಶನದಲ್ಲಿ ಬಂಟರ ಸಂಘವನ್ನು ಮುನ್ನಡೆಸುತ್ತೇವೆ. ಯಾವುದೇ ಸಮುದಾಯ ಅಭಿವೃದ್ಧಿ ಹೊಂದಬೇಕಾದರೆ ಸಂಘಟಿತ ರಾಗಬೇಕು. ಒಗ್ಗಟ್ಟಿನಲ್ಲಿ ಬಲವಿದೆ. ನನಗೆ ಕೊಟ್ಟಿರುವ ಜವಾಬ್ದಾರಿಯನ್ನು ಎಲ್ಲರ ಸಹಕಾರದಿಂದ ನಿರ್ವಹಿಸುತ್ತೇನೆ ಎಂದರು. ಸಭೆಯಲ್ಲಿ ಬಂಟರ ಸಮಾಜದ ಹಿರಿಯರಾದ ಲಕ್ಷ್ಮಣ ಶೆಟ್ಟಿ, ರವೀಂದ್ರ ಶೆಟ್ಟಿ, ಸುಂದರ ಶೆಟ್ಟಿ ಇದ್ದರು.

ಇದೇ ಸಂದರ್ಭದಲ್ಲಿ ಬಂಟರ ಸಂಘದ ಗೌರವಾಧ್ಯಕ್ಷರಾಗಿ ಆಯ್ಕೆಯಾದ ಧರ್ಮರಾಜ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಉದಯ ಶೆಟ್ಟಿ ಸ್ವಾಗತಿಸಿದರು. ರಮೇಶ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು .ಗಿರಿಧರ ಶೆಟ್ಟಿ ವಂದಿಸಿದರು.

ನೂತನ ಪದಾಧಿಕಾರಿಗಳು: ಗೌರವಾಧ್ಯಕ್ಷ ಧರ್ಮರಾಜ್ ಶೆಟ್ರು, ಅಧ್ಯಕ್ಷ ಪ್ರಶಾಂತ್ ಎಲ್. ಶೆಟ್ಟಿ, ಉಪಾಧ್ಯಕ್ಷ ಸುಬ್ರಮಣ್ಯ ಶೆಟ್ಟಿ, ರಾಜಶೆಟ್ಟಿ, ಕಾರ್ಯದರ್ಶಿ ಮಧು ಶೆಟ್ಟಿ, ಸಹ ಕಾರ್ಯದರ್ಶಿ ಶರತ್ ಶೆಟ್ಟಿ, ಖಜಾಂಚಿ ರಮೇಶ ಶೆಟ್ಟಿ, ಮಹಿಳಾ ‍‍‍ಉಪಾಧ್ಯಕ್ಷೆ- ಅಶ್ವಿನಿ ಶೆಟ್ಟಿ, ಸುಜಾತಾ ಶೆಟ್ಟಿ, ಮಹಿಳಾ ಕಾರ್ಯದರ್ಶಿಗಳು ಸುಚಿತ್ರಾ ಶೆಟ್ಟಿ, ಅನಿತಾ ದಿನೇಶ್ ಶೆಟ್ಟಿ

PREV

Recommended Stories

ತುಮಕೂರಲ್ಲಿ 20 ನವಿಲುಗಳ ಸಾವು
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ